ಕನ್ನಡ ಸಾಹಿತ್ಯ ಪರಿಷತ್ತಿಗೆ ನೂತನ ಆಡಳಿತಾಧಿಕಾರಿಯಾಗಿ ಐಎಎಸ್ ಅಧಿಕಾರಿ ಕೆ ಎ ದಯಾನಂದ ನೇಮಕ…..
1 min read
ಅವೀನ್ ಟಿವಿ ಸುದ್ದಿಜಾಲ ✒️: ಕನ್ನಡ ಸಾಹಿತ್ಯ ಪರಿಷತ್ತಿಗೆ ನೂತನ ಆಡಳಿತಾಧಿಕಾರಿಯಾಗಿ ಐಎಎಸ್ ಅಧಿಕಾರಿ ಕೆ ಎ ದಯಾನಂದ ನೇಮಕ.
ಬೆಂಗಳೂರು ಮಾ ೦೩: ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತಾಧಿಕಾರಿಯಾಗಿ ನಿಯೋಜಿಸಿರುವ ಐಎಎಸ್ ಅಧಿಕಾರಿ ಕೆ ಎ ದಯಾನಂದ ಅವರು ಸೋಮವಾರ ತಮ್ಮ ಜವಾಬ್ದಾರಿ ಸ್ವೀಕರಿಸಿದರು.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ನಾಡೋಜ ಡಾ.ಮಹೇಶ್ ಜೋಶಿ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದರಿಂದ ಕೇಂದ್ರ ಕ ಸಾ ಪ ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ ಎಮ್ ಗಾಯತ್ರಿ ಅವರನ್ನು ಆಡಳಿತಾಧಿಕಾರಿಯಾಗಿ ಈ ಹಿಂದೆ ಸರ್ಕಾರ ನೇಮಕ ಮಾಡಿತ್ತು.
ಕೆ ಎಮ್ ಗಾಯತ್ರಿ ಅವರ ಮೂರು ತಿಂಗಳ ಅವಧಿ ಕೊನೆಗೊಂಡ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರಾದ ಐಎಎಸ್ ಅಧಿಕಾರಿ ಕೆ ಎ ದಯಾನಂದ್ ಅವರನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಸರ್ಕಾರ ನಿಯೋಜನೆ ಮಾಡಿದೆ.
•••••••••••••
ಡಿ ಎಂ ಮಂಜುನಾಥಸ್ವಾಮಿ
ಅವಿನ್ ಟಿವಿ ಸುದ್ದಿಜಾಲ …. ✒️
ಚಿಕ್ಕಮಗಳೂರು

