ನಿರುದ್ಯೋಗ ಹೆಚ್ಚಳ: ಯುವಜನ ಹೈರಾಣು…
1 min read
ನಿರುದ್ಯೋಗ ಹೆಚ್ಚಳ: ಯುವಜನ ಹೈರಾಣು
ದೇಶ ಮತ್ತು ರಾಜ್ಯದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಸರ್ಕಾರ ಗಳಿಂದ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಕೆಲಸವಾಗುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಕೋಟಿ ಕೋಟಿ ಉದ್ಯೋಗಗಳನ್ನು ಸೃಷ್ಟಿಸು ವುದಾಗಿ ಆಶ್ವಾಸನೆ ನೀಡುತ್ತವೆ. ಮತ ಪಡೆದು ಅಧಿಕಾರಕ್ಕೆ ಬಂದ ನಂತರ ಉದ್ಯೋಗ ಸೃಷ್ಟಿ ಮಾಡುವುದಿಲ್ಲ. ಇದರಿಂದ ನಿರುದ್ಯೋಗ ಸಮಸ್ಯೆ ತಾಂಡವ ವಾಡುತ್ತಿದೆ. ಶ್ರೀಮಂತರು ಮತ್ತು ರಾಜಕಾರಣಿಗಳ ಮಕ್ಕಳು ವಿದೇಶಗಳಲ್ಲಿ ವಿದ್ಯಾಭ್ಯಾಸ ಮಾಡಿ ಅಲ್ಲಿಯೇ ಉದ್ಯೋಗ ಗಿಟ್ಟಿಸಿಕೊಂಡು ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಬಡವರ ಮಕ್ಕಳು ಉನ್ನತ ಶಿಕ್ಷಣ ಅಥವಾ ವೃತ್ತಿಪರ ಶಿಕ್ಷಣ ಪಡೆದರೂ ಅರ್ಹತೆಗೆ ತಕ್ಕಂತೆ ಉದ್ಯೋಗವಿಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ಅವರ ಕುಟುಂಬಗಳಿಗೆ ಆಸರೆ ಇಲ್ಲದಂತಾಗಿದೆ. ಯುವಜನತೆ ಘನತೆಯ ಬದುಕು ನಡೆಸಲು ಉದ್ಯೋಗದ ಹಕ್ಕು ನೀಡುವುದು ಸರ್ಕಾರಗಳ ಜವಾಬ್ದಾರಿ. ಕೇಂದ್ರ ಮತ್ತು ರಾಜ್ಯ ಸರ್ಕಾರವು ಖಾಲಿ ಇರುವ ಉದ್ಯೋಗಗಳ ಭರ್ತಿಗೆ ಮುಂದಾಗಲಿ.
ಮಹೇಶ್ ಕೂದುವಳ್ಳಿ, ಚಿಕ್ಕಮಗಳೂರು

