ಬಾಳೂರು ಸಬ್ ಇನ್ ಸ್ಪೆಕ್ಟರ್ ದಿಲೀಪ್ ಕುಮಾರ್ ಬಣಕಲ್ ಠಾಣೆಗೆ ವರ್ಗಾವಣೆ.*…
1 min read
*ಬಾಳೂರು ಸಬ್ ಇನ್ ಸ್ಪೆಕ್ಟರ್ ದಿಲೀಪ್ ಕುಮಾರ್ ಬಣಕಲ್ ಠಾಣೆಗೆ ವರ್ಗಾವಣೆ.*
ಮೂಡಿಗೆರೆ: ತಾಲ್ಲೂಕಿನ ಬಾಳೂರು ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ದಿಲೀಪ್ ಕುಮಾರ್ ಅವರನ್ನು ಬಣಕಲ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.ಬಣಕಲ್ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಡಿ.ವಿ.ರೇಣುಕಾ ಚಿಕ್ಕಮಗಳೂರಿಗೆ ವರ್ಗಾವಣೆಯಾದ ಹಿನ್ನಲೆಯಲ್ಲಿ ಅವರ ತೆರವಾದ ಸ್ಥಾನಕ್ಕೆ ದಿಲೀಪ್ ಕುಮಾರ್ ಅಧಿಕಾರ ಸ್ವೀಕಾರ ಮಾಡಿದ್ದಾರೆ.ದಕ್ಷ ಹಾಗೂ ಕರ್ತವ್ಯ ನಿಷ್ಟ ಅಧಿಕಾರಿಯಾಗಿ ಬಾಳೂರಿನಲ್ಲಿ ಜನಮನ್ನಣೆ ಗಳಿಸಿದ್ದರು.ಇವರಿಗೆ ಬಾಳೂರು ಪೊಲೀಸ್ ಠಾಣೆಯ ಸಿಬ್ಬಂದಿಗಳು ಹೃದಯ ಸ್ಪರ್ಶಿ ಬೀಳ್ಕೊಡುಗೆ ನೀಡಿ ಗೌರವಿಸಿ ಬೀಳ್ಕೊಡಲಾಯಿತು.
ವರದಿ..
ಅನಿಲ್ ಮೊಂತೆರೊ.

