ಏಪ್ರಿಲ್ 26.ಕ್ಕೆನಗರದ ಕುವೆಂಪು ಕಲಾಮಂದಿರದಲ್ಲಿ 6.ನೇ ಜಿಲ್ಲಾ ಜಾನಪದ ಸಮ್ಮೇಳನ ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಜಾನಪದ….
1 min read
ಏಪ್ರಿಲ್ 26.ಕ್ಕೆನಗರದ ಕುವೆಂಪು ಕಲಾಮಂದಿರದಲ್ಲಿ 6.ನೇ ಜಿಲ್ಲಾ ಜಾನಪದ ಸಮ್ಮೇಳನ
ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಜಾನಪದ.

ಕಲೆ ಮತ್ತು ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಏಪ್ರಿಲ್ 26.ರಂದು ಕುವೆಂಪು ಕಲಾಮಂದಿರದಲ್ಲಿ ‘6ನೇ ಜಿಲ್ಲಾ ಜಾನಪದ ಸಮ್ಮೇಳನ’ ಆಯೋಜಿಸಲಾಗಿದೆ ಎಂದು ಜಾನಪದ ಪರಿಷತ್ತಿನ ಗೌರವಾಧ್ಯಕ್ಷ ಜೆ.ಪಿ. ಕೃಷ್ಣೆಗೌಡ ಹೇಳಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿಂದು ಕರೆದಿದ್ದ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಅವರು ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಉದ್ಘಾಟಿಸಲಿದ್ದು, ಸಚಿವ ಶಿವರಾಜ್ ತಂಗಡಗಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
ಅಂದು ಬೆಳಿಗ್ಗೆಯಿಂದಲೇ ಧ್ವಜಾರೋಹಣ, ನಂತರ ನಗರದ ತಾಲ್ಲೂಕು ಕಛೇರಿಯಿಂದ ಜಾನಪದ ಕಲಾತಂಡಗಳು, ಪೂರ್ಣಕುಂಭಗಳೊಂದಿಗೆ ವಿಶೇಷ ಅಲಂಕೃತ ಎತ್ತಿನ ಗಾಡಿಯಲ್ಲಿ ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ ನಡೆಯಲಿದೆ ಎಂದು ಹೇಳೆದರು.
ಮದ್ಯಹ್ನ 1 ಗಂಟೆಗೆ ರೈತ ಜಾನಪದ ಗೋಷ್ಟಿ ನಡೆಯಲಿದ್ದು,
2.30ಕ್ಕೆ ಮಹಿಳಾ ಜಾನಪದ ಗೋಷ್ಟಿ ನಡೆಯಲಿದೆ. 4 ಗಂಟೆಗೆ ಜನಪದ ಜಗುಲಿ ಉಪನ್ಯಾಸ, ಸಂಜೆ 5.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಸುರೇಶ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಟಿ.ಡಿ. ರಾಜೇಗೌಡ, ತರೀಕೆರೆ ಶಾಸಕ ಜಿ.ಹೆಚ್. ಶ್ರೀನಿವಾಸ್, ಕಡೂರು ಶಾಸಕ ಕೆ.ಎಸ್. ಆನಂದ್ ಭಾಗವವಹಿಸಲಿದ್ದಾರೆಂದು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಜನಪದ ಕಲಾ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ ಎಂದು ಹೇಳಿದರು.
ಗೋಷ್ಟಿಯಲ್ಲಿ ಜಾನಪದ ಪರಿಷತ್ತಿನ ಉಪಾಧ್ಯಕ್ಷ ವಿನಿತ್ ಕುಮಾರ್, ಆಶ್ರಯ ಫೌಂಡೇಶನ್ನಿನ ಶ್ರೀಮತಿ ವರ್ಷಾ, ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ, ಜಿಲ್ಲಾ ಸಂಚಾಲಕಿ ಗಾಯತ್ರಿ, ತಾಲ್ಲೂಕು ಅಧ್ಯಕ್ಷ ಸಚಿನ್, ಮೂಡಿಗೆರೆ ಅಧ್ಯಕ್ಷ ಬಕ್ಕಿ ರವಿ ಇದ್ದರು.

