लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಜಯರಾಮ್‌ ಮಾನ್ಯ ಅಧ್ಯಕ್ಷರು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಇವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆಯ ನಡಾವಳಿ….

1 min read

ದಿನಾಂಕ 24/04/2026 ರಂದು ಶ್ರೀ ಬಿ.ಎಸ್‌ ಜಯರಾಮ್‌ ಮಾನ್ಯ ಅಧ್ಯಕ್ಷರು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಇವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆಯ ನಡಾವಳಿ.
ಉಪಸ್ಥಿತಿ:
1. ಶ್ರೀ ಬಿ.ಎಸ್.‌ ಜಯರಾಮ್‌ ಮಾನ್ಯ ಅಧ್ಯಕ್ಷರು, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
2. ಶ್ರೀಮತಿ ದಯಾವತಿ ಎಂ. ಸದಸ್ಯ ಕಾರ್ಯದರ್ಶಿ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
3. ಶ್ರೀ ಹೆಚ್.ಪಿ. ರಮೇಶ್‌, ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
4. ಶ್ರೀ ನಾರಾಯಣ, ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
5. ಶ್ರೀ ಗುರುವಪ್ಪ, ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
6. ಶ್ರೀ ಶ್ರೀನಿವಾಸ್‌, ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
7. ಶ್ರೀ ದೀಕ್ಷಿತ್, ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
8. ಶ್ರೀ ನವೀನ್‌, ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
9. ಶ್ರೀ‌ ಭರತ್ ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
10. ಶ್ರೀಮತಿ ಜಯಮ್ಮ, ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ

ಗೃಹಲಕ್ಷ್ಮಿ ಯೋಜನೆ:
ಇಲಾಖಾಧಿಕಾರಿಗಳು ಗೃಹಲಕ್ಷ್ಮಿ ಯೋಜನೆ ಬಗ್ಗೆ ಪ್ರಗತಿ ವರದಿ ಮಂಡಿಸಿದರು. ತಾಲ್ಲೂಕಿನಲ್ಲಿ ಒಟ್ಟು 29065 ಗೃಹಲಕ್ಷ್ಮಿ ಫಲಾನುಭವಿಗಳು ಇದ್ದು, ಇದರಲ್ಲಿ 28350 ಫಲಾನುಭವಿಗಳಿಗೆ ಯೋಜನೆಯ ಹಣ ಬರುತ್ತಿರುವುದಾಗಿ ಹಾಗೂ ಯೋಜನೆಯಿಂದ ಬಾಕಿ ಉಳಿದ ರೇಷನ್‌ ಕಾರ್ಡ್‌ಗಳು NPCI-145, IT/GST-210, ತಿದ್ದುಪಡಿ/ಮರಣ-360 ಒಟ್ಟು 715 ಇರುತ್ತದೆ.

ಅನ್ನಭಾಗ್ಯ ಯೋಜನೆ:
ಆಹಾರ ಶಿರಸ್ತೇದಾರರು ಸಭೆಗೆ ಅನ್ನ ಭಾಗ್ಯ ಯೋಜನೆಯ ಪ್ರಗತಿ ವರದಿ ಮಂಡಿಸಿದರು. ಮೇ ಮತ್ತು ಜೂನ್‌ ತಿಂಗಳ ಪಡಿತರವನ್ನು ಮೇ-2026 ರ ಮಾಹೆಯಲ್ಲಿ 2 ತಿಂಗಳ ಪಡಿತರವನ್ನು ಒಟ್ಟಿಗೆ ನೀಡುವುದಾಗಿ ಸಭೆಗೆ ಮಾಹಿತಿ ನೀಡಿದರು.

ಗೃಹಜ್ಯೋತಿ ಯೋಜನೆ:
ಇಲಾಖಾಧಿಕಾರಿಗಳು ಗೃಹಜ್ಯೋತಿ ಯೋಜನೆ ಬಗ್ಗೆ ಪ್ರಗತಿ ವರದಿ ಮಂಡಿಸಿದರು. ತಾಲ್ಲೂಕಿನಲ್ಲಿ ಒಟ್ಟು 25961 ಗೃಹಜ್ಯೋತಿ ಫಲಾನುಭವಿಗಳು ಇದ್ದು, 22628 ಫಲಾನುಭವಿಗಳಿಗೆ ಸರ್ಕಾರದಿಂದ ರೂ. 9440846/- ಅನುದಾನ ಬಿಡುಗಡೆಯಾಗಿರುತ್ತದೆ. ಹಾಗೂ ಸರ್ಕಾರದ ಆದೇಶದಂತೆ 127 ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌ ನೀಡಲಾದ ಮೊತ್ತ ರೂ.38521/- ಎಂದು ಸಭೆಗೆ ಮಾಹಿತಿ ನೀಡಿದರು. ಹಾಗೂ ಗೃಹಜ್ಯೋತಿ ಯೋಜನೆಯಲ್ಲಿ ಅಧಿಕ ವಿದ್ಯುತ್‌ ಬಳಸಿರುವ ಫಲಾನುಭವಿಗಳ ಸಂಖ್ಯೆ 3206 ಇದ್ದು, ರೂ.1055731/- ಬಿಲ್‌ ಪಾವತಿಸಿಕೊಳ್ಳಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಯುವನಿಧಿ ಯೋಜನೆ:
ಯುವನಿಧಿ ಯೋಜನೆಯಡಿ 493 ವಿಧ್ಯಾರ್ಥಿಗಳು ನೊಂದಣಿಯಾಗಿದ್ದು, ಈವರೆಗೂ ಪದವಿ ವಿಭಾಗದಲ್ಲಿ 4203 ಹಾಗೂ ಡಿಪ್ಲೊಮೋ ವಿಭಾಗದಲ್ಲಿ 49 ವಿಧ್ಯಾರ್ಥಿಗಳು ನೊಂದಣಿಯಾಗಿರುತ್ತಾರೆ. ಸರ್ಕಾರದಿಂದ ರೂ.12682500/- ಅನುದಾನ ಬಿಡುಗಡೆಯಾಗಿರುತ್ತದೆ. ಕೌಶಲ್ಯಾಭಿವೃದ್ದಿ ತರಭೇತಿಗೆ ನೊಂದಣಿ ಮಾಡಿಕೊಂಡ ವಿಧ್ಯಾರ್ಥಿಗಳು ತರಭೇತಿಗೆ ಹಾಜರಾಗದಿದ್ದಲ್ಲಿ ಅವರು ಉದ್ಯೋಗದಲ್ಲಿರುವ ಬಗ್ಗೆ ಖಚಿತಪಡಿಸಿಕೊಂಡು ಯೋಜನೆಯಿಂದ ಕೈ ಬಿಡಲು ಮಾನ್ಯ ಅಧ್ಯಕ್ಷರು ತಿಳಿಸಿದರು.

ಶಕ್ತಿ ಯೋಜನೆ:
ಇಲಾಖಾಧಿಕಾರಿಗಳು ಶಕ್ತಿ ಯೋಜನೆ ಬಗ್ಗೆ ಪ್ರಗತಿ ವರದಿ ಮಂಡಿಸಿದರು. ತಾಲ್ಲೂಕಿನಲ್ಲಿ ಮಾರ್ಚ್-2026 ರ ಮಾಹೆಯಲ್ಲಿ ಪ್ರಸ್ತುತ 340143 ಫಲಾನುಭವಿಗಳು ಬಸ್‌ ನಲ್ಲಿ ಪ್ರಯಾಣಿಸಿದ್ದು, ರೂ.16895525/- ಸರ್ಕಾರದಿಂದ ಅನುದಾನ ಬಿಡುಗಡೆಯಾಗಿರುತ್ತದೆ ಎಂದು ಸಭೆಯಲ್ಲಿ ತಿಳಿಸಿದರು. ಹಾಗೂ ಯೋಜನೆ ಪ್ರಾರಂಭದಿಂದ ಇಲ್ಲಿಯವರೆಗೆ ಶಕ್ತಿ ಯೋಜನೆಯಡಿ 11401891 ಪ್ರಯಾಣಿಕರು ಪ್ರಯಾಣಿಸಿದ್ದು, ಒಟ್ಟು ಮೊತ್ತ ರೂ. 570143828/- ಆಗಿರುತ್ತದೆ.

 

 

ಇತರೆ ವಿಷಯಗಳು:
ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರುಗಳು ಹಳ್ಳಿಗಳಿಗೆ ಹೋಗಿ ಪಂಚಗ್ಯಾರಂಟಿ ಯೋಜನೆಗಳ ಸಾಧಕ-ಭಾದಕ ಕುರಿತು ಸಮೀಕ್ಷೆ ನಡೆಸಿ ನಮೂನೆಯಲ್ಲಿ ವರದಿ ನೀಡುವಂತೆ ಮಾನ್ಯ ಅಧ್ಯಕ್ಷರು ತಿಳಿಸಿದರು.
ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತಿಗೆ ಸಂಬಂಧಿಸಿದಂತೆ ಸ್ಥಗಿತಗೊಂಡಿದ್ದ ಇ-ಸ್ವತ್ತು ತಂತ್ರಾಂಶವು ಹಾಲಿ ಕಾರ್ಯನಿರ್ವಹಿಸುತ್ತಿರುವುದಾಗಿ ಕಾರ್ಯನಿರ್ವಾಹಕ ಅಧಿಕಾರಿಯವರು ಸಭಯಲ್ಲಿ ತಿಳಿಸಿದರು.
ಹೊರಗಡೆ ಕೆಲಸಕ್ಕೆ ಹೋಗುವಂತಹ ಮಹಿಳೆಯರ ಮಕ್ಕಳನ್ನು ನೋಡಿಕೊಳ್ಳಲು ಸರ್ಕಾರದಿಂದ ಅಂಗನವಾಡಿ ಕಂ ಕ್ರಚ್‌ ಎಂಬ ಯೋಜನೆಯಡಿ ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಿದ್ದು, ರೂಪುರೇಷೆ ಸಿದ್ದಪಡಿಸುವ ಹಂತದಲ್ಲಿದ್ದು,ಅಂಗನವಾಡಿಗಳು ಪ್ರಾರಂಭವಾದ ನಂತರ 3 ರಿಂದ 6 ವರ್ಷದ ಒಳಗಿನ ಮಕ್ಕಳನ್ನು ಮಹಿಳೆಯರು ಕೆಲಸಕ್ಕೆ ಹೋದ ಸಮಯದಲ್ಲಿ ಈ ಅಂಗನವಾಡಿಗೆ ಕಳುಹಿಸಬಹುದೆಂದು ಸಭೆಯಲ್ಲಿ ತಿಳಿಸಿದರು.

ಅಧ್ಯಕ್ಷರು ಸದಸ್ಯ ಕಾರ್ಯದರ್ಶಿ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಾರ್ಯನಿರ್ವಾಹಕ ಅಧಿಕಾರಿ
ಮೂಡಿಗೆರೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ…

‎✍🏻ಬರಹ ಕೃಪೆ.✍🏻

ಸಿದ್ದಿಕ್ ಚಕ್ಕಮಕ್ಕಿ.

ಅವಿನ್ ಟಿವಿ.

‎

About Author

Leave a Reply

Your email address will not be published. Required fields are marked *

You may have missed