लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

‎ಜನಜಾಗೃತಿ ಪ್ರತಿಯೊಬ್ಬ ಮತದಾರನ ಕರ್ತವ್ಯ..ಸುದಾಕರಶೆಟ್ಟಿ.

1 min read

‎ಜನಜಾಗೃತಿ ಪ್ರತಿಯೊಬ್ಬ ಮತದಾರನ ಕರ್ತವ್ಯ
‎
‎ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದಲ್ಲಿ ರಸ್ತೆಗಳು ಹಾಳಾಗಿರು ವುದರಿಂದ ಕೂಲಿ ಕಾರ್ಮಿಕರು ಸೇರಿದಂತೆ ಸಾಮಾನ್ಯ ಜನರು ತೊಂದರೆ ಅನುಭವಿಸಬೇಕಾದ ಪರಿಸ್ಥಿತಿ ಇದ್ದು ಜನರ ಮೂಲಭೂತ ಸಮಸ್ಯೆಗಳು ಹೆಚ್ಚುತ್ತಿದೆ. ದಿನದಿಂದ ದಿನಕ್ಕೆ ಗಂಭೀರವಾಗುತ್ತಿವೆ ಎಂದು ಜೆಡಿಎಸ್  ಪಕ್ಷದ ರಾಷ್ಟ್ರೀಯ ವಕ್ತಾರ ಸುಧಾಕರ್. ಎಸ್ ಶೆಟ್ಟಿ ತಿಳಿಸಿದ್ದಾರೆ.
‎
‎ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯ ತಿಳಿಸಿರುವ ಅವರು ರಾಜ್ಯ, ದೇಶ ಮತ್ತು ಸಮಾಜ ಆರ್ಥಿಕವಾಗಿ ಸಬಲವಾಗಬೇಕಾದರೆ ಕೇವಲ ಉಚಿತ ಯೋಜನೆಗಳು ಸಾಕಾಗುವುದಿಲ್ಲ. ಜನರಿಗೆ ಶಾಶ್ವತ ಬದುಕು ಕಟ್ಟಿಕೊಡುವ ಉದ್ಯೋಗ, ಸಣ್ಣ ವ್ಯಾಪಾರಗಳಿಗೆ ಬೆಂಬಲ, ಕೃಷಿಗೆ ಬಲ, ಯುವಕರಿಗೆ ಕೌಶಲ್ಯಾಭಿವೃದ್ಧಿ ಮತ್ತು ಜೀವನ ನಿರ್ವಹಣೆಗೆ ಅಗತ್ಯವಾದ ಆರ್ಥಿಕ ಶಕ್ತಿ ನೀಡುವ ನೀತಿಗಳು ಮುಖ್ಯವಾಗಬೇಕು ಎಂದು ಒತ್ತಾಯಿಸಿದ್ದಾರೆ.
‎
‎ಶೃಂಗೇರಿ ಕ್ಷೇತ್ರದ ಹಲವು ಗ್ರಾಮಗಳ ರಸ್ತೆಗಳು ದುಸ್ಥಿತಿಯಲ್ಲಿರುವುದರಿಂದ ದೈನಂದಿನ ಕೆಲಸಗಳಿಗಾಗಿ ಒಂದು ಊರಿನಿಂದ ಮತ್ತೊಂದು ಊರಿಗೆ ಹೋಗುವುದೇ ಜನರಿಗೆ ಕಷ್ಟಕರವಾಗಿದೆ. ರೈತರು, ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಮತ್ತು ಸಾಮಾನ್ಯ ಜನರು ಸಂಚಾರ ವ್ಯವಸ್ಥೆ ಇಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದಿದ್ದಾರೆ ಗ್ರಾಮೀಣ ಭಾಗದ ಜನರಿಗೆ ಸುಲಭ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿತ್ತು ಆದರೆ ಇಂದು ಅನೇಕ ಹಳ್ಳಿಗಳಿಂದ ನಗರ ಪ್ರದೇಶಗಳಿಗೆ ಬಂದು ವಾಪಸ್ ಮನೆ ತಲುಪುವುದೇ ದೊಡ್ಡ ಸಮಸ್ಯೆಯಾಗಿದೆ. ಈ ವಿಚಾರದಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ನಿರ್ಲ್ಯಕ್ಷ ತೋರುತ್ತಿದ್ದಾರೆ ಎಂದು ದೂರಿದ್ದಾರೆ.
‎
‎ಶಿಕ್ಷಣ ಕ್ಷೇತ್ರದಲ್ಲಿಯೂ ಪರಿಸ್ಥಿತಿ ಚಿಂತಾಜನಕವಾಗಿದ್ದು ಸಂವಿಧಾನ ಬದ್ಧವಾಗಿ ಸರ್ಕಾರ ನೀಡಬೇಕಾದ ಶಿಕ್ಷಣ ವ್ಯವಸ್ಥೆ ದುರ್ಬಲವಾಗುತ್ತಿದೆ. ಪ್ರತಿ ವರ್ಷವೂ ಸರ್ಕಾರ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಗ್ರಾಮೀಣ ಬಡ ಮಕ್ಕಳ ಭವಿಷ್ಯ ಅಂಧಕಾರದಲ್ಲಿ ದೂಡಿದಂತಾಗಿದೆ ಎಂದು ತಿಳಿಸಿದ್ದಾರೆ.
‎
‎ಹಲವಾರು ಕುಟುಂಬಗಳು ಶವ ಸಂಸ್ಕಾರಕ್ಕೆ ಸ್ಮಶಾನವಿಲ್ಲದೆ ಸರ್ಕಾರದೊಡನೆ ಸ್ಮಶಾನ ಜಾಗಕ್ಕಾಗಿ ಬೇಡಿಕೆ ನೀಡಿ ಹೋರಾಟ ಮಾಡುವ ಪರಿಸ್ಥಿತಿ ಇದೆ ಹಾಗೂ ಆರೋಗ್ಯ ಸೇವೆಯ ಪರಿಸ್ಥಿತಿಯೂ ಇದೇ ರೀತಿಯಾಗಿದೆ. ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸರಿಯಾದ ಚಿಕಿತ್ಸೆ ಸಿಗದ ಕಾರಣ ಶೃಂಗೇರಿ ಕ್ಷೇತ್ರದ ಜನರು ಮಣಿಪಾಲ, ಶಿವಮೊಗ್ಗ, ಮಂಗಳೂರು ಮತ್ತು ಬೆಂಗಳೂರಿನಂತಹ ನಗರಗಳನ್ನು ಅವಲಂಭಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬಡ ಕುಟುಂಬಗಳಿಗೆ ಇದು ದೊಡ್ಡ ಆರ್ಥಿಕ ಹೊರೆಯಾಗಿದೆ ಎಂದು ಹೇಳಿದ್ದಾರೆ.
‎
‎ಇದೀಗ Al ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಬೆಳವಣಿಗೆಯ ನಡುವೆ ವಿದ್ಯಾವಂತ ಯುವಕರು ಕೊರತೆಯಿಂದ ಉದ್ಯೋಗದ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಅವಕಾಶ ಇಲ್ಲ ಎಂಬ ಭಾವನೆ ಅನೇಕ ಮನೆಗಳಲ್ಲಿ ಆತಂಕ ಸೃಷ್ಟಿಸಿದೆ ವಿದ್ಯಾವಂತ ಯುವಕರು ತಂದೆ ತಾಯಿಯ ಜವಬ್ದಾರಿ  ನಿರ್ವಹಿಸಬೇಕಾಗಿದ್ದು, ಸಮಾಜವನ್ನು ಎದುರಿಸಲಾಗದೆ ಮೌನವಾಗಿ ಎಲ್ಲವನ್ನು ಸಹಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ.
‎
‎ಇನ್ನೊಂದೆಡೆ ಅರಣ್ಯ ಪ್ರದೇಶದ ಜನರ ಸಮಸ್ಯೆಗಳು ಕೂಡ ಗಂಭೀರವಾಗಿವೆ. ಒತ್ತುವರಿ ಹೆಸರಿನಲ್ಲಿ ಅರಣ್ಯ ಇಲಾಖೆಯ ದಬ್ಬಾಳಿಕೆ, ಯಾವುದೇ ಇ-ಖಾತೆ ಅಥವಾ ಹಕ್ಕುಪತ್ರಕ್ಕೆ ಆರಣ್ಯ ಇಲಾಖೆಯ ಅನುಮತಿ ಬೇಕಾದ ಪರಿಸ್ಥಿತಿ ಈಗಾಗಲೇ ನೀಡಿರುವ ಸಾಗುವಳಿ ಚೀಟಿಗಳಿಗೆ ಕಂದಾಯ ಇಲಾಖೆ ಪರವಾನಗಿ ನೀಡದಿರುವುದು ಇವೆಲ್ಲ ಗ್ರಾಮೀಣ ಬಡ ಕುಟುಂಬಗಳನ್ನು ಆನಿಶ್ಚಿತತೆಯಲ್ಲಿಟ್ಟಿವೆ ಎಂದು ದೂರಿದ್ದಾರೆ.
‎
‎30.40 ವರ್ಷಗಳಿಂದ ಬದುಕುತ್ತಿರುವ ಅನೇಕ ಕುಟುಂಬಗಳಿಗೆ ಇಂದಿಗೂ ಮನೆಗಳೆಗೆ ಹಕ್ಕು ಪತ್ರ ಸಿಕ್ಕಿಲ್ಲ. ಪ್ಲಾಸ್ಟಿಕ್ ಶೀಟಿನಡಿ ಜೀವನ ಸಾಗಿಸುವ ಕುಟುಂಬಗಳು ಶೃಂಗೇರಿ ಕ್ಷೇತ್ರದಲ್ಲಿರುವುದು ಅಭಿವೃದ್ಧಿಯ ಬಗ್ಗೆ ಗಂಭೀರ ಪ್ರಶ್ನೆಯಾಗಿದೆ.
‎ಕಳೆದ ಹತ್ತು ವರ್ಷಗಳಿಂದ ಪರಸ್ಪರ ದೂಷಣೆ, ರಾಜಕೀಯ ವೈಮನಸ್ಸು ಮತ್ತು ಇದೀಗ ಆಣೆ-ಪ್ರಮಾಣಗಳ ರಾಜಕಾರಣದಲ್ಲೇ ಕಳೆಯಲಾಗಿದೆ. ಆದರೆ ಇಂದು ಅಂಗಡಿ, ಹೋಟೆಲ್‌ಗಳಲ್ಲಿ, ಬಸ್ ನಿಲ್ದಾಣಗಳಲ್ಲಿ ಜನರ ನೈಜ ಸಮಸ್ಯೆಗಳ ಬಗ್ಗೆ ಚರ್ಚೆ ಕಡಿಮೆಯಾಗಿದೆ ಎಂಬ ಎಂಬ ಬೇಸರ ಇದೆ.
‎
‎ಇದೀಗ ಕ್ಷೇತ್ರದ ಚುನಾವಣಾ ವಿಚಾರವೂ ನ್ಯಾಯಾಲಯದಲ್ಲಿದ್ದು, ಅಂತಿಮ ತೀರ್ಪನ್ನು ಜನ ತಾಳ್ಮೆಯಿಂದ ಕಾಯಬೇಕಾಗಿದೆ. ಇಂತಹ ಸಮಯದಲ್ಲಿ . ನಾಯಕರನ್ನು ಸಾಮಾಜಿ-ಖುಷಿಪಡಿಸಲು ಜಾಲತಾಣ ಮತ್ತು ಪತ್ರಿಕೆಗಳಲ್ಲಿ ಅನಗತ್ಯ ಪ್ರಚಾರ ಮಾಡುವುದಕ್ಕಿಂತ ಸ್ಥಳೀಯ ಸಮಸ್ಯೆಗಳ ಬಗ್ಗೆ ಪ್ರಶ್ನೆ ಕೇಳುವುದು ಹೆಚ್ಚು ಅಗತ್ಯವಾಗಿದೆ ಎಂದರು.
‎
‎ಸ್ಥಳೀಯ ಬಡವರು, ರೈತರು, ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಯುವಕರ ಬದುಕಿಗೆ ನೀವು ಏನು ಮಾಡಿದ್ದೀರಿ ಎಂಬ ಪ್ರಶ್ನೆ ಮಾಡುವ ಜನಜಾಗೃತಿ ಬೆಳೆಯಬೇಕು. ಯಾಕೆಂದರೆ ನಿಮ್ಮನ್ನ ಭವಿಷ್ಯ ಮತ್ತು ನಿಮ್ಮ ಮಕ್ಕಳ ಭವಿಷ್ಯ ನಿಮ್ಮ ಕೈಯಲ್ಲಿದೆ.
‎
‎ಕೇವಲ ಜೈಕಾರ, ಭಾವನಾತ್ಮಕ ರಾಜಕೀಯ ಮತ್ತು ವ್ಯಕ್ತಿಪೂಜೆಯಲ್ಲಿ ಬದುಕುತ್ತಾ ಹೋದರೆ ಕ್ಷೇತ್ರದ ಪರಿಸ್ಥಿತಿ ಬದಲಾಗುವುದಿಲ್ಲ. ಅಭಿವೃದ್ಧಿ, ಶಿಕ್ಷಣ, ಆರೋಗ್ಯ, ಉದ್ಯೋಗ ಮತ್ತು ಮೂಲಭೂತ ಸೌಲಭ್ಯಗಳ ಬಗ್ಗೆ ಜನರು ಒಟ್ಟಾಗಿ ಧ್ವನಿ ಎತ್ತಿದಾಗ ಮಾತ್ರ ನಿಜವಾದ ಬದಲಾವಣೆ ಸಾಧ್ಯ ಎಂದು ಅಭಿಪ್ರಾಯಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed