ಹಿಂದೂ ಜನಜಾಗೃತಿ ಸಮಿತಿ ಮಾನ್ಯ ಗೃಹ ಸಚಿವರು, ಕರ್ನಾಟಕ ಸರ್ಕಾರ,…
1 min read
ಹಿಂದೂ ಜನಜಾಗೃತಿ ಸಮಿತಿ
ಮಾನ್ಯ ಗೃಹ ಸಚಿವರು, ಕರ್ನಾಟಕ ಸರ್ಕಾರ,
ವಿಷಯ : ಬಕ್ರಿದ್ ಹಬ್ಬದ ಸಂದರ್ಭದಲ್ಲಿ ಅಕ್ರಮ ಗೋಸಾಗಾಟ, ಕಾನೂನು ಬಾಹಿರ ಗೋಹತ್ಯೆ ತಡೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ
ಮನವಿ
ದಿನಾಂಕ 28.05.2028 ರಂದು ಮುಸ್ಲಿಂ ಸಮುದಾಯದ ಬಕ್ರಿದ್ ಹಬ್ಬ ಆಚರಣೆ ನಡೆಯಲಿದ್ದು, ಈ ಅವಧಿಯಲ್ಲಿ ರಾಜ್ಯದ ಅನೇಕ ಭಾಗಗಳಲ್ಲಿ ಅಕ್ರಮವಾಗಿ ಗೋವು ಎಮ್ಮೆ ಕರುಗಳ ಸಾಗಾಟ ಹಾಗೂ ಕಾನೂನು ಬಾಹಿರ ಗೋಹತ್ಯೆ ನಡೆಯುವ ಸಾಧ್ಯತೆ ಇದೆ ಎಂಬ ಬಗ್ಗೆ ನಾಗರಿಕರಲ್ಲಿ ಆತಂಕ ವ್ಯಕ್ತವಾಗುತ್ತಿದೆ. ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಗೋಸಂರಕ್ಷಣಾ ಕಾಯಿದೆ ಜಾರಿಯಲ್ಲಿದ್ದರೂ ಸಹ ಕೆಲವು ಕಡೆಗಳಲ್ಲಿ ಕಾನೂನು ಉಲ್ಲಂಘಿಸಿ ರಸ್ತೆ ಬದಿ, ಜನವಸತಿ ಪ್ರದೇಶಗಳು ಹಾಗೂ ತಾತ್ಕಾಲಿಕ ಸ್ಥಳಗಳಲ್ಲಿ ಗೋಹತ್ಯೆ ನಡೆಯುತ್ತಿರುವ ಬಗ್ಗೆ ಹಿಂದಿನ ಸಂದರ್ಭಗಳಲ್ಲಿ ದೂರುಗಳು ಹಾಗೂ ವರದಿಗಳು ಬಂದಿವೆ ಇಂತಹ ಕೃತ್ಯಗಳಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದರ ಜೊತೆಗೆ ಹಿಂದೂ ಸಮಾಜದ ಧಾರ್ಮಿಕ ಭಾವನೆಗೂ ನೋವು ಉಂಟಾಗುತ್ತದೆ.
ಆದ್ದರಿಂದ, ಹಿಂದೂ ಜನಜಾಗೃತಿ ಸಮಿತಿಯ ಪರವಾಗಿ ಕೆಳಕಂಡ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುತ್ತಿದ್ದೇವೆ :
1. ಬಕ್ರಿದ್ ಹಬ್ಬದ ಸಂದರ್ಭದಲ್ಲಿ ರಾಜ್ಯಾದ್ಯಂತ ಅಕ್ರಮ ಗೋಹತ್ಯೆ ಮತ್ತು ಗೋಸಾಗಾಟವನ್ನು ಸಂಪೂರ್ಣ ತಡೆಯಲು ವಿಶೇಷ ಪೊಲೀಸ್ ಹಾಗೂ ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು.
2. ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾಸೀಮೆಗಳ ಪ್ರಮುಖ ಪ್ರವೇಶ ದ್ವಾರಗಳಲ್ಲಿ 24 ಗಂಟೆಗಳ ವಿಶೇಷ ಚೆಕ್ಪೊಸ್ಟ್ ಳನ್ನು ಸ್ಥಾಪಿಸಿ ವಾಹನಗಳ ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು.
೨ ಪಶು ಸಾಗಾಟಕ್ಕೆ ಸಂಬಂಧಿಸಿದ ದಾಖಲೆಗಳು, ಪರವಾನಗಿ ಹಾಗೂ ಪಶುಗಳ ಕಾನೂನುಬದ್ಧ ಸಾಗಾಟ ನಿಯಮಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು.
4. ರಸ್ತೆ ಬದಿ, ಜನವಸತಿ ಪ್ರದೇಶಗಳು ಹಾಗೂ ತಾತ್ಕಾಲಿಕ ಶೆಡ್ಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಗೋಹತ್ಯೆಗೆ ಅವಕಾಶ ನೀಡಬಾರದು.
5. ಅಕ್ರಮ ಗೋಸಾಗಾಟ, ಗೋಹತ್ಯೆ ಹಾಗೂ ಸಂಬಂಧಿತ ಕಾನೂನು ಉಲ್ಲಂಘನೆಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಪ್ರಕರಣವನು ದಾಖಲಿಸಬೇಕು.
ಆದುದರಿಂದ ನಾವು ಕೆಳಕಂಡಂತೆ ವಿನಂತಿಸುತ್ತೇವೆ:
1 ಹಿಜಾಬ್ಗೆ ಅವಕಾಶ ನೀಡುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು.
2. ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಏಕರೂಪದ ಸಮವಸ್ತ್ರ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು.
3. ಯಾವುದೇ ಧಾರ್ಮಿಕ ಚಿಹ್ನೆ ಶಾಲು ಅಥವಾ ಪ್ರತ್ಯೇಕ ಧಾರ್ಮಿಕ ಉಡುಪುಗಳಿಗೆ ಅವಕಾಶ ನೀಡಬಾರದು
4 ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆ ಹಾಗೂ ಸೌಹಾರ್ದ ಕಾಪಾಡುವ ಶ್ರಮಗಳನ್ನು ಕೈಗೊಳ್ಳಬೇಕು.
ರಾಜ್ಯದ ವಿದ್ಯಾರ್ಥಿಗಳ ಭವಿಷ್ಯ ಹಾಗೂ ಶಿಕ್ಷಣ ಕ್ಷೇತ್ರದ ಶಾಂತಿ-ಸುವ್ಯವಸ್ಥೆಯ ದೃಷ್ಟಿಯಿಂದ ಸರ್ಕಾರವು ಈ ನಿರ್ಧಾರವನ್ನು ಮರುಪರಿಶೀಲಿಸಿ ಸೂಕ್ತ
ಕ್ರಮ ಕೈಗೊಳ್ಳಬೇಕೆಂದು ವಿನಮ್ರವಾಗಿ ಆಗ್ರಹಿಸುತ್ತೇವೆ.
ಈ ಸಂದಭದಲ್ಲಿ..
ಸಂಜಯಕೊಟ್ಟಿಗೆಹಾರ.
ಬಸವರಾಜು.ಶರತ್.ಇತರರು ಇದ್ದರು.


