ಈಶ್ವರ ಖಂಡ್ರೆಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹ…,
1 min read
ಈಶ್ವರ ಖಂಡ್ರೆಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹ
ಚಿಕ್ಕಮಗಳೂರು: ರಾಜ್ಯ ಸಚಿವ
ಸಂಪುಟ ಪುನರ್ರಚನೆ ಅಥವಾ ನಾಯಕತ್ವದ ನಿರ್ಧಾರಗಳ ಸಂದರ್ಭದಲ್ಲಿ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಈಶ್ವರಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದ ಮುಖಂಡ ತೇಜೇಶ್ ಕುಮಾರ್ ಯು.ಎಸ್. ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಈಶ್ವರ ಖಂಡ್ರೆ ಅವರು ಜನಪರ ನಾಯಕತ್ವ, ಪಕ್ಷದ ಮೇಲಿನ ನಿಷ್ಠೆ ಹಾಗೂ ಸಾಮಾಜಿಕ ಸೇವೆಯ ಮೂಲಕ ರಾಜ್ಯದ ಜನರ ವಿಶ್ವಾಸ ಗಳಿಸಿದ್ದಾರೆ ಎಂದು ತಿಳಿಸಿದ್ದಾರೆ. ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದ ರಾಷ್ಟ್ರೀಯ ಅಧ್ಯಕ್ಷರಾಗಿ ಸಮಾಜದ ಸಂಘಟನೆ ಮತ್ತು ಅಭಿವೃದ್ಧಿಗೆ ಅವರು ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ವೀರಶೈವ ಲಿಂಗಾಯತ ಸಮಾಜದ ಏಳಿಗೆಗಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಖಂಡ್ರೆ ಅವರು, ಇತರೆ ಸಮುದಾಯಗಳ ಅಭಿವೃದ್ಧಿಗೂ ಶ್ರಮಿಸಿದ್ದು, ಅವರ ಅನುಭವ ಮತ್ತು ನಾಯಕತ್ವ ರಾಜ್ಯದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

