लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಜಿಲ್ಲೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಯಗಬೇಕು
ಚಿಕ್ಕಮಗಳೂರು: ಉಚ್ಚನ್ಯಾಯಾಲಯ ಕರಾವಳಿ ಕರ್ನಾಟಕ ಸಂಚಾರಿ ಹೈಕೋರ್ಟ್ ಪೀಠವನ್ನು ಸ್ಥಾಪಿಸುವ ಚಿಂತನೆ ನಡೆಸಿದ್ದು, ಚಿಕ್ಕಮಗಳೂರು ನಗರದಲ್ಲಿರುವ ನೂತನ ನ್ಯಾಯಾಲಯ ಕಟ್ಟಡದಲ್ಲಿ ಸ್ಥಾಪನೆ ಮಾಡುವಂತೆ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಬಿ. ಸುಜೇಂದ್ರ ಮನವಿ ಮಾಡಿದರು.
‎
‎ನಗರದ ಪ್ರೆಸ್‌ಕ್ಲಬ್‌ನಲ್ಲಿಂದು ಕರೆದಿದ್ದ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯ ವಕೀಲರ ಸಂಘ ಹಾಗೂ ಜನಪ್ರತಿನಿಧಿಗಳ ಕೋರಿಕೆ ಮೇರೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳಿಗೆ ಪ್ರತ್ಯೇಕ ಸಂಚಾರಿ ಹೈಕೋರ್ಟ್ ಪೀಠವನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸ್ಥಾಪನೆ ಮಾಡಬೇಕೆಂದು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಉಚ್ಚನ್ಯಾಯಾಲ ಯಕ್ಕೆ ಶಿಫಾರಸು ಪತ್ರ ನೀಡಿದ್ದರೆಂದು ಹೇಳಿದರು.
‎
‎ಅವರ ಶಿಫಾರಸಿನ ಮೇರೆಗೆ ಹೈಕೋರ್ಟ್‌.ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠವನ್ನು ಸ್ಥಾಪನೆ ಮಾಡಿದ್ದೇ ಆದರೆ ಜಿಲ್ಲೆಯ ಜನತೆಗೆ ಸುಗಮ ಸಂಚಾರಕ್ಕೆ ಅನಾನುಕೂಲವಾಗುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಪೀಠವನ್ನು ಚಿಕ್ಕಮಗಳೂರಿನಲ್ಲಿ ಮಾಡಲಿ ಇಲ್ಲವಾದರೆ ಈ ಹಿಂದಿನಂತೆ ಬೆಂಗಳೂರಿನಲ್ಲಿ ಉಳಿಸಲಿ ಎಂದು ಹೇಳಿದರು.
‎
‎ಚಿಕ್ಕಮಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಿದರೆ ಉಡುಪಿ, ಶಿವಮೊಗ್ಗ, ಮಡಿಕೇರಿ, ಹಾಸನ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಿಗೆ ಕೇಂದ್ರ ಸ್ಥಾನವಾಗುತ್ತದೆ. ಇದರಿಂದ ಕಕ್ಷಿದಾರರು  ಸಾರ್ವಜನಿಕರು ವಕೀಲ-ವೈಯಕ್ತಿಕ ಪರಿಗಣಿಸದೆ  ಅನುಕೂಲವಾಗಲಿದೆ ಎಂದಿರುವ ಅವರು ಘನ ಉಚ್ಚನ್ಯಾಯಾಲಯ ಸಿದ್ದರಾಮಯ್ಯನವರ ಶಿಫಾರಸನ್ನು ಕೈಬಿಡಬೇಕೆಂದು ಈ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ನೀಡಲಿದ್ದೇವೆಂದರು.
‎
ನಗರದಲ್ಲಿರುವ ಹಳೆಯ ನ್ಯಾಯಾಲಯ ಕಟ್ಟಡ ಸಂಪೂರ್ಣ ಶಿಥಿಲವಾಗಿದ್ದು ಅವಘಡಗಳು ಸಂಭವಿಸುವ ಮೊದಲು ಕೂಡಲೇ ನ್ಯಾಯಾಲಯವನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಒತ್ತಾಯಿಸಿದರು. ಗೋಷ್ಟಿಯಲ್ಲಿ ಕಾರ್ಯದರ್ಶಿ అనిಲ್ ಕುಮಾರ್, ಖಜಾಂಚಿ ದೀಪಕ್, ಪದಾಧಿಕಾರಿಗಳಾದ ರೀನಾ, ಪ್ರಿಯದರ್ಶಿನಿ ಇದ್ದರು.

About Author

Leave a Reply

Your email address will not be published. Required fields are marked *

You may have missed