ಕಾಂಗ್ರೆಸ್ ವಿರುದ್ಧ ಮುಸ್ಲಿಂ ಮುಖಂಡರ ಆಕ್ರೋಶ….
1 min read
ಕಾಂಗ್ರೆಸ್ ವಿರುದ್ಧ ಮುಸ್ಲಿಂ ಮುಖಂಡರ ಆಕ್ರೋಶ
ಚಿಕ್ಕಮಗಳೂರು : ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಮಂತ್ರಿಯಾಗಿದ್ದ ಜಮೀರ್ ಅಹಮದ್ ಖಾನ್ ಅವರನ್ನು ಈಗಿನ ಮಂತ್ರಿಮಂಡಲದಿಂದ ಕೈಬಿಟ್ಟಿರುವುದಕ್ಕೆ ಚಿಕ್ಕಮಗಳೂರಿನಲ್ಲಿ ಮುಸ್ಲಿಂ ಮುಖಂಡರು ಕಾಂಗ್ರೆಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು ನಗರದ జామియా ಮಸೀದಿ ಮುಂಭಾಗದಲ್ಲಿ ನೂರಾರು ಮುಸ್ಲಿಂ ಮುಖಂಡರು ಜಮೀರ್ ಅಹಮದ್ ಅವರ ಭಾವಚಿತ್ರ ಹಿಡಿದು, ಅವರ ಪರವಾಗಿ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು. ಜಮೀರ್ ಖಾನ್ ಅವರಿಗೆ ತಕ್ಷಣವೇ ಸಚಿವ ಸ್ಥಾನ ನೀಡದಿದ್ದರೆ ಅದರ ನೇರ ಪರಿಣಾಮವನ್ನು ಕಾಂಗ್ರೆಸ್ ಅನುಭವಿಸಬೇಕಾಗುತ್ತದೆ ಎಂದು ಮುಖಂಡರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮುಂದಿನ ಎರಡು ದಿನಗಳಲ್ಲಿ ಜಮೀರ್ ಅಹಮದ್ ಖಾನ್ ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡದಿದ್ದರೆ, ಕಾಂಗ್ರೆಸ್ ವಿರುದ್ಧ ದೊಡ್ಡ ಆಂದೋಲನವಾಗಿ ರೂಪುಗೊಳ್ಳಲಿದೆ ಎಂದು ಮುಸ್ಲಿಂ ಮುಖಂಡ ಇಮ್ರಾನ್ ಎಚ್ಚರಿಸಿದ್ದಾರೆ.ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಅಲ್ಪಸಂಖ್ಯಾತರ ಕೊಡುಗೆ ಪ್ರಮುಖವಾಗಿದೆ. ಇದೇ ಪರಿಸ್ಥಿತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಸೀಟುಗಳ ಸಂಖ್ಯೆ 136 ರಿಂದ 50ಕ್ಕೆ ಕುಸಿಯುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

