लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ನಾಲ್ವಡಿ ಕೃಷ್ಣರಾಜ ಒಡೆಯರ್, ಪ್ರೊಫೆಸರ್ ಬಿ ಕೃಷ್ಣಪ್ಪ ನವರ ಹುಟ್ಟು ಹಬ್ಬ ಆಚರಣೆ..

1 min read

ನಾಲ್ವಡಿ ಕೃಷ್ಣರಾಜ ಒಡೆಯರ್, ಪ್ರೊಫೆಸರ್ ಬಿ ಕೃಷ್ಣಪ್ಪ ನವರ ಹುಟ್ಟು ಹಬ್ಬ ಆಚರಣೆ.

ಆಲ್ದೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ವಾಭಿಮಾನಿ ಬಿ. ಕೃಷ್ಣಪ್ಪ ಬಣದ ವತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 142ನೇ ಹಾಗೂ ಪ್ರೊಫೆಸರ್ ಬಿ ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆಯನ್ನು ಹೌಸಿಂಗ್ ಬೋರ್ಡ್ ಸಮೀಪವಿರುವ ಆಲ್ದೂರು ಮುರಾರ್ಜಿ ವಸತಿ ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು, ಗಣ್ಯರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಪ್ರೊಫೆಸರ್ ಬಿ ಕೃಷ್ಣಪ್ಪ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಅನಿಲ್ ಆನಂದ್ ಅವರು ಮಾತನಾಡಿ ಕಟ್ಟಕಡೆಯ ವ್ಯಕ್ತಿಯ ಅಭಿವೃದ್ಧಿಗೆ ಶ್ರಮಿಸಿದ ಯಾರಾದರೂ ದೊರೆ ಇದ್ದರೆ ಅದು ನಾಲ್ವಡಿ ಕೃಷ್ಣರಾಜ ಒಡೆಯರ್. ಅವರು ಕೇವಲ ಒಬ್ಬ ರಾಜನಲ್ಲ ಬದಲಿಗೆ ದೂರದೃಷ್ಟಿಯುಳ್ಳ ರಾಷ್ಟ್ರ ನಿರ್ಮಾತೃ, ಅಂತಹವರನ್ನು ಪಡೆದ ಈ ನಾಡು ನಿಜಕ್ಕೂ ಧನ್ಯ ಎಂದು ಅಭಿಪ್ರಾಯಪಟ್ಟರು.

ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿದ ಒಡೆಯರ್ ಅವರು ಭಾರತದಲ್ಲಿಗೆ ಮೊಟ್ಟಮೊದಲಿಗೆ ಮೈಸೂರು ವಿಶ್ವವಿದ್ಯಾಲಯ ಸ್ಥಾಪಿಸಿ ಉನ್ನತ ಶಿಕ್ಷಣಕ್ಕೆ ಹೊಸ ದಿಕ್ಕು ತೋರಿದರು. ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಉಚಿತ ಶಾಲೆಗಳನ್ನು ಆರಂಭಿಸಿದರು. ವಿದ್ಯೆ ಇಲ್ಲದ ಪ್ರಜೆ ಕಣ್ಣಿಲ್ಲದವನಂತೆ ಎಂಬ ನಂಬಿಕೆಯನ್ನು ಹೊಂದಿದ್ದರು ಎಂದು ಹೇಳಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ವಾಭಿಮಾನಿ ಬಿ ಕೃಷ್ಣಪ್ಪ ಬಡದ ಜಿಲ್ಲಾ ಸಂಚಾಲಕರಾದ ಕಬ್ಬಿಗೆರೆ ಮೋಹನ್ ಕುಮಾರ್ ಅವರು ಮಾತನಾಡಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಪ್ರೊಫೆಸರ್ ಬಿ ಕೃಷ್ಣಪ್ಪ ಅವರ ಹುಟ್ಟುಹಬ್ಬವನ್ನು ನಾವು ಇಂದು ಮುರಾರ್ಜಿ ಶಾಲೆಯಲ್ಲಿ ಆಚರಿಸುತ್ತಿದ್ದು, ಕಾರಣ ಅವರ ತತ್ವ ಸಿದ್ಧಾಂತಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಾಧಕರಾಗಬೇಕು ಎಂದರು.

ಆಲ್ದೂರು ಮುರಾರ್ಜಿ ವಸತಿ ಶಾಲೆ ಪ್ರಾಂಶುಪಾಲರಾದ ಮಧುಸೂದನ್ ಅವರು ಮಾತನಾಡಿ ಗಿರಿಜನ ಹಾಗೂ ಅರಣ್ಯ ವಾಸಿಗಳಿಗೆ ಬುಡಕಟ್ಟು ಜನಾಂಗಕ್ಕೆ ಮೊಟ್ಟಮೊದಲ ಶಾಲೆಗಳನ್ನು ತೆರೆದವರು ಹಾಗೂ ಸ್ತ್ರೀ ಶಿಕ್ಷಣವನ್ನು ಕಡ್ಡಾಯಗೊಳಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರದು. ಪ್ರಜಾತಂತ್ರದ ದೃಷ್ಟಿಯಿಂದ ಭಾರತದಲ್ಲಿಯೇ ಮಾದರಿಯಾದ ಸಂಸ್ಥೆಯಾಗಿ ಪ್ರಜಾಪ್ರತಿನಿಧಿ ಸಂಸ್ಥೆ ಕಾರ್ಯನಿರ್ವಹಿಸಲು ಆರಂಭಿಸಿತು ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ವಾಭಿಮಾನಿಬಿ ಕೃಷ್ಣಪ್ಪನದ ಮಹಿಳಾ ಘಟಕ ಜಿಲ್ಲಾ ಸಂಚಾಲಕರಾದ ಭಾರತಿ ಉಮೇಶ್ ರಾಜ್ ಅರಸ್, ಮಾಜಿ ಸೈನಿಕರಾದ ಪ್ರದೀಪ್ , ವಿಜಯ್, ಉಮೇಶ್, ಸಚಿನ್ ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

You may have missed