ಆಶಾ ಕಾರ್ಯಕರ್ತೆಯರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆರೋಗ್ಯ ಸಚಿವ ಯುಟಿ ಖಾದರ್ ಗೆ ಮನವಿ…
1 min read

ಆಶಾ ಕಾರ್ಯಕರ್ತೆಯರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆರೋಗ್ಯ ಸಚಿವ ಯುಟಿ ಖಾದರ್ ಗೆ ಮನವಿ
ಆಲ್ದೂರು: ಜೆಡಿಎಸ್ ಉಪಾಧ್ಯಕ್ಷರಾದ ಇಂದ್ರವಳ್ಳಿ ಅಬ್ದುಲ್ ರೆಹಮಾನ್, ಭಾನುವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯುಟಿ ಖಾದರ್ ಅವರನ್ನು ಮಂಗಳೂರಿನಲ್ಲಿ ಭೇಟಿ ಮಾಡಿ ಆಶಾ ಕಾರ್ಯಕರ್ತೆಯರ ಸಮಸ್ಯೆ ಗಳನ್ನು ಪರಿಹರಿಸುವಂತೆ ಮನವಿ ಮಾಡಿದರು.
ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ವಿತರಿಸಲು
3-4 ತಿಂಗಳು ಸಮಯವಾಗುತ್ತಿದ್ದು, ಸರ್ಕಾರ ಶೀಘ್ರವಾಗಿ ಒಂದರಿಂದ ಎರಡು ತಿಂಗಳಿನಲ್ಲಿ ವಿತರಿಸಬೇಕು.
ಆರೋಗ್ಯ ಇಲಾಖೆ ವತಿಯಿಂದ ಆಶಾ 9 ಸೇವೆಗಳನ್ನು ಆಶಾ ನಿಧಿ ತಂತ್ರಾಂಶ ದಲ್ಲಿ ನಿಷ್ಕ್ರಿಯ ಗೊಳಿಸಿರುವುದಾಗಿ ಬರುತ್ತಿದ್ದು, ಇದರಿಂದ ಕಾರ್ಯಕರ್ತರಿಗೆ 500 ರೂಪಾಯಿಯಿಂದ ಸಾವಿರ ರೂಪಾಯಿವರೆಗೆ ಪ್ರೋತ್ಸಾಹ ಧನ ಒದಗಿಸಬೇಕು.
ನಿವೃತ್ತಿ ಹೊಂದಿರುವ ಕಾರ್ಯಕರ್ತೆಯರಿಗೆ ಇಡುಗಂಟು ನೀಡಬೇಕು, 2025ರ ಬಜೆಟ್ ನಲ್ಲಿ ಭರವಸೆ ನೀಡಿದಂತೆ ಒಂದು ಸಾವಿರ ಗೌರವದನ ಹೆಚ್ಚಿಸಬೇಕು ಎಂದು ಇನ್ನಷ್ಟು ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಸಚಿವರಿಗೆ ಮನವಿ ಸಲ್ಲಿಸಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ಯುಟಿ ಖಾದರ್, ಆಶಾ ಕಾರ್ಯಕರ್ತೆ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಕುಂದು ಕೊರತೆ ಸಭೆಯನ್ನು ಬೆಂಗಳೂರಿನಲ್ಲಿ ಆಯೋಜಿಸಿ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಮತ್ತು ಶೀಘ್ರ ಕ್ರಮವನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ರೆಹಮಾನ್ ವಾಹಿನಿಗೆ ಮಾಹಿತಿ ನೀಡಿದರು.

