लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಸೆ.18-19 ಕಾಫಿ ಬೆಳೆಗಾರರ ಬೃಹತ್ ತಾಂತ್ರಿಕ ಸಮಾವೇಶ

ಚಿಕ್ಕಮಗಳೂರು: ಜಿಲ್ಲಾ ಕಾಫಿ ಬೆಳೆಗಾರರ

ಸಂಘ ಹಾಗೂ ಟೆಂಡರ್ ಟುಡೆ ಗ್ರೂಪ್ ಸಹಯೋಗದಲ್ಲಿ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಸೆ.18 ಮತ್ತು 19 ರಂದು ಇದೇ ಪ್ರಥಮ ಬಾರಿಗೆ ರಾಜ್ಯ ಮಟ್ಟದ ಕಾಫಿ ಬೆಳೆಗಾರರ ಬೃಹತ್ ತಾಂತ್ರಿಕ ಸಮಾವೇಶ ಹಾಗೂ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ ಎಂದುಟೆಂಡರ್ ಟುಡೆ ಗ್ರೂಪ್‌ನ ಅಧ್ಯಕ್ಷ ಶ್ರೀಹರಿ ಎನ್. ಗೌರಿಪುರ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿಂದು ಕರೆದಿದ್ದ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭಾಗವಹಿಸಲಿದ್ದಾರೆಂದರು.

ಸುಮಾರು 80ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು ಇತ್ತೀಚೆಗೆ ಆವಿಷ್ಕಾರವಾದ ತಾಂತ್ರಿಕ ಉತ್ಪನ್ನಗಳ ಪ್ರಾತ್ಯಕ್ಷಿಕೆ ಯನ್ನು ನೀಡಲಾಗುವುದು. ಮಡಿಕೇರಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಕಾಫಿ ಬೆಳೆಗಾರರ ಸಂಘಗಳ ಸಹಯೋಗವೂ ಇದ್ದು, ಇತ್ತೀಚೆಗೆ ಕಾಫಿ ಬೆಳೆಗಾರರು ಎದುರಿಸುತ್ತಿರುವ ಕಾರ್ಮಿಕರ ಕೊರತೆ ನೀಗಿಸಲು ಅದಕ್ಕೆ ಪೂರಕವಾದ ಯಂತ್ರೋಪಕರಣಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.

ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಕೆ.ಯು. ರತೀಶ್ ಕುಮಾರ್ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಕೆರೆಮಕಿ ಮಹೇಶ್ ಉಪಸ್ಥಿತರಿದ್ದರು

About Author

Leave a Reply

Your email address will not be published. Required fields are marked *

You may have missed