ಎಣಿಸಿ ಎಣಿಸಿ ಮೆಷಿನ್ ಸುಸ್ತು; 28ಕೋಟಿ ಹಣ-15kg ಚಿನ್ನ ನೋಡಿ ಅಧಿಕಾರಿಗಳೇ ಬೇಸ್ತು !
1 min read
ನಿವೃತ್ತ ಬಸ್ ಚಾಲಕನ ಮನೆಯಲ್ಲಿ ಕುಬೇರನ ಸಂಪತ್ತು: ಎಣಿಸಿ ಎಣಿಸಿ ಮೆಷಿನ್ ಸುಸ್ತು; 28ಕೋಟಿ ಹಣ-15kg ಚಿನ್ನ ನೋಡಿ ಅಧಿಕಾರಿಗಳೇ ಬೇಸ್ತು !
ನಿವೃತ್ತ ಸರ್ಕಾರಿ ಬಸ್ ಚಾಲಕನ ಮನೆ ಮೇಲೆ ದಾಳಿ ನಡೆಸಿದ ಬಂಗಾಳ ಪೊಲೀಸರು ಕನಿಷ್ಠ 28.5 ಕೋಟಿ ನಗದು, 15 ಚಿನ್ನ ಜಪ್ತಿಮಾಡಿದ್ದಾರೆ. ಜಪ್ತಿ ಮಾಡಿದ ಚಿನ್ನದ ಮೌಲ್ಯ 20 ಕೋಟಿ ರೂ.ಗಿಂತಲೂ ಅಧಿಕ ಎಂದು ಅಂದಾಜಿಸಲಾಗಿದೆ
ಕೊಲ್ಕೋತ್ತಾ: ಹಣಕಾಸು ಅಕ್ರಮಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ನಿವೃತ್ತ ಸರ್ಕಾರಿ ಬಸ್ ಚಾಲಕರೊಬ್ಬರ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ, ನಿವೃತ್ತ ಚಾಲಕನ ಮನೆಯಲ್ಲಿ ಬರೋಬ್ಬರಿ 15 ಕೆ.ಜಿ ಚಿನ್ನ ಮತ್ತು 20 ಕೋಟಿ ರೂ. ಹಣ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮರಳು ಮಾಫಿಯಾ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸರು ನಿವೃತ್ತ ಸರ್ಕಾರಿ ಬಸ್ ಚಾಲಕನ (ಈಗ ಕಲ್ಲು ವ್ಯಾಪಾರಿ) ಮನೆ ಮೇಲೆ ದಾಳಿ ನಡೆಸಿದ ವೇಳೆ ಭಾರೀ ಸಂಪತ್ತನ್ನ ಕಂಡು ಬೆಚ್ಚಿಬಿದ್ದಿದ್ದಾರೆ.
ನಿವೃತ್ತ ಸರ್ಕಾರಿ ಬಸ್ ಚಾಲಕನ ಮನೆ ಮೇಲೆ ದಾಳಿ ನಡೆಸಿದ ಬಂಗಾಳ ಪೊಲೀಸರು ಕನಿಷ್ಠ 28.5 ಕೋಟಿ ನಗದು, 15 ಚಿನ್ನ ಜಪ್ತಿಮಾಡಿದ್ದಾರೆ. ಜಪ್ತಿ ಮಾಡಿದ ಚಿನ್ನದ ಮೌಲ್ಯ 20 ಕೋಟಿ ರೂ.ಗಿಂತಲೂ ಅಧಿಕ ಎಂದು ಅಂದಾಜಿಸಲಾಗಿದೆ.
ಈ ಪ್ರಕರಣ ಸಂಬಂಧ ಪೊಲೀಸರು ನಿವೃತ್ತ ಬಸ್ ಚಾಲಕ ಮಿನಾರ್ ಮತ್ತು ಅವರ ಮಗನನ್ನ ಬಂಧಿಸಿದ್ದಾರೆ. ಜೊತೆಗೆ ಇತರ ಸ್ಥಳಗಳಲ್ಲೂ ಹಣ ಸಂಗ್ರಹಿಸಲಾಗಿದೆಯೇ ಎಂಬ ಬಗ್ಗೆ ಪ್ರಶ್ನೆ ಮಾಡಲಾಗುತ್ತಿದೆ. ಮಿನಾರ್, ಎಸ್ಕೇಪ್ ಆಗಿರುವ ಟಿಲ್ಲು ಮೊಂಡಲ್ ಅಲಿಯಾಸ್ ಮೊಹಮ್ಮದ್ ನಜೀಬುದ್ದೀನ್ ಅವರ ಸೋದರ ಮಾವ.


