“ವಿದ್ಯಾರ್ಥಿನಿಯರು ಶಿಸ್ತು,ಸಂಸ್ಕಾರ ಮತ್ತು ನಾಯಕತ್ವ ಬೆಳೆಸಿಕೊಳ್ಳಬೇಕು : ಎಸ್.ಎಲ್.ಭೋಜೇಗೌಡ.”
1 min read
ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ ಅವರು ಶಿವಮೊಗ್ಗದ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ವಿದ್ಯಾರ್ಥಿನಿ ಸಂಘದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿನಿಯರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿನಿಯರು ವಿದ್ಯಾಭ್ಯಾಸದ ಜೊತೆಗೆ ಉತ್ತಮ ಸಂಸ್ಕಾರ, ಶಿಸ್ತು ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಅಭಿನಂದಿಸಿದ ಅವರು, ಅವರ ಉಜ್ವಲ ಭವಿಷ್ಯಕ್ಕಾಗಿ ಶುಭಾಶಯಗಳನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಗಣ್ಯರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
✍🏻ಬರಹ ಕೃಪೆ.✍🏻

ರತ್ನ ನಾಗೇಶ್.
ಚಿಕ್ಕಮಗಳೂರು.
ನ್ಯೂಸ್ ಬ್ಯೂರೋ,ಅವಿನ್ ಟಿವಿ.
🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.
ಸ್ಥಾನಿಕ ಸಂಪಾದಕರು.
ನ್ಯೂಸ್ ಬ್ಯೂರೋ,ಅವಿನ್ ಟಿವಿ.

