लाइव कैलेंडर

August 2026
M T W T F S S
 12
3456789
10111213141516
17181920212223
24252627282930
31  
17/08/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಕಳಸ : ತಾಲೂಕಿನ ಸಂಸೆ ಕೇಂದ್ರದಲ್ಲಿರುವ ಮಹರ್ಷಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ಗಾಯನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.ಸ್ಪರ್ಧೆಯಲ್ಲಿ ಶಾಲೆಯ ಸುಮಾರು 60ಕ್ಕೂ ಅಧಿಕ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು.
ಸ್ಪರ್ಧೆಯಲ್ಲಿ ವಿನುತಾ ಪ್ರಥಮ ಸ್ಥಾನ,ರಕ್ಷಾ ದ್ವಿತೀಯ ಸ್ಥಾನ ಹಾಗೂ ಪ್ರತೀಕ್ ತೃತೀಯ ಸ್ಥಾನ ಪಡೆದುಕೊಂಡರು.
ನಂತರ ಶಾಲೆಯ ಶಿಕ್ಷಕರಾದ ಶ್ರೀ ಗುರುಮೂರ್ತಿ ಮಾತನಾಡಿ,ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಂತಹ ಸ್ಪರ್ಧೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರಾದ ಅಶೋಕ್, ರಾಜಶ್ರೀ,ಪಾರ್ವತಿ,ಪ್ರಿಯಾಂಕಾ ಹಾಗೂ ವೇದ ಉಪಸ್ಥಿತರಿದ್ದರು.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಸ್ಥಾನಿಕ ಸಂಪಾದಕರು.
ನ್ಯೂಸ್ ಬ್ಯೂರೋ,ಅವಿನ್ ಟಿವಿ.

About Author

Leave a Reply

Your email address will not be published. Required fields are marked *