लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ರೋಟರಿ ಕ್ಲಬ್ ಆಫ್ ಮೂಡಿಗೆರೆ ವತಿಯಿಂದ “ಮಾದಕ ದ್ರವ್ಯ ವ್ಯಸನ ಮುಕ್ತಿ ಮತ್ತು ನಿರ್ಮೂಲನೆ ಜಾಗೃತಿ ಕಾರ್ಯಕ್ರಮ.”

1 min read

ಮೂಡಿಗೆರೆ: ರೋಟರಿ ಕ್ಲಬ್ ಆಫ್ ಮೂಡಿಗೆರೆ ವತಿಯಿಂದ “ಮಾದಕ ದ್ರವ್ಯ ವ್ಯಸನ ಮುಕ್ತಿ ಮತ್ತು ನಿರ್ಮೂಲನೆ” ಕುರಿತ ಜಾಗೃತಿ ಕಾರ್ಯಕ್ರಮವು ಸ.ಪ.ಪೂ.ಕಾಲೇಜಿನಲ್ಲಿ ನಡೆಯಿತು.ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

 

ಈ ಸಂದರ್ಭದಲ್ಲಿ ಮಾತನಾಡಿದ ಮೂಡಿಗೆರೆ ಠಾಣೆಯ PSI ಹರ್ಷವರ್ಧನ್ ಅವರು, ಮಾದಕ ದ್ರವ್ಯಗಳಿಂದ ಯುವಜನತೆ ಹಾಳಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮಗಳು ಹಾಗೂ ಅವುಗಳಿಂದ ಉಂಟಾಗುವ ಕಾನೂನು ತೊಂದರೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. “ನೋಡು ಬೇಡ ಬ್ರೋ ಬೇಡ” ಎಂದು ಹೇಳಿ ಅಂತಹ ವ್ಯಸನಗಳಿಂದ ದೂರವಿರಲು ವಿದ್ಯಾರ್ಥಿಗಳಲ್ಲಿ ಕರೆ ನೀಡಿದರು.

ಕಾಲೇಜಿನ ಪ್ರಾಂಶುಪಾಲರು ಮಾತನಾಡಿ, “ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾದುದು. ಶಿಕ್ಷಣವೊಂದೇ ನಿಮ್ಮ ಬದುಕಿಗೆ ಅರ್ಥ ಮತ್ತು ಗೌರವವನ್ನು ತಂದುಕೊಡುತ್ತದೆ. ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗದೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು” ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷರಾದ RTN ಬಿ.ಕೆ.ದಿನೇಶ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲಾ ಫಾಸ್ಟ್ AG ವಿನೋದ್ ಕುಮಾರ್ ಶೆಟ್ಟಿ,RTN H.K.ಯೋಗೇಶ್,RTN ಆದರ್ಶ್, RTN ದೀಪಕ್ ದೊಡಯ್ಯ,ಕಾರ್ಯದರ್ಶಿ ಸಂತೋಷ್ ಸೇರಿದಂತೆ ಹಲವು ರೋಟರಿಯನ್ಸ್ ಉಪಸ್ಥಿತರಿದ್ದರು.

 

ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಅಪೂರ್ವ ಅವರು ಪ್ರಾರ್ಥಿಸಿದರು. ಬಿಂದು ಲೋಕೇಶ್ ಅವರು ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ಉಪನ್ಯಾಸಕರಾದ ಪ್ರಸಾದ್ ಬಕ್ಕಿ ಅವರು ನಿರೂಪಿಸಿದರು. ಕೊನೆಯಲ್ಲಿ ಅನುಷಾ ಅವರು ವಂದನಾರ್ಪಣೆ ಸಲ್ಲಿಸಿದರು.

✍ಬರಹ ಕೃಪೆ.✍

ಸಿದ್ದಿಕ್ ಚಕ್ಕಮಕ್ಕಿ.

ನ್ಯೂಸ್ ಬ್ಯೂರೋ,ಅವಿನ್ ಟಿವಿ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಸ್ಥಾನಿಕ ಸಂಪಾದಕರು.

ನ್ಯೂಸ್ ಬ್ಯೂರೋ,ಅವಿನ್ ಟಿವಿ.

About Author

Leave a Reply

Your email address will not be published. Required fields are marked *

You may have missed