“ಕರ್ನಾಟಕ ಹೌಸಿಂಗ್ ಬೋರ್ಡ್ ನಿವೇಶನಗಳ ದರ ಹೆಚ್ಚಳಕ್ಕೆ ಆಕ್ಷೇಪ: ಫಲಾನುಭವಿಗಳಿಗೆ ಹೊರೆಯಾಗದಂತೆ ಸೂಕ್ತ ದರ ನಿಗದಿಗೆ ಮನವಿ.”
1 min read
ಮೂಡಿಗೆರೆ:ಕರ್ನಾಟಕ ಹೌಸಿಂಗ್ ಬೋರ್ಡ್ ವತಿಯಿಂದ 2009ರಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಲಾದ ಹೌಸಿಂಗ್ ಬೋರ್ಡ್ ಮನೆಗಳು ಹಾಗೂ ನಿವೇಶನಗಳ ದರವನ್ನು ಹೆಚ್ಚಿಸಿರುವುದಕ್ಕೆ ಫಲಾನುಭವಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯ 20×30 ಅಳತೆಯ EWS ನಿವೇಶನಗಳಿಗೆ ಪ್ರತಿ ಚದರ ಅಡಿಗೆ ₹1,650 ದರ ನಿಗದಿಪಡಿಸಲಾಗಿತ್ತು. ಆದರೆ, ಇದೀಗ ನಿವೇಶನಗಳ ದರವನ್ನು ಹೆಚ್ಚಿಸಿರುವುದರಿಂದ ನಿವೇಶನ ನಿರೀಕ್ಷೆಯಲ್ಲಿರುವ ಫಲಾನುಭವಿಗಳಿಗೆ ಆರ್ಥಿಕ ಹೊರೆಯಾಗಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.


2009ರಲ್ಲಿ ನಿಗದಿಪಡಿಸಿದ್ದ ದರಕ್ಕಿಂತ ಪ್ರಸ್ತುತ ನಿವೇಶನಗಳ ದರವನ್ನು ಹೆಚ್ಚಿಸಿರುವುದು ಸಾಮಾನ್ಯ ಜನರಿಗೆ ಹೊರೆಯಾಗಲಿದೆ. ಈಗಾಗಲೇ ಆರ್ಥಿಕವಾಗಿ ಹಿಂದುಳಿದಿರುವ ಫಲಾನುಭವಿಗಳಿಗೆ ಹೆಚ್ಚುವರಿ ಮೊತ್ತ ಪಾವತಿಸುವುದು ಕಷ್ಟಕರವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದು,ಈ ಹಿನ್ನೆಲೆಯಲ್ಲಿ, ಫಲಾನುಭವಿಗಳ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ, ನಿವೇಶನಗಳಿಗೆ ಸೂಕ್ತ ಹಾಗೂ ನ್ಯಾಯಯುತ ದರ ನಿಗದಿಪಡಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಅಲ್ಲದೆ, ಈಗಾಗಲೇ ಪಾವತಿಸಿರುವ ಹಣದ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಫಲಾನುಭವಿಗಳಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.
ಹೌಸಿಂಗ್ ಬೋರ್ಡ್ ನಿವೇಶನಗಳ ದರವನ್ನು ಮರುಪರಿಶೀಲಿಸಿ, ಸಾಮಾನ್ಯ ಹಾಗೂ ಬಡ ಫಲಾನುಭವಿಗಳಿಗೆ ಹೊರೆಯಾಗದ ರೀತಿಯಲ್ಲಿ ಸೂಕ್ತ ದರ ನಿಗದಿಪಡಿಸುವಂತೆ ಮನವಿಯಲ್ಲಿ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ಆಯೋಗದ ಜಿಲ್ಲಾಧ್ಯಕ್ಷರಾದ ರಾಮಚಂದ್ರ,ತಾಲ್ಲೂಕು ಅಧ್ಯಕ್ಷ ಜಿ.ಆರ್.ಜಗದೀಶ್,ಉಪಾಧ್ಯಕ್ಷರಾದ ಕಾಂತರಾಜು,ಸಹ ಕಾರ್ಯದರ್ಶಿ ಮಂಜುನಾಥ್,ಪ್ರಧಾನ ಕಾರ್ಯದರ್ಶಿ ಝಕಾವುಲ್ಲಾ ಮುಂತಾದವರು ಉಪಸ್ಥಿತರಿದ್ದರು.
🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.
ಸ್ಥಾನಿಕ ಸಂಪಾದಕರು.
ನ್ಯೂಸ್ ಬ್ಯೂರೋ,ಅವಿನ್ ಟಿವಿ.

