ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಎಐಟಿಯುಸಿ ಬೃಹತ್ ಪ್ರತಿಭಟನೆ…
1 min read
ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಎಐಟಿಯುಸಿ ಬೃಹತ್ ಪ್ರತಿಭಟನೆ
ಚಿಕ್ಕಮಗಳೂರು: ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ
ಅಂಗನವಾಡಿ ಕಾರ್ಯಕರ್ತೆಯ ರು ಮತ್ತು ಸಹಾಯಕಿಯರ ಫೆಡೆರೇಷನ್ ಜಿಲ್ಲಾ ಘಟಕವು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ನೂರಾ ರು ಮಹಿಳೆಯರು ಮಂಗಳವಾರ ಪ್ರತಿಭಟಿಸುವ ಮೂಲಕ ಭರವಸೆ ಈಡೇರಿಕೆಗೆ ಒತ್ತಾಯಿಸಿದರು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎಐಟಿಯುಸಿ ರಾಜ್ಯಾಧ್ಯಕ್ಷ ಬಿ.ಅಮ್ಜದ್ ರಾಜ್ಯಸರ್ಕಾರ ಆರನೇ ಗ್ಯಾರಂಟಿಯನ್ನು ಚುನಾವಣಾ ಪ್ರಣಾಳಿಕೆಯ ಭರವಸೆಯಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ ರೂ.15 ಸಾವಿರ ರೂ. ಹಾಗೂ ಸಹಾಯಕಿಯರಿಗೆ 10 ಸಾವಿರ ರೂ. ಗೌರವಧನ ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಅಂಗನವಾಡಿ ಕೇಂದ್ರಗಳ ಕೆಲಸಗಳ ಜವಾಬ್ದಾರಿಯೊಂದಿಗೆ ಹೆಚ್ಚುವರಿಯಾಗಿ ಹಾಗೂ ಬಲವಂತವಾ ಗಿ ಬಿಎಲ್‌ಓ ಜವಾಬ್ದಾರಿ ಹೊರೆಸುತ್ತಿರುವುದನ್ನು ನಿಲ್ಲಿಸಬೇಕು ಹಾಗೂ ಬಿಎಲ್‌ಓ ಜವಾಬ್ದಾರಿ ನಿರಾಕರಿಸುವ ಕಾರ್ಯಕರ್ತೆಯರ ವಿರುದ್ಧ ಕ್ರಮ ಜರುಗಿಸಿ ಅಮಾನತ್ತುಗೊಳಿಸುವುದನ್ನು ತಡೆಗಟ್ಟಬೇಕು ಎಂದರು.
ಎಸ್‌ಐಆರ್ ಸಮೀಕ್ಷೆ ಮಾಡುವವರಿಗೆ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಳ ಜೊತೆಗೆ ಸಮೀಕ್ಷೆ ಪೂರ್ಣವಾಗುವುದರೊಳಗೆ ಖಾತೆಗೆ ಹಣ ಸಂದಾಯಿಸಬೇಕು. ಸಮೀಕ್ಷೆ ಸಮಯದಲ್ಲಿ ಕಾರ್ಯಕರ್ತೆಯರು ಅನಾರೋಗ್ಯದಿಂದ ಆಸ್ಪತ್ರೆಗೆ ಸೇರಿದವರಿಗೆ ವೈದ್ಯಕೀಯ ವೆಚ್ಚವು ಸರ್ಕಾರವೇ ಭರಿಸಬೇಕು ಅಥವಾ ಮೃತರಾದವರಿಗೆ ಕನಿಷ್ಟ 30 ಲಕ್ಷ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.ಎಐಟಿಯುಸಿ ಜಿಲ್ಲಾಧ್ಯಕ್ಷೆ ಗ್ರೇಟಾ ಫರ್ನಾಂಡೀಸ್ ಮಾತನಾಡಿ ಆಂಗ್ಲಭಾಷೆ ಅಭ್ಯಾಸವಿಲ್ಲದ ಮತ್ತು ಮೊಬೈಲ್ ನಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲದ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ತಂತ್ರ ಜ್ಞಾನ ಅನುಭವವುಳ್ಳ ಓರ್ವರನ್ನು ನೇಮಿಸಬೇಕು. 2002ರ ಮಾಹಿತಿ ಸಿಗದಿರುವವರೆಗೆ ದೃಢೀಕೃತ
ಅಂಚೆ ಮೂಲಕ ವಿಳಾಸಕ್ಕೆ ಕಳುಹಿಸಬೇಕು ಎಂದು ಆಗ್ರಹಿಸಿದರು.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಡಿಎ ರೂ.30 ರೂ.ಗಳು ಬೆಲೆ ಏರಿಕೆಗೆ ಅನುಗುಣವಾಗಿ ಹೆಚ್ಚಿಸಬೇಕು. ಅಲ್ಲದೇ ನಗರ ಪ್ರದೇಶ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುವವರಿಗೂ ವಿಸ್ತರಿಸ ಬೇಕು. ಮಾತೃವಂದನ, ಭಾಗ್ಯಲಕ್ಷ್ಮೀ ಪ್ರೋತ್ಸಾಹ ಧನ ಬಿಡುಗಡೆಗೊಳಿಸಬೇಕು ಎಂದು ತಿಳಿಸಿದರು. ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪ ಬಸವರಾಜ್ ಮಾತನಾಡಿ ಕಾರ್ಯಕರ್ತೆಯರ ಪ್ರಭಾರ ಮಾಸಿಕ ಭತ್ಯೆ ಹೆಚ್ಚಿಸಬೇಕು. ಮೊಟ್ಟೆಯ ದರ ಏರುಪೇರಾಗುತ್ತಿದ್ದು ಮಾರುಕಟ್ಟೆ ದರದ ಹೆಚ್ಚಳಕ್ಕೆ ಅನುಗುಣವಾಗಿ ಮೊಟ್ಟೆ ಹಣವನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲೆಯ ಸುಮಾರು 500 ಕ್ಕೂ ಹೆಚ್ಚು ಕಾರ್ಯಕರ್ತೆರು, ಸಹಾಯಕಿಯರು ಭಾಗಿ ಯಾಗಿದ್ದರು. ಈ ಸಂದರ್ಭದಲ್ಲಿ ಎಐಟಿಯುಸಿ ಅಜ್ಜಂಪುರ ತಾಲ್ಲೂಕು ಅಧ್ಯಕ್ಷೆ ಕೆ.ಸಿ.ವಿಜಯಕುಮಾರಿ, ವಿವಿಧ ತಾಲ್ಲೂಕು ಅಧ್ಯಕ್ಷರಾದ ಕಲಾ, ಪಾರ್ವತಿ, ಶೈಲಾ ಬಸವರಾಜ್, ಕೆ.ಆರ್.ಶೈಲಾ, ಅನಿತಾ ಪೆರೇರಾ ಇದ್ದರು

