लाइव कैलेंडर

August 2026
M T W T F S S
 12
3456789
10111213141516
17181920212223
24252627282930
31  
29/08/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ವಿಗ್ರಹ ಬಳಸದಿರಲು ಡಿಸಿ ಸೂಚನೆ….

1 min read

ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ವಿಗ್ರಹ ಬಳಸದಿರಲು ಡಿಸಿ ಸೂಚನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ವಿಗ್ರಹಗಳ ತಯಾರಿಕೆ, ಮಾರಾಟ, ಸಂಗ್ರಹಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಸಂಜೆ 2026ನೇ ಸಾಲಿನ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ బ్లాక్టరా ఆఫ్ వ్యారినో (పిఒవి) మత్తు రాశాయనిక ಬಣ್ಣ ಬಳಸಿದ ಗಣೇಶ ಮೂರ್ತಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ, ಬಳಕೆ ಮತ್ತು ವಿಸರ್ಜನೆ ಹಾಗೂ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಉತ್ತೇಜಿಸುವ ಸಂಬಂಧ ಅನುಸರಿಸಬೇಕಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ವಿಗ್ರಹಗಳನ್ನು ಮಾರಾಟ ಮಾಡಲು ಅವಕಾಶವಿಲ್ಲ. ಇದು ಕಾನೂನು ಬಾಹಿರ ಅಧಿಕಾರಿಗಳು ನಗರದಾದ್ಯಂತ ತಪಾಸಣೆ ನಡೆಸಿ ಅಂತಹ ವಿಗ್ರಹಗಳು ಪತ್ತೆಯಾದಲ್ಲಿ ತಕ್ಷಣ ವಶಪಡಿಸಿಕೊಳ್ಳಬೇಕು. ಮತ್ತು ಮಾರಾಟಗಾರರಿಗೆ ದಂಡ ವಿಧಿಸಬೇಕು. ಗಣಪತಿ ವಿಗ್ರಹ ತಯಾರಕರು ಮಣ್ಣಿನ ಗಣಪತಿಗಳನ್ನು ಮಾತ್ರ ತಯಾರಿಸಬೇಕು ಎಂದರು.

ಹಬ್ಬ ಆಚರಿಸುವುದು ನಮ್ಮ ಸಂಸ್ಕೃತಿಯ ಹೆಮ್ಮೆ. ಆದರೆ ಅದು ಪರಿಸರ ಸ್ನೇಹಿಯಾಗಿರಬೇಕು. ಮಣ್ಣಿನ ನೈಸರ್ಗಿಕ ಬಣ್ಣಗಳಿಂದ ಮಾಡಿದ, ಸುಲಭವಾಗಿ ನೀರಿನಲ್ಲಿ ಕೆರಗುವ ಗಣೇಶನ ವಿಗ್ರಹಗಳನ್ನೇ ಪೂಜಿಸಿ ಈಗಾಗಲೇ ಪರಿಸರ ಸ್ನೇಹಿ ಗಣೇಶನಿಗೆ ಆದ್ಯತೆ ನೀಡುತ್ತಿರುವುದು ಅತ್ಯಂತ ಶ್ಲಾಘನೀಯ ವಿಷಯವಾಗಿದೆ. ನಮ್ಮ ಹಬ್ಬ, ನಮ್ಮ ಪರಿಸರ ನಮ್ಮ ಜವಾಬ್ದಾರಿ, ಜಿಲ್ಲಾಡಳಿತದ ಈ ಕಾರ್ಯವು ಸಾರ್ವಜನಿಕರ ಸಹಕಾರವಿಲ್ಲದೆ ಸಂಪೂರ್ಣ ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ತಿಳಿಸಿದರು. ಜಿಲ್ಲಾಡಳಿತವು ಪೊಲೀಸ್ ಇಲಾಖೆ, ಸ್ಥಳೀಯ ಸಂಸ್ಥೆಗಳು ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯ ಅನಿರೀಕ್ಷಿತ

ಭೇಟೆಯ ಮೂಲಕ ಜಿಲ್ಲೆಯಾದ್ಯಂತ ಕಾರ್ಯಾಚರಣೆ ನಡೆಸಿ

ಪಿಒಪಿ ವಿಗ್ರಹಗಳ ಬಳಕೆಯನ್ನು ತಡೆಗಟ್ಟಲು ಕ್ರಮ ವಹಿಸಬೇಕು

ಎಂದು ಹೇಳಿದರು.

ಸಾರ್ವಜನಿಕರು ಮಣ್ಣಿನ ಗಣಪತಿಯನ್ನು ಪೂಜಿಸುವ ಮೂಲಕ ಪರಿಸರ ಸ್ನೇಹಿ ಗಣೇಶ ಚತುರ್ಥಿಯನ್ನು ಪರಿಸರವನ್ನು ಕಾಪಾಡಬೇಕೆಂದು ಮತ್ತು ಜಿಲ್ಲಾಡಳಿತ, ನಗರ ಸ್ಥಳೀಯ ಸಂಸ್ಥೆಗಳು ನೀಡುವ ನಿರ್ದೇಶನವನ್ನು ಪಾಲಿಸಬೇಕೆಂದು ಅವರು ತಿಳಿಸಿದರು.

ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಯ ಕಾಲಕ್ಕೆ ಮೆರವಣಿಗೆಯ ಮಾರ್ಗವನ್ನು ಮುಂಚಿತವಾಗಿ ಪೊಲೀಸ್ ಠಾಣೆಗೆ ತಿಳಿಸುವುದು ಮತ್ತು ಮಾರ್ಗ ಬದಲಾವಣೆ ಮಾಡುವುದಿದ್ದಲ್ಲಿ ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಯ ಕಾಲಕ್ಕೆ ಸಾರ್ವಜನಿಕರು ಹಾಗೂ ಸಂಚಾರಕ್ಕೆ ಅಡೆತಡೆಯಾಗದಂತೆ ನೋಡಿಕೊಳ್ಳುವುದು ಆಗತ್ಯ ಎಂದೆ ಅವರು, ನಮ್ಮ ಪೂಜೆ ಮುಂದಿನ ಪೀಳೆಗೆಗೆ ಶಾಪವಾಗಬಾರದು. ಆಚರಣೆಗಳ ಪರಿಣಾಮದಿಂದಾಗಿ ಆರೋಗ್ಯ ಹಾಳಾಗದಂತೆ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಹೊಣೆ. ಈ ನಿಟ್ಟಿನಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವಂತೆ ತಿಳಿಸಿ ದರು.

ಸಾಂಪ್ರದಾಯಿಕವಾಗಿ ತಯಾರಿಸುವ ಮಣ್ಣಿನ ಗಣೇಶ ಮೂರ್ತಿಗಳನ್ನು ಮಾಡಿ, ಪೂಜಿಸಿ ಮತ್ತು ಮೂರ್ತಿ ವಿಸರ್ಜನೆಯನ್ನು ಮನೆಯಲ್ಲಿ ಒಂದು ಬಕೆಟ್ ನೀರಿನಲ್ಲಿ ವಿಸರ್ಜನೆ ಮಾಡುವ ಬಗ್ಗೆ ಹಾಗೂ ಆ ಮಣ್ಣಿನಿಂದ ಗಿಡಗಳನ್ನು, ಸಸಿಗಳನ್ನು ಬೆಳೆಸುವುದರ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಬೇರೆ ಜಿಲ್ಲೆಗಳಿಂದ ನಮ್ಮ ಜಿಲ್ಲೆಗೆ ಪಿಒಪಿ ವಿಗ್ರಹಗಳು ಬರದಂತೆ ತಡೆಯಲು ಜಿಲ್ಲೆಯ ಗಡಿ ಭಾಗಗಳಲ್ಲಿ ಹಾಗೂ ನಗರಗಳ ಗಡಿಯಲ್ಲಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಿ ಕಟ್ಟು ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು. ನಿಯಮ ಉಲ್ಲಂಘಿಸಿ ಸಾಗಾಟ ಮಾಡುವ ವಾಹನಗಳು ಮತ್ತು ಪಿಒಪಿ ವಿಗ್ರಹಗಳನ್ನು ವಶಪಡಿಸಿಕೊಳ್ಳುವಂತೆ ದರು.

ಗಣೇಶ ಮೂರ್ತಿಯನ್ನು ನಗರ ಸ್ಥಳೀಯ ಸಂಸ್ಥೆಗಳು ನಿಯೋಜಿಸಿದ ಸಾರ್ವಜನಿಕ ನೀರಿನ ತೊಟ್ಟೆಯಲ್ಲಿ ಕಡ್ಡಾಯವಾಗಿ ವಿಸರ್ಜಿಸಬೇಕು. ವಿಸರ್ಜನೆ ಸಂದರ್ಭದಲ್ಲಿ ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ ಇತ್ಯಾದಿಗಳನ್ನು ಪ್ರತ್ಯೇಕಿಸಿ ಮೂರ್ತಿಯೊಂದಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ `ವಿಲೇವಾರಿ ಮಾಡಬೇಕು ಎಂದರು.

ಉತ್ಸವ ಮೂರ್ತಿ ವಿಸರ್ಜಿಸುವ ಕೆರೆ, ಕಲ್ಯಾಣಿ ಮತ್ತು ಸ್ಥಳದಲ್ಲಿ ಅಗತ್ಯ ವ್ಯವಸ್ಥೆಗಳಾದ ಬೆಳಕು, ರಕ್ಷಣೆ, ಸಹಾಯಕ సుంది, ಬರಲು ಬ್ಯಾರಿಕೇಡ್ ವ್ಯವಸ್ಥೆ, ರಸ್ತೆ ಸಂಚಾರ ನಿಯಂತ್ರಣ ಸೂಚನೆ ನೀಡಲು ಧ್ವನಿವರ್ಧಕ, ಆಂಬುಲೆನ್ಸ್ ಮತ್ತು ಪ್ರಥಮ ಚಿಕಿತ್ಸೆ, ದೊಡ್ಡ ಗಣಪತಿ ವಿಗ್ರಹಗಳನ್ನು ವಿಸರ್ಜಿಸಲು ಕಲ್ಯಾಣಿಗಳಲ್ಲಿ ನೀರಿನ ವ್ಯವಸ್ಥೆ, ಬೃಹತ್ ಕ್ರೇನ್‌ಗಳು, ಕಾಲ ಕಾಲಕ್ಕೆ ಕಲ್ಯಾಣಿಯ ಸ್ವಚ್ಛತೆಗಾಗಿ ಜೆಸಿಬಿಗಳು ಹಾಗೂ ತುರ್ತು ನಿರ್ವಹಣಾ ಸುರಕ್ಷಾ ಪಡೆಗಳ ವ್ಯವಸ್ಥೆ ಕಲ್ಪಿಸುವಂತೆ ಸ್ಥಳೀಯ ಸಂಸ್ಥೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ, ಎಎಸ್‌ಪಿ ಸಿ.ಟಿ.ಜಯಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಕೆ.ಮಂಜುನಾಥ್, ಪೌರಾಯುಕ್ತ ಬಿ.ಸಿ.ಬಸವರಾಜು, ಜಿಪಂ ಉಪ ಕಾರ್ಯದರ್ಶಿ ಪೂರ್ಣಿಮಾ ಮುಂತಾದ ಅಧಿಕಾರಿಗಳು ಹಾಜರಿದ್ದರು.

About Author

Leave a Reply

Your email address will not be published. Required fields are marked *