“ಅಂತರರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಹಂತೂರು ಗ್ರಾಮದ ಸಹೋದರಿಯರಿಗೆ ಪ್ರಥಮ ಸ್ಥಾನ.”
1 min read
ಮೂಡಿಗೆರೆ:ಶಿವಮೊಗ್ಗದಲ್ಲಿ ನಡೆದ ಅಂತರರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಮೂಡಿಗೆರೆ ತಾಲ್ಲೂಕಿನ ಹಂತೂರು ಗ್ರಾಮದ ಇಬ್ಬರು ಸಹೋದರಿಯರು ಪ್ರಥಮ ಸ್ಥಾನ ಪಡೆದು ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ.
ತಾಲ್ಲೂಕಿನ ಬಿ.ಜಿ.ಎಸ್ ಶಾಲೆಯ ವಿದ್ಯಾರ್ಥಿನಿಯರಾದ ಆರಾಧ್ಯ ಹಾಗೂ ಅನನ್ಯ ಅವರು ಕರಾಟೆ ಸ್ಪರ್ಧೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಆರಾಧ್ಯ ಅವರು ಅಂಡರ್–14 ವಿಭಾಗದಲ್ಲಿ ಹಾಗೂ ಅನನ್ಯ ಅವರು ಅಂಡರ್–12 ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಇಬ್ಬರೂ ಹಂತೂರು ಗ್ರಾಮದ ಸುಧೀನ್ ಗೌಡ ಹಾಗೂ ರಜಿನಿ ದಂಪತಿಯ ಪುತ್ರಿಯರಾಗಿದ್ದು,ಕರಾಟೆ ತರಬೇತುದಾರ ಸೆನ್ಸಾಯ್ ರಾಜೇಂದ್ರನ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು ಈ ಸಾಧನೆ ಮಾಡಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಗ್ರಾಮ, ಶಾಲೆ ಹಾಗೂ ತಾಲೂಕಿಗೆ ಕೀರ್ತಿ ತಂದ ವಿದ್ಯಾರ್ಥಿನಿಯರನ್ನು ಶಾಲೆಯ ಪ್ರಾಂಶುಪಾಲರು,ಶಿಕ್ಷಕರು,ಆಡಳಿತ ಮಂಡಳಿ ಸದಸ್ಯರು ಹಾಗೂ ಕುಟುಂಬಸ್ಥರು ಅಭಿನಂದಿಸಿ,ಮುಂದಿನ ಸಾಧನೆಗಳಿಗೆ ಶುಭ ಹಾರೈಸಿದ್ದಾರೆ.
✍🏻ಬರಹ ಕೃಪೆ.✍🏻

ಸಿದ್ದಿಕ್ ಚಕ್ಕಮಕ್ಕಿ.
ನ್ಯೂಸ್ ಬ್ಯೂರೋ,ಅವಿನ್ ಟಿವಿ.
🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.
ಸ್ಥಾನಿಕ ಸಂಪಾದಕರು.
ನ್ಯೂಸ್ ಬ್ಯೂರೋ,ಅವಿನ್ ಟಿವಿ.

