लाइव कैलेंडर

October 2026
M T W T F S S
 1234
567891011
12131415161718
19202122232425
262728293031  
22/10/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಅಭಿನಯಕ್ಕಾಗಿ ಕನ್ನಡಕ್ಕೆ ಎರಡನೇಯ ಬಾರಿ ಮನ್ನಣೆ: ಕನ್ನಡ ಚಲನಚಿತ್ರ ರಂಗದ ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ ಘೋಷಣೆ….

1 min read

ಅವಿನ್ ಟಿವಿ ಸುದ್ದಿಜಾಲ ✍️: ಅಭಿನಯಕ್ಕಾಗಿ ಕನ್ನಡಕ್ಕೆ ಎರಡನೇಯ ಬಾರಿ ಮನ್ನಣೆ: ಕನ್ನಡ ಚಲನಚಿತ್ರ ರಂಗದ ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ ಘೋಷಣೆ.

ನವದೆಹಲಿ ಸೆ 16: ಹಿರಿಯ ಚಲನ ಚಿತ್ರ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಲಭಿಸಿದೆ, ಡಾ.ರಾಜಕುಮಾರ್ ನಂತರ ಈ ಪ್ರಶಸ್ತಿ ಪಡೆದ ಕನ್ನಡದ ಎರಡನೇ ನಟರಾಗಿದ್ದಾರೆ. ಛಾಯಾಗ್ರಾಹಕ ವಿಕೆ ಮೂರ್ತಿಯವರು ಸೇರಿದಂತೆ ಇದು ಕನ್ನಡಕ್ಕೆ ಮೂರನೆಯ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸಂದಾಯವಾದಂತಾಗಿದೆ.

ಭಾರತೀಯ ಚಿತ್ರರಂಗಕ್ಕೆ, ವಿಶೇಷವಾಗಿ ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆ ಹಾಗೂ ಸುದೀರ್ಘ ಸಿನಿ ಪಯಣಕ್ಕಾಗಿ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ಸೆಪ್ಟೆಂಬರ್ 22ರಂದು ಗುಜರಾತ್‍ನ ಕೆವಾಡಿಯಾದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಅವರಿಗೆ ಈ ಗೌರವ ಪ್ರದಾನವಾಗಲಿದೆ

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ ಅನಂತ್ ನಾಗ್ ಅವರನ್ನು 2024ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಮೂಲಕ ಡಾ. ರಾಜ್‍ಕುಮಾರ್ ಬಳಿಕ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆಯುತ್ತಿರುವ ಕನ್ನಡದ ಎರಡನೇ ನಟ ಎಂಬ ಹೆಗ್ಗಳಿಕೆಗೆ ಅನಂತ್ ನಾಗ್ ಪಾತ್ರರಾಗಿದ್ದಾರೆ .

ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ಡಾ. ರಾಜ್‍ಕುಮಾರ್ ಅವರಿಗೆ 1995ರ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿತ್ತು. ಅವರು ಈ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ ನಟರಾಗಿದ್ದರು. ಇದೀಗ ಹಲವು ವರ್ಷಗಳ ಬಳಿಕ ಅನಂತ್ ನಾಗ್ ಅವರಿಗೆ ಈ ಪ್ರತಿಷ್ಠಿತ ಗೌರವ ದೊರೆತಿದೆ.

ಅನಂತ್ ನಾಗ್ ಅವರು ಕನ್ನಡ ಸೇರಿದಂತೆ ಭಾರತೀಯ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ತಮ್ಮ ಅಭಿನಯದ ಮೂಲಕ ಗುರುತಿಸಿಕೊಂಡಿದ್ದಾರೆ. ಅವರ ಸುದೀರ್ಘ ಸಿನಿ ಪಯಣ ಮತ್ತು ವೈವಿಧ್ಯಮಯ ಪಾತ್ರಗಳ ನಿರ್ವಹಣೆಯನ್ನು ಪ್ರಶಸ್ತಿ ಆಯ್ಕೆಯ ಸಂದರ್ಭದಲ್ಲಿ ಪರಿಗಣಿಸಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಅವರು 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದು, ಕನ್ನಡದ ಹೊರತಾಗಿ ಹಿಂದಿ, ತೆಲುಗು, ತಮಿಳು, ಮರಾಠಿ, ಮಲಯಾಳಂ ಮತ್ತು ಇಂಗೀಷ್ ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ.

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭವು ಸೆಪ್ಟೆಂಬರ್ 22, 2026ರಂದು ಗುಜರಾತ್‍ನ ಏಕ್ತಾ ನಗರ (ಕೆವಾಡಿಯಾ)ದಲ್ಲಿ ನಡೆಯಲಿದೆ. ಇದೇ ಸಮಾರಂಭದಲ್ಲಿ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನವಾಗಲಿದೆ.

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಅತ್ಯುತ್ತಮ ಕೊಡುಗೆ ನೀಡಿದ ವ್ಯಕ್ತಿಗೆ ನೀಡಲಾಗುತ್ತದೆ.
•••••••••••••
ಡಿ ಎಂ ಮಂಜುನಾಥಸ್ವಾಮಿ
ಅವಿನ್ ಟಿವಿ ಸುದ್ದಿಜಾಲ …. ✍️
ಚಿಕ್ಕಮಗಳೂರು

About Author

Leave a Reply

Your email address will not be published. Required fields are marked *

You may have missed