ದಕ್ಷಿಣ ವಲಯ ಅಥ್ಲೆಟಿಕ್ಸ್‌ನಲ್ಲಿ ಚಿಕ್ಕಮಗಳೂರು ಪ್ರತಿಭೆಯ ಪ್ರಥಮ ಮಿಂಚು……
1 min read
ಅವಿನ್ ಟಿವಿ ಸುದ್ದಿಜಾಲ ✍️: 🏃♂️ ದಕ್ಷಿಣ ವಲಯ ಅಥ್ಲೆಟಿಕ್ಸ್‌ನಲ್ಲಿ ಚಿಕ್ಕಮಗಳೂರು ಪ್ರತಿಭೆಯ ಪ್ರಥಮ ಮಿಂಚು.
ಚಿಕ್ಕಮಗಳೂರು ಸೆ 17: ಚಿಕ್ಕಮಗಳೂರು ಜಿಲ್ಲೆಯ ದೇವನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಧನಂಜಯ ಹಾಗೂ ಸುಮಿತ್ರಾ ದಂಪತಿಯ ಪುತ್ರ, ಪ್ರತಿಭಾವಂತ ಕ್ರೀಡಾಪಟು ಪ್ರಥಮ್ ಅವರು ಪುದುಚೇರಿಯಲ್ಲಿ ನಡೆದ 37ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.
U-20 ಬಾಲಕರ 1500 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿರುವ ಪ್ರಥಮ್, ಕ್ರೀಡಾಕೂಟದಲ್ಲಿ ದಾಖಲೆ ನಿರ್ಮಿಸುವ ಮೂಲಕ ಚಿಕ್ಕಮಗಳೂರು ಜಿಲ್ಲೆಯ ಕ್ರೀಡಾ ಕ್ಷೇತ್ರಕ್ಕೆ ಹೆಮ್ಮೆ ತಂದಿದ್ದಾರೆ.
ಗ್ರಾಮೀಣ ಪ್ರದೇಶದಿಂದ ಬಂದ ಪ್ರತಿಭೆಯೊಂದು ದಕ್ಷಿಣ ವಲಯ ಮಟ್ಟದಲ್ಲಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿರುವುದು ಜಿಲ್ಲೆಯ ಕ್ರೀಡಾ ಪ್ರತಿಭೆಗಳ ಶಕ್ತಿಗೆ ಸಾಕ್ಷಿಯಾಗಿದೆ.
ಪ್ರಥಮ್ ಅವರ ಈ ಸಾಧನೆಗೆ ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರು ಮೆಚ್ಚುಗೆ ಸೂಚಿಸಿ ಅಭಿನಂದಿಸಿದ್ದಾರೆ.
ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರದ ಸಾಧನೆಗಳನ್ನು ಮಾಡಲಿ, ಭಾರತವನ್ನು ಪ್ರತಿನಿಧಿಸುವ ಕ್ರೀಡಾಪಟುವಾಗಿ ಹೊರಹೊಮ್ಮಿ ಚಿಕ್ಕಮಗಳೂರು, ಕರ್ನಾಟಕ ಹಾಗೂ ದೇಶಕ್ಕೆ ಕೀರ್ತಿ ತರುವಂತಾಗಲಿ ಈ ಚಿಕ್ಕಮಗಳೂರಿನ ಪ್ರತಿಭೆ.
•••••••••••••••
ಡಿ ಎಂ ಮಂಜುನಾಥಸ್ವಾಮಿ
ಅವಿನ್ ಟಿವಿ ಸುದ್ದಿಜಾಲ …. ✍️
ಚಿಕ್ಕಮಗಳೂರು

