ರೈತರ ಬದುಕು ಉಳಿಸಲು ಸರ್ಕಾರ ಬದ್ಧ : ಡಿ.ಕೆ.ಶಿ. ಭರವಸೆ….
1 min read
ರೈತರ ಬದುಕು ಉಳಿಸಲು ಸರ್ಕಾರ ಬದ್ಧ : ಡಿ.ಕೆ.ಶಿ. ಭರವಸೆ….
ಚಿಕ್ಕಮಗಳೂರು : ಕಸ್ತೂರಿ ರಂಗನ್ ವರದಿ ಪರಿಸರ ಸೂಕ್ಷ್ಮವಲಯ ಸೇರಿದಂತೆ ಮಲೆನಾಡಿನ ಸಮಸ್ಯೆಗಳ ಬಗ್ಗೆ ವಿಶೇಷ ಅಧಿವೇಶನದಲ್ಲಿ ಚರ್ಚಿಸುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಶನಿವಾರ ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ ಸಿ.ಎಂ. ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ರೈತರ ಬದುಕು ಉಳಿಸಲು ಸರ್ಕಾರ ಕೆಲಸ ಮಾಡಲಿದೆ. ಈ ಭಾಗದ ರೈತರ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದೀರಿ, ರಾಜ್ಯದ ಹಿತಕ್ಕಾಗಿ ಅಗತ್ಯವಿರುವ ಕಾನೂನು ತಿದ್ದುಪಡಿ ಮಾಡುವ ಪ್ರಯತ್ನ ಮಾಡುವೆ ಎಂದು ಭರವಸೆ ನೀಡಿದರು.
ರೈತ ಮುಖಂಡರು, ಸಂಘಟನೆಗಳು ಕಸ್ತೂರಿರಂಗನ್ ವಿಚಾರದಲ್ಲಿ ಅರಿವು ಮೂಡಿಸಿ, ವಿಚಾರಗಳನ್ನು ಬಿಡಿಸಿ ಹೇಳಿದ್ದೀರಿ. ಇದಕ್ಕೆ ಪರಿಹಾರ ನೀಡಲು, ತೀರ್ಮಾನ ಮಾಡಿ ನಿಮ್ಮ ಮುಂದೆ ಬಂದಿರುವೆ ಎಂದರು. ಉನ್ನತ ಮಟ್ಟದ ಸಮಿತಿ ರಚನೆ, ಕೇರಳ ಮಾದರಿಯಲ್ಲಿ ಭೌತಿಕ ಸಮೀಕ್ಷೆ ಸೇರಿದಂತೆ ಅನೇಕ ಸಲಹೆ ನೀಡಿದ್ರು, ಈ ಸಭೆಗೆ ಮೂಲ ಕಾರಣ ನಿಮ್ಮ ಶಾಸಕರು ಹಾಗೂ ಜಿಲ್ಲಾ ಮಂತ್ರಿಗಳು ಎಂದು ತಿಳಿಸಿದರು.
ವಿರೋಧ ಪಕ್ಷದ ಸ್ನೇಹಿತರು ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಲಿಲ್ಲ. ಶಾಸಕರ ಜೊತೆ ಚರ್ಚೆ ಮಾಡಿದಾಗ ಕಸ್ತೂರಿ ರಂಗನ್ ವರದಿ ಬಗ್ಗೆ ಪ್ರಸ್ತಾಪ ಮಾಡಿದರು. ಜನರು ಹಾಗೂ ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು ರೈತರ ಬದುಕು ಉಳಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ ಎಂದರು.
ಈ ಅಧಿವೇಶನದಲ್ಲಿ ನಾನು ತೀರ್ಮಾನಕ್ಕೆ ಬರುವ ಮುನ್ನ, ಅಭಿಪ್ರಾಯ ಸಂಗ್ರಹಿಸಲು ಬಂದಿರುವೆ. ಕಷ್ಟಕಾಲದಲ್ಲಿ ಬೆನ್ನಿಗೆ ನಿಂತಿದ್ದೀರಿ. ಅಧಿಕಾರ ಕೊಟ್ಟು ಶಕ್ತಿ ನೀಡಿದ್ದೀರಿ. ದೇವರು ಕೊಟ್ಟಿರುವ ಅವಕಾಶದಲ್ಲಿ ನಿಮ್ಮ ಸೇವೆಗೆ ಸಂಕಲ್ಪ ಮಾಡಿದ್ದೇನೆ” ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಬಾಕಿ ಇರುವ ಅರ್ಜಿ ವಿಲೇವಾರಿಗೆ ಕ್ರಮ ಕೈಗೊಳ್ಳುತ್ತೇವೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರೈತರು ಉಳುಮೆ ಮಾಡುತ್ತಿರುವ ಜಮೀನನ್ನು ಕಾಪಾಡಿಕೊಳ್ಳಿ, ಹೊಸದಾಗಿ ಯಾರೂ ಒತ್ತುವ ಮಾಡಬೇಡಿ. ಮಾಡಿದರೆ ನಾವು ಅವಕಾಶ ನೀಡಲು ಆಗುವುದಿಲ್ಲ ಇಂದು ಸ್ಪಷ್ಟಪಡಿಸಿದರು ಈ ಭಾಗದ ಶಾಸಕರು ಕಾಫಿ ಲೀಸ್ ವಿಚಾರ,ಫಾರಂ 57 ವಿಚಾರ ಪ್ರಸ್ತಾಪಿಸಿದ್ದಾರೆ. ಅರಣ್ಯ ಹಕ್ಕು ಕಾಯ್ದೆಯಲ್ಲಿ ಎಲ್ಲರಿಗೂ 25 ವರ್ಷ ನಿಗದಿ ಮಾಡಲು ಮುಂದಿನ ದಿನಗಳಲ್ಲಿ ಅಧಿವೇಶನದಲ್ಲಿ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿ, ಅಗತ್ಯ ಬಿದ್ದರೆ ಕೇಂದ್ರಕ್ಕೆ ಪ್ರತ್ಯೇಕ ನಿಯೋಗ ಕರೆದೊಯ್ಯುವೆ” ಎಂದರು.
ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಸಚಿವ ಸಂಪುಟ ಸಭೆ :
ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಸಚಿವ ಸಂಪುಟ ಸಭೆ ಮಾಡುವೆ. ಪಿಂಚಣಿ, ನಿವೇಶನ ಸೇರಿದಂತೆ ಅನೇಕ ಸಮಸ್ಯೆ ಬಗೆಹರಿಸಲು ಮುಂದಾಗುತ್ತೇವೆ ಎಂದು ತಿಳಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆಗಳಿಗೆ ಅವಕಾಶವಿದೆ. ಟೀಕೆ ಮಾಡಿದಾಗ ನಾವು ಎಚ್ಚರಿಕೆಯಿಂದ ಹೆಜ್ಜೆ ಇಡುತ್ತೇವೆ. ನಾನು ಭಾವನೆ ಮೇಲೆ ರಾಜಕಾರಣ ಮಾಡುವುದಿಲ್ಲ. ನಿಮ್ಮ ಬದುಕಿಗಾಗಿ ಕೆಲಸ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಅಧಿವೇಶನದಲ್ಲಿ ಗಲಾಟೆಗೆ ಅವಕಾಶ ನೀಡುವುದಿಲ್ಲ ಎಂದರು.

