ಮೂಡಿಗೆರೆ : ಅಕ್ಟೋಬರ್ 23ರಂದು ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಸುವರ್ಣ ಮಹೋತ್ಸವ….
1 min read
ಮೂಡಿಗೆರೆ : ಅಕ್ಟೋಬರ್ 23ರಂದು ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಸುವರ್ಣ ಮಹೋತ್ಸವ….
ಮೂಡಿಗೆರೆ ತಾಲೂಕು ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಪ್ರಾರಂಭವಾಗಿ 50 ವರ್ಷ ತುಂಬಿದ್ದು, ಈ ಹಿನ್ನಲೆಯಲ್ಲಿ ಅಕ್ಟೋಬರ್ 23ರಂದು ಸುವರ್ಣ ಮಹೋತ್ಸವ ಹಾಗೂ ಗಂಗನಮಕ್ಕಿಯಲ್ಲಿ ನಿರ್ಮಾಣಗೊಂಡಿರುವ ಸುಮುದಾಯದ ಸುವರ್ಣ ಸಂಭ್ರಮ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಮನೋಜ್ ಕುಮಾರ್ ಹೇಳಿದರು.
ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ 9 ಗಂಟೆಗೆ ಪಟ್ಟಣದ ಪ್ರವಾಸಿ ಮಂದಿರದಿಂದ ಗಂಗನಮಕ್ಕಿವರೆಗೆ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಯಲಿದ್ದು, ನಂತರ ಸೋಲೂರು ಆರ್ಯ ಈಡಿಗ ಮಹಾ ಸಂಸ್ಥಾನ ಮಠದ ಶ್ರೀ ವಿಖ್ಯಾತನಂದ ಸರಸ್ವತಿ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ.
ಮುಖ್ಯ ಅತಿಥಿಯಾಗಿ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಶಾಸಕಿ ನಯನಾ ಮೋಟಮ್ಮ.ರಾಷ್ಟ್ರೀಯ ಬಿಲ್ಲವ ಮಹಾ ಮಂಡಳಿ ಅಧ್ಯಕ್ಷ ಸೂರ್ಯಕಾಂತ್ ಜಯಸುವರ್ಣ, ಶ್ರೀ ಕ್ಷೇತ್ರ ಕುದ್ರೋಳಿ ಗೋಕಣಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಆರ್.ಪದ್ಮರಾಜ್, ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷ ವೇದಕುಮಾರ್, ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದ
ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಕಾರ್ಕಳ ಶಾಸಕ ಸುನೀಲ್‌ಕುಮಾರ್, ವಿಧಾನ ಪರಿಷತ್ ಮಾಜಿ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಸಭಾ ಕಾರ್ಯಕ್ರಮದ ಬಳಿಕ ಸಮುದಾಯದ ಕಲಾವಿದರಿಂದ ಸಾಂಸ್ಕ್ರುತಿಕ ಕಾರ್ಯಕ್ರಮ ನಡೆಯಲಿದ್ದು, ಸಮುದಾಯದವರೆಲ್ಲರೂ ಆಗಮಿಸಬೇಕೆಂದು ಮನವಿ ಮಾಡಿದರು. ಸಂಘದ ಗೌರವಾಧ್ಯಕ್ಷರಾದ ಸುರೇಶ್‌ಪೂಜಾರಿ, ಯೋಗೇಶ್ ಪೂಜಾರಿ, ಕೇಶವ ಸುವರ್ಣ, ಎಂ.ಜಿ.ನಾಗರತ್ನ, ಕೇಶವ ಸುವರ್ಣ, ಉಪಾಧ್ಯಕ್ಷರಾದ ಗಿರೀಶ್‌ಪೂಜಾರಿ, ಗಣೇಶ್ ಪೂಜಾರಿ, ಕಾರ್ಯದರ್ಶಿ ಭರತ್ ಪೂಜಾರಿ, ಮಹಿಳಾ ಘಟಕದ ಅಧ್ಯಕ್ಷೆ ಸುಪ್ರಿಯಾ, ಹರೀಶ್ ಪೂಜಾರಿ, ಟಿ.ಗೊವಿಂದ, ಅರುಣ್‌ಪೂಜಾರಿ, ಸಾಗರ್ ಪೂಜಾರಿ, ರಾಜು ಪೂಜಾರಿ, ಪೃಥ್ವಿ ಸಾಗರ್ ಉಪಸ್ಥಿತರಿದ್ದರು.

