लाइव कैलेंडर

October 2026
M T W T F S S
 1234
567891011
12131415161718
19202122232425
262728293031  
24/10/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆ*

1 min read

*ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆ*

ನವಂಬರ್ 6ನೇ ತಾರೀಖಿನ ಶುಕ್ರವಾರ(ದಿನಾಂಕ 6.11.2026 ರಂದು ಮೂಡಿಗೆರೆಯ ಅಡ್ಯಂತಾಯ ರಂಗಮಂದಿರದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಂಗಣದಲ್ಲಿ) ನಡೆಯಲಿರುವ ಮೂಡಿಗೆರೆ ತಾಲ್ಲೂಕು 7ನೇ ಸಾಹಿತ್ಯ ಸಮ್ಮೇಳನದ ಸರ್ವಧ್ಯಕ್ಷರಾಗಿ ಮೇಕನಗದ್ದೆ ಲಕ್ಷ್ಮಣಗೌಡ ಇವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷರಾದ ಡಿ.ಕೆ. ಲಕ್ಷ್ಮಣಗೌಡ ಮತ್ತು ಸ್ವಾಗತ ಸಮಿತಿಯ ಕಾರ್ಯದ್ಯಕ್ಷರಾದ ಬಿ.ಕೆ. ಲಕ್ಷ್ಮಣ್ ಕುಮಾರ್ ಇವರನ್ನು ಒಳಗೊಂಡ ಸಮಿತಿ ಪತ್ರಿಕಾಗೋಷ್ಠಿಯಲ್ಲಿ ಇತ್ತೀಚಿಗೆ ಘೋಷಿಸಿದ್ದಾರೆ

ಮೂಡಿಗೆರೆ ತಾಲ್ಲೂಕಿನ ಮೇಕನಗದ್ದೆಯವರಾದ ಶ್ರೀಯುತ ಲಕ್ಷ್ಮಣಗೌಡ ಇವರು ಸಾಹಿತ್ಯ, ಕವನ ಸಂಕಲನ, ಲೇಖನಗಳು, ಸಂಶೋಧನೆ, ವಚನಗಳು, ಜೀವನ ಚರಿತ್ರೆ, ಶಾಸನ ಸಂಶೋಧನೆ ಮುಂತಾದವುಗಳನ್ನು ಒಳಗೊಂಡಂತೆ ಇದುವರೆಗೆ 25ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ. ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಂಶುಪಾಲರಾಗಿ, ಮುಖ್ಯೋಪಾಧ್ಯಾಯರಾಗಿ, ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಿರುವ ಇವರು ಪ್ರಸ್ತುತ ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ಸಮ್ಮೇಳನದಲ್ಲಿ ಮಲೆನಾಡಿನ ಹಲವು ಜ್ವಲಂತ ಸಮಸ್ಯೆಗಳನ್ನು ಕುರಿತಂತೆ ಹಾಗೂ ಕನ್ನಡ ಶಾಲೆಯ ಸ್ಥಿತಿಗತಿಗಳ ಬಗ್ಗೆ ಗೋಷ್ಠಿಗಳನ್ನು ಹಮ್ಮಿಕೊಂಡು ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಸಮ್ಮೇಳನದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಕೋರಿರುತ್ತಾರೆ.

About Author

Leave a Reply

Your email address will not be published. Required fields are marked *