लाइव कैलेंडर

October 2026
M T W T F S S
 1234
567891011
12131415161718
19202122232425
262728293031  
25/10/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

‎ಭವಿಷ್ಯದ ಸರ್ವೀಸ್ ರಸ್ತೆ ಮತ್ತು ಪಾದಚಾರಿ ಮಾರ್ಗಕ್ಕೆ ಜಾಗ ಉಳಿಸಲು ಒತ್ತಾಯ….

1 min read

‎ಭವಿಷ್ಯದ ಸರ್ವೀಸ್ ರಸ್ತೆ ಮತ್ತು ಪಾದಚಾರಿ ಮಾರ್ಗಕ್ಕೆ ಜಾಗ ಉಳಿಸಲು ಒತ್ತಾಯ
‎
‎ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ ನಿಯಮಗಳನ್ನು ಉಲ್ಲಂಘಿಸಿ ಕಟ್ಟಡ ನಿರ್ಮಿಸುತ್ತಿರುವವರ ವಿರುದ್ಧ ಹೆದ್ದಾರಿ ಪ್ರಾಧಿಕಾರ ಹಾಗೂ ಸಂಬಂಧಪಟ್ಟ ಇಲಾಖೆ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ತಾಲ್ಲೂಕು ಅಧ್ಯಕ್ಷ  ಡಿ.ರಾಮೇಗೌಡ ಆಗ್ರಹಿಸಿದ್ದಾರೆ.ಈ ಕುರಿತು ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿರುವ ಅವರು ನಗರದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 173ರ ಅಕ್ಕಪಕ್ಕದಲ್ಲಿ ಅಧಿಕೃತ ಭೂಗಡಿ, ಕಟ್ಟಡ ರೇಖೆ ಮತ್ತು ಅನ್ವಯಿಸುವ ನಿಯಮ ಗಳನ್ನು ಉಲ್ಲಂಘಿಸಿ ಕಟ್ಟಡ ನಿರ್ಮಾಣವಾಗುತ್ತಿರುವುದು ಕಂಡುಬಂದಿದ್ದು ಶೀಘ್ರವೇ ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.

‎ರಾಷ್ಟ್ರೀಯ ಹೆದ್ದಾರಿಯ ರಸ್ತೆ ಮಾರ್ಜಿನ್ ಮತ್ತು ಪಾದಚಾರಿ ಮಾರ್ಗದ ಜಾಗ ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕೆ ಮಾತ್ರವಲ್ಲದೆ, ಭವಿಷ್ಯದಲ್ಲಿ ರಸ್ತೆ ಅಭಿವೃದ್ಧಿ ಮತ್ತು ಸರ್ವೀಸ್ ರಸ್ತೆ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ. ಇಂದು ಲಭ್ಯವಿರುವ ಜಾಗವನ್ನು ಸಂರಕ್ಷಿಸದೆ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಿದರೆ, ಮುಂದಿನ ದಿನಗಳಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ರಸ್ತೆ ಅಭಿವೃದ್ಧಿ ಕೈಗೊಳ್ಳುವಾಗ ಸರ್ಕಾರಕ್ಕೆ ಅನಗತ್ಯ ಆರ್ಥಿಕ ಹೊರೆ ರಸ್ತೆ ಅಭಿವೃದ್ಧಿಗೆ ಬಾದಕತೆ ಉಂಟಾಗುವ ಸಾಧ್ಯತೆಯಿದೆ ಎಂದಿದ್ದಾರೆ.
‎
‎ಕಟ್ಟಡ ನಿರ್ಮಾಣಕ್ಕೆ ಅಗತ್ಯ ಪರವಾನಗಿ ಪಡೆಯಲಾಗಿದೆಯೇ, ಅನುಮೋದಿತ ನಕ್ಷೆಯ ಪ್ರಕಾರವೇ ಕಾಮಗಾರಿ ನಡೆದಿದೆಯೇ ಮತ್ತು ರಾಷ್ಟ್ರೀಯ ಹೆದ್ದಾರಿಯ ಅನ್ವಯಿಸುವ ನಿಯಮಗಳನ್ನು ಪಾಲಿಸಲಾಗಿದೆಯೇ ಅಥವಾ ಅವೆಲ್ಲವನ್ನೂ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಮಾಡಲಾಗಿದೆಯೇ ಎಂಬುದನ್ನು ಸಂಬಂ ಧಪಟ್ಟ ಅಧಿಕಾರಿಗಳು ಪರಿಶೀಲಿಸಬೇಕು ಎಂದು ಹೇಳಿದ್ದಾರೆ.

About Author

Leave a Reply

Your email address will not be published. Required fields are marked *