ದಿನಾಂಕ 28/10/2026 ರಂದು ಶ್ರೀ ಸಿ.ಬಿ. ಶಂಕರ್ ಚಿಕ್ಕಹಳ್ಳ ಮಾನ್ಯ ಅಧ್ಯಕ್ಷರು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಇವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆಯ ನಡಾವಳಿ….
1 min read
ದಿನಾಂಕ 28/10/2026 ರಂದು ಶ್ರೀ ಸಿ.ಬಿ. ಶಂಕರ್ ಚಿಕ್ಕಹಳ್ಳ ಮಾನ್ಯ ಅಧ್ಯಕ್ಷರು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಇವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆಯ ನಡಾವಳಿ.


ಉಪಸ್ಥಿತಿ:
1. ಶ್ರೀ ಸಿ.ಬಿ. ಶಂಕರ್ ಚಿಕ್ಕಹಳ್ಳ ಮಾನ್ಯ ಅಧ್ಯಕ್ಷರು, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
2. ಶ್ರೀಮತಿ ದಯಾವತಿ ಎಂ. ಸದಸ್ಯ ಕಾರ್ಯದರ್ಶಿ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
3. ಶ್ರೀ ರಮೇಶ್ ಹೊಸಕೆರೆ ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
4. ಶ್ರೀ ಅರುಣ್ ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
5. ಶ್ರೀ ನಾರಾಯಣ ನಿಡಗೋಡು ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
6. ಶ್ರೀ ಗುರುವಪ್ಪ ಹಳ್ಳದಗಂಡಿ ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
7. ಶ್ರೀ ಶ್ರೀನಿವಾಸ್ ಕುನ್ನಳ್ಳಿ, ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
8. ಶ್ರೀ ನವೀನ್ ಕೆಂಜಿಗೆ ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
9. ಶ್ರೀ ದೀಕ್ಷಿತ್ ಹಾಲೂರು ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
10. ಶ್ರೀಮತಿ ಜಯಶ್ರೀ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಚಿಕ್ಕಮಗಳೂರು
11. ಪ್ರಾಂಶುಪಾಲರು, ಐ.ಟಿ.ಐ. ಕಾಲೇಜು ಮೂಡಿಗೆರೆ
12. ಶ್ರೀಮತಿ ಇಂಪಾ ಶಿಶು ಅಭಿವೃದ್ದಿ ಯೋಜನಾಧಿಕಾರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ
13. ಸಹಾಯಕ ಕಾರ್ಯಪಾಲಕ ಅಭಿಯಂತರರು ಮೆಸ್ಕಾಂ ಇಲಾಖೆ
14. ಶ್ರೀ ಮಂಜುನಾಥ್, ಸಂಚಾರ ನಿಯಂತ್ರಕರು ಕೆ.ಎಸ್.ಆರ್.ಟಿ.ಸಿ. ಮೂಡಿಗೆರೆ
ಸ್ವಾಗತ: ಶ್ರೀಮತಿ ದಯಾವತಿ ಎಂ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲ್ಲೂಕು ಪಂಚಾಯಿತಿ ಮೂಡಿಗೆರೆ ರವರು ಹಾಜರಿದ್ದ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರುಗಳು ಹಾಗೂ ಅನುಷ್ಠಾನ ಇಲಾಖೆಯ ಅಧಿಕಾರಿಗಳಿಗೆ ಸ್ವಾಗತ ಕೋರುತ್ತಾ, ಸಭೆಯನ್ನು ನಡೆಸಿಕೊಡುವಂತೆ ಮಾನ್ಯ ಅಧ್ಯಕ್ಷರನ್ನು ಕೋರಿದರು.
ಗೃಹಲಕ್ಷ್ಮಿ ಯೋಜನೆ:
ಇಲಾಖಾಧಿಕಾರಿಗಳು ಗೃಹಲಕ್ಷ್ಮಿ ಯೋಜನೆ ಬಗ್ಗೆ ಪ್ರಗತಿ ವರದಿ ಮಂಡಿಸಿದರು. ತಾಲ್ಲೂಕಿನಲ್ಲಿ ಒಟ್ಟು 29191 ಗೃಹಲಕ್ಷ್ಮಿ ಫಲಾನುಭವಿಗಳು ಇದ್ದು, ಇದರಲ್ಲಿ 26749 ಅರ್ಹ ಫಲಾನುಭವಿಗಳಾಗಿರುತ್ತಾರೆ. ಜೂನ್-2026 ಮಾಹೆಯಲ್ಲಿರೂ.53498000/- ಗೃಹಲಕ್ಷ್ಮೀ ಯೋಜನೆಯ ಅನುದಾನ ಬಿಡುಗಡೆಯಾಗಿರುತ್ತದೆ. ಹಾಗೂ ವಿವಿಧ ಕಾರಣಗಳಿಂದ ಗೃಹಲಕ್ಷ್ಮೀ ಯೋಜನೆಯಿಂದ ಹೊರಗೆ ಉಳಿದ NPCI-114, IT/GST-557, ತಿದ್ದುಪಡಿ/ಮರಣ-525, ಇ-ಕೆ.ವೈ.ಸಿ. ಬಾಕಿ 14, ಹೊಸ ಫಲಾನುಭವಿಗಳು 11, ಪಾವತಿಯಾಗದಿರುವ ಫಲಾನುಭವಿಗಳ ಸಂಖ್ಯೆ 1221 ಇರುತ್ತದೆ. ಗೃಹಲಕ್ಷ್ಮೀ ಹಣ ಜೂನ್-2026 ನೇ ಮಾಹೆಯವರೆಗೆ ಒಟ್ಟು 32 ಕಂತು ಅನುದಾನ ಬಿಡುಗಡೆ ಆಗಿರುತ್ತದೆ. ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ ಮಾಡಲು 199 ಅಂಗನವಾಡಿ ಶಿಕ್ಷಕಿಗಳ ಆಯ್ಕೆಯಾಗಿದ್ದು, ತರಭೇತಿಯನ್ನು ನೀಡಲಾಗಿರುತ್ತದೆ ಎಂದು ಇಲಾಖಾಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.
ಗೃಹಜ್ಯೋತಿ ಯೋಜನೆ:
ಇಲಾಖಾಧಿಕಾರಿಗಳು ಗೃಹಜ್ಯೋತಿ ಯೋಜನೆ ಬಗ್ಗೆ ಪ್ರಗತಿ ವರದಿ ಮಂಡಿಸಿದರು. ತಾಲ್ಲೂಕಿನಲ್ಲಿ ಒಟ್ಟು 26052 ಗೃಹಜ್ಯೋತಿ ಫಲಾನುಭವಿಗಳು ಇದ್ದು, 22355 ಫಲಾನುಭವಿಗಳಿಗೆ ಸರ್ಕಾರದಿಂದ ರೂ. 9678442/- ಅನುದಾನ ಬಿಡುಗಡೆಯಾಗಿರುತ್ತದೆ. ಹಾಗೂ ಸರ್ಕಾರದ ಆದೇಶದಂತೆ 128 ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ನೀಡಲಾದ ಮೊತ್ತ ರೂ.44530/- ಎಂದು ಸಭೆಗೆ ಮಾಹಿತಿ ನೀಡಿದರು.
ಗೃಹಜ್ಯೋತಿ ಪರಿಷ್ಕರಣೆಗೆ ಅಕ್ಟೋಬರ್ 31 ಕೊನೆಯ ದಿನಾಂಕವಾಗಿದ್ದು, ನಿಗದಿತ ದಿನಾಂಕದೊಳಗೆ ಮೆಸ್ಕಾಂ ಕಛೇರಿಯನ್ನು ಸಂಪರ್ಕಿಸಿ ಅರ್ಹ ಫಲಾನುಭವಿಗಳು ಯೋಜನೆಯಿಂದ ಹೊರಗೆ ಉಳಿಯ ಬಾರದೆಂದು ಮಾನ್ಯ ಅಧ್ಯಕ್ಷರು ಮನವಿ ಮಾಡಿದರು.
ಅನ್ನಭಾಗ್ಯ ಯೋಜನೆ:
ಅಕ್ಟೋಬರ್-2026 ರ ಮಾಹೆಯಲ್ಲಿ 18269 ಬಿ.ಪಿ.ಎಲ್. ಪಡಿತರ ಚೀಟಿಗೆ 2926 ಕ್ವಿಂಟಾಲ್ ಅಕ್ಕಿ ವಿತರಿಸಿದ್ದು, ಮೊತ್ತ ರೂ.7383378/- ಆಗಿರುತ್ತದೆ. ಅಕ್ಟೋಬರ್ ಮಾಹೆಯಿಂದ ರಾಗಿ ವಿತರಣೆ ಮಾಡುತ್ತಿದ್ದು, ಪ್ರತಿ 10 ಕೆ.ಜಿ. ಅಕ್ಕಿಗೆ ಬದಲಾಗಿ 7 ಕೆ.ಜಿ. ಅಕ್ಕಿ ಹಾಗೂ 3 ಕೆ.ಜಿ. ರಾಗಿ ವಿತರಿಸುವುದಾಗಿ ಸಭೆಯಲ್ಲಿ ಮಾಹಿತಿ ನೀಡಿದರು.
ಯುವನಿಧಿ ಯೋಜನೆ:
ಯುವನಿಧಿ ಯೋಜನೆಯಡಿ 542 ವಿಧ್ಯಾರ್ಥಿಗಳು ನೊಂದಣಿಯಾಗಿದ್ದು, ಈವರೆಗೂ ಪದವಿ ವಿಭಾಗದಲ್ಲಿ 4958 ಹಾಗೂ ಡಿಪ್ಲೊಮೋ ವಿಭಾಗದಲ್ಲಿ 60 ವಿಧ್ಯಾರ್ಥಿಗಳು ನೊಂದಣಿಯಾಗಿರುತ್ತಾರೆ. ಆಗಸ್ಟ್-2026 ರ ಮಾಹೆಯವರೆಗೆ ಸರ್ಕಾರದಿಂದ ಒಟ್ಟು ರೂ.14964000/- ಅನುದಾನ ಬಿಡುಗಡೆಯಾಗಿರುತ್ತದೆ.
ಶಕ್ತಿ ಯೋಜನೆ:
ಇಲಾಖಾಧಿಕಾರಿಗಳು ಶಕ್ತಿ ಯೋಜನೆ ಬಗ್ಗೆ ಪ್ರಗತಿ ವರದಿ ಮಂಡಿಸಿದರು. ತಾಲ್ಲೂಕಿನಲ್ಲಿ ಸೆಪ್ಟೆಂಬರ್-2026 ರ ಮಾಹೆಯಲ್ಲಿ ಪ್ರಸ್ತುತ 363975 ಪ್ರಯಾಣಿಕರು ಬಸ್‌ನಲ್ಲಿ ಪ್ರಯಾಣಿಸಿದ್ದು, ರೂ.17520325/- ಸರ್ಕಾರದಿಂದ ಅನುದಾನ ಬಿಡುಗಡೆಯಾಗಿರುತ್ತದೆ ಎಂದು ಸಭೆಯಲ್ಲಿ ತಿಳಿಸಿದರು. ಹಾಗೂ ಯೋಜನೆ ಪ್ರಾರಂಭದಿಂದ ಇಲ್ಲಿಯವರೆಗೆ ಶಕ್ತಿ ಯೋಜನೆಯಡಿ ಪ್ರಯಾಣ ದರ ರೂ. 684117214/- ಆಗಿರುತ್ತದೆ.
ಅಧ್ಯಕ್ಷರು ಸದಸ್ಯ ಕಾರ್ಯದರ್ಶಿ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಾರ್ಯನಿರ್ವಾಹಕ ಅಧಿಕಾರಿ
ಮೂಡಿಗೆರೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ

