लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
10/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಮೂಡಿಗೆರೆ: ಹಲವು ವರ್ಷಗಳಿಂದ ಹದಗೆಟ್ಟು ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದ್ದ ಮತ್ತಿಕಟ್ಟೆ–ಬಿ. ಹೊಸಹಳ್ಳಿ ಸಂಪರ್ಕ ರಸ್ತೆಗೆ ಕೊನೆಗೂ ಅಭಿವೃದ್ಧಿಯ ಭಾಗ್ಯ ಒದಗಿದೆ….

1 min read

ಮತ್ತಿಕಟ್ಟೆ-ಬಿ. ಹೊಸಹಳ್ಳಿ ರಸ್ತೆ ಅಭಿವೃದ್ಧಿಗೆ 2.5 ಕೋಟಿ ಅನುದಾನ
ಗ್ರಾಮ ಪಂಚಾಯ್ತಿ ಬಿ.ಹೊಸಹಳ್ಳಿ
‎
ಮೂಡಿಗೆರೆ: ಹಲವು ವರ್ಷಗಳಿಂದ ಹದಗೆಟ್ಟು ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದ್ದ ಮತ್ತಿಕಟ್ಟೆ–ಬಿ. ಹೊಸಹಳ್ಳಿ ಸಂಪರ್ಕ ರಸ್ತೆಗೆ ಕೊನೆಗೂ ಅಭಿವೃದ್ಧಿಯ ಭಾಗ್ಯ ಒದಗಿದೆ. ರಾಜ್ಯ ಸರ್ಕಾರದಿಂದ 2.5 ಕೋಟಿ ಅನುದಾನ ಬಿಡುಗಡೆಯಾಗಿದ್ದು, ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿರುವುದು ಈ ಭಾಗದ ಗ್ರಾಮಸ್ಥರು ಹಾಗೂ ವಾಹನ ಸವಾರರಲ್ಲಿ ಸಂತಸ ಮೂಡಿಸಿದೆ.
‎
‎ಮತ್ತಿಕಟ್ಟೆ–ಬಿ. ಹೊಸಹಳ್ಳಿ ಸಂಪರ್ಕ ರಸ್ತೆ ಹಲವು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದ್ದು, ಗುಂಡಿಗಳಿಂದ ಕೂಡಿದ ರಸ್ತೆಯಲ್ಲಿ ಸಂಚರಿಸುವುದು ವಾಹನ ಸವಾರರಿಗೆ ದುಸ್ತರವಾಗಿತ್ತು. ಮಳೆಗಾಲದಲ್ಲಂತೂ ರಸ್ತೆ ಸ್ಥಿತಿ ಮತ್ತಷ್ಟು ಹದಗೆಟ್ಟು ಸಾರ್ವಜನಿಕರು ರೈತರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುವಂತಾಗಿತ್ತು. ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ಧಿಪಡಿಸುವಂತೆ ಸ್ಥಳೀಯರು ಹಲವು ಬಾರಿ ಜನಪ್ರತಿನಿಧಿಗಳ ಗಮನ ಸೆಳೆದಿದ್ದರು.
‎
‎ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಹಾಗೂ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್. ಶಂಕರ್ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿ ಅನುದಾನ ಬಿಡುಗಡೆಗೆ ಒತ್ತಾಯಿಸಿದ್ದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ರಸ್ತೆ ಅಭಿವೃದ್ಧಿಗಾಗಿ 2.5 ಕೋಟಿ ಅನುದಾನ ಒದಗಿಸಿದ್ದರು.  ಇದೀಗ ಕಾಮಗಾರಿ ಪೂರ್ಣಗೊಂಡಿದ್ದು, ಈ ಭಾಗದ ಜನರ ಸಂಚಾರಕ್ಕೆ ಅನುಕೂಲವಾಗಿದೆ. ಸೋಮವಾರ ಖಾಸಗಿ ಭೇಟಿಗಾಗಿ ಮೂಡಿಗೆರೆ ಭಾಗಕ್ಕೆ ಆಗಮಿಸಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಮತ್ತಿಕಟ್ಟೆ—ಬಿ. ಹೊಸಹಳ್ಳಿ ಸಂಪರ್ಕ ರಸ್ತೆಗೆ ಕರೆತರಲಾಯಿತು. ಈ ಸಂದರ್ಭದಲ್ಲಿ ಪೂರ್ಣಗೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದ ಸಚಿವರಿಗೆ ಕಾಮಗಾರಿಯ ಕುರಿತು ಮಾಹಿತಿ ನೀಡಲಾಯಿತು. ರಸ್ತೆ ಅಭಿವೃದ್ಧಿ ಕಾರ್ಯವನ್ನು ಪರಿಶೀಲಿಸಿದ ಸಚಿವರು ಹರ್ಷ ವ್ಯಕ್ತಪಡಿಸಿ ಮೆಚ್ಚುಗೆ ಸೂಚಿಸಿದರು. ಈ ಸಂದರ್ಭದಲ್ಲಿ ಬಿ.ಹೊಸಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಆರ್ಶಿತ್ ಗೌಡ ಅವರು ಸಚಿವರೊಂದಿಗೆ ಉಪಸ್ಥಿತ-ರಿದ್ದು, ಅಭಿವೃದ್ಧಿಗೊಂಡ ರಸ್ತೆಯನ್ನು ವೀಕ್ಷಿಸಿದರು.

‎ಬಹುದಿನಗಳಿಂದ ಹದಗೆಟ್ಟಿದ್ದ ಸಂಪರ್ಕ ರಸ್ತೆ ಅಭಿವೃದ್ಧಿಗೊಂಡಿರುವುದರಿಂದ ಮತ್ತಿಕಟ್ಟೆ ಹಾಗೂ ಬಿ. ಹೊಸಹಳ್ಳಿ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಅನುಕೂಲವಾಗಲಿದ್ದು, ಕೃಷಿ ಉತ್ಪನ್ನಗಳ ಸಾಗಣೆ, ದೈನಂದಿನ ಸಂಚಾರ ಹಾಗೂ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಸಹಕಾರಿಯಾಗಲಿದೆ. ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸಲು ಪ್ರಯತ್ನಿಸಿದ ಜನಪ್ರತಿನಿಧಿಗಳಿಗೆ ಸ್ಥಳೀಯರು ಕೃತಜ್ಞತೆ ಸಲ್ಲಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed