ಹಿರಿಯ ನಾಗರಿಕರ ಸೇವೆ ಮತ್ತು ಹಕ್ಕುಗಳ ರಕ್ಷಣೆಗೆ ಬೇಲೂರಿನಲ್ಲಿ ಟ್ರಸ್ಟ್ ಆರಂಭ
1 min read
ಹಿರಿಯ ನಾಗರಿಕರ ಸೇವೆ ಮತ್ತು ಹಕ್ಕುಗಳ ರಕ್ಷಣೆಗೆ ಬೇಲೂರಿನಲ್ಲಿ ಟ್ರಸ್ಟ್ ಆರಂಭ
ಹಿರಿಯ ನಾಗರಿಕರು ಸಮಾಜದ ಅಮೂಲ್ಯ ಆಸ್ತಿಯಾಗಿದ್ದು, ಅವರ ಅನುಭವ, ಮಾರ್ಗದರ್ಶನ ಮತ್ತು ಸೇವೆಯನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ.
ಬೇಲೂರು ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಟ್ರಸ್ಟ್ ಅಧ್ಯಕ್ಷ ರಾಜೇಗೌಡ ವಯೋವೃದ್ಧರ ಬದುಕಿನ ಸಂಧ್ಯಾಕಾಲದಲ್ಲಿ ಅವರಿಗೆ ಗೌರವಯುತ ಜೀವನ, ಆರೋಗ್ಯ ರಕ್ಷಣೆ, ಸಾಮಾಜಿಕ ಭದ್ರತೆ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ತಾಲೂಕು ಹಿರಿಯ ನಾಗರಿಕರ ಸೇವಾ ಟ್ರಸ್ಟ್ (ರಿ.) ಕಾರ್ಯನಿರ್ವಹಿಸಲು ಮುಂದಾಗಿದೆ ಎಂದು ಟ್ರಸ್ಟ್ ಪದಾಧಿಕಾರಿಗಳು ತಿಳಿಸಿದ್ದಾರೆ. ಹಿರಿಯ ನಾಗರಿಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಸ್ಪಂದಿಸುವುದು, ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಟ್ರಸ್ಟ್‌ನ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು. ಟ್ರಸ್ಟ್ ನ ಖಜಾಂಚಿ ಕೃಷ್ಣಮೂರ್ತಿ ಮಾತನಾಡಿ 14 ನವಂಬರ್ ಶನಿವಾರ ಟ್ರಸ್ಟ್ ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದ್ದು ಕಾರ್ಯಕ್ರಮವನ್ನು ವಿಧಾನಸಭಾ ಕ್ಷೇತ್ರದ ಶಾಸಕ ಎಚ್ ಕೆ ಸುರೇಶ್ ಉದ್ಘಾಟಿಸಲಿದ್ದಾರೆ ಕಾರ್ಯಕ್ರಮಕ್ಕೆ ಹೆಚ್ಚಿನ ಹಿರಿಯರು ಸಾರ್ವಜನಿಕರ ಆಗಮಿಸಬೇಕು ಮತ್ತು ಟ್ರಸ್ಟ್ ಸೇರ್ಪಡೆಗೊಳ್ಳಲು 300 ರೂಪಾಯಿ ಶುಲ್ಕ ನಿಗದಿಪಡಿಸಿದ್ದು ಹಿರಿಯ ನಾಗರಿಕರಿಗೆ ಪ್ರಯೋಜನ ಆಗಲಿ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಹಿರಿಯ ನಾಗರಿಕರ ಸೇವಾ ಟ್ರಸ್ಟ್ ಉಪಾಧ್ಯಕ್ಷ ಮಾ ಶಿವಮೂರ್ತಿ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಹಿರಿಯ ನಾಗರಿಕ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಕೇಶವಮೂರ್ತಿ, ಉಪಾಧ್ಯಕ್ಷರಾದ ಲಕ್ಷ್ಮಮ್ಮ ಚಂದ್ರೇಗೌಡ. ಉಪಾಧ್ಯಕ್ಷ ಮಾ ಶಿವಮೂರ್ತಿ. ಹಾಜರಿದ್ದರು.

