लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

‎ಕ್ರೀಡೆಯಿಂದ ಆರೋಗ್ಯ ವೃದ್ಧಿ ಜತೆಗೆ ಮಾನಸಿಕ ಚೈತನ್ಯ:ನಯನಾಮೋಟಮ್ಮ….

1 min read

‎ಕ್ರೀಡೆಯಿಂದ ಆರೋಗ್ಯ ವೃದ್ಧಿ ಜತೆಗೆ ಮಾನಸಿಕ ಚೈತನ್ಯ:ನಯನಾಮೋಟಮ್ಮ
‎ಮೂಡಿಗೆರೆ: ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಆರೋಗ್ಯ ವೃದ್ಧಿಸುವುದರ ಜತೆಗೆ ಮಾನಸಿಕ ಚೈತನ್ಯ, ಆತ್ಮವಿಶ್ವಾಸ ಹಾಗೂ ಜೀವನೋತ್ಸಾಹ ಹೆಚ್ಚುತ್ತದೆ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.

‎ಅವರು ಶನಿವಾರ ಪಟ್ಟಣದ ಹೊಯ್ಸಳ ಕ್ರೀಡಾಂಗಣದಲ್ಲಿ ಆತ್ಮೀಯ ಹಾಗೂ ಸುಶ್ಮಿತಾ ತಂಡದ ವತಿಯಿಂದ ಆಯೋಜಿಸಿದ್ದ ಮಲ್ನಾಡ್ ಮಹಿಳಾ ಕಪ್ 2026 ಮಹಿಳಾ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು. ಇಂದಿನ ಒತ್ತಡದ  ಜೀವನ ಶೈಲಿಯಲ್ಲಿ ಮಹಿಳೆಯರು ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಮನೆ ಮತ್ತು ಉದ್ಯೋಗದ ಜವಾಬ್ದಾರಿಗಳ ನಡುವೆಯೂ ಕ್ರೀಡೆ ಹಾಗೂ ವ್ಯಾಯಾಮಕ್ಕೆ ಸಮಯ ಮೀಸಲಿಡಬೇಕು. ಕ್ರೀಡೆ ಕೇವಲ ಮನರಂಜನೆಯಲ್ಲ, ಅದು ಶಿಸ್ತು, ಸಮಯಪ್ರಜ್ಞೆ ತಂಡದ ಮನೋಭಾವ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುತ್ತದೆ ಎಂದರು.
‎ಕ್ರೀಡೆಗೆ ತಾನು ಹೆಚ್ಚಾಗಿ ಪ್ರೋತ್ಸಾಹ ಮಾಡುತ್ತಿದ್ದೇನೆ. ಅದರಲ್ಲೂ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿರುವುದು ಶ್ಲಾಘನೀಯ.
‎ಮಹಿಳೆಯರು ಕ್ರೀಡಾಕ್ಷೇತ್ರದಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಾಧನೆ ಮಾಡಬೇಕು. ಇಂತಹ ಪಂದ್ಯಾವಳಿಗಳು ಮಹಿಳಾ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.
ಪ.ಪಂ ಮಾಜಿ ಉಪಾಧ್ಯಕ್ಷ ರಮೇಶ್ ಹೊಸ್ಕೆರೆ, ರವಿ ಕುನ್ನಳ್ಳಿ, ರಘು ಮಗ್ಗಲಮಕ್ಕಿ, ಅನಿಲ್, ಜಗದೀಶ್ ಸೇರಿದಂತೆ ವಿವಿಧ ತಂಡಗಳ ಮಹಿಳಾ ಆಟಗಾರ್ತಿಯರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *