लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
23/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಕನ್ನಡ ಸಾಹಿತ್ಯ ಪರಿಷತ್ ಘಟಕಗಳಿಗೆ ಆಡಳಿತ ಅಧಿಕಾರಿಗಳ ನೇಮಕ….

1 min read

ಕನ್ನಡ ಸಾಹಿತ್ಯ ಪರಿಷತ್ ಘಟಕಗಳಿಗೆ ಆಡಳಿತ ಅಧಿಕಾರಿಗಳ ನೇಮಕ.
‎
‎ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಚುನಾಯಿತ ‎ಕಾರ್ಯಕಾರಿ ಸಮಿತಿ ಅವಧಿಯು ನ.23.ಕ್ಕೆ ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ನ.24.ರಿಂದ ಜಾರಿಗೆ ಬರುವಂತೆ ಪರಿಷತ್ತಿನ ರಾಜ್ಯದ ಎಲ್ಲ ಜಿಲ್ಲೆ, ತಾಲೂಕು ಮತ್ತು ಹೋಬಳಿ ಘಟಕಗಳ ಸ್ಥಿರ ಮತ್ತು ಚರಾಸ್ತಿ ವಹಿಸಿಕೊಳ್ಳಲು ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತಾಧಿಕಾರಿಯಾಗಿರುವ ಕೆ.ಎ.ದಯಾನಂದ್ ಅವರು, ಎಲ್ಲ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯ ನಿರ್ದೇಶಕರನ್ನು ಆಡಳಿ ತಾಧಿಕಾರಿಗಳನ್ನಾಗಿ ನೇಮಿಸಿ ಆದೇಶಿಸಿದ್ದಾರೆ. ಜಿಲ್ಲಾಧ್ಯಕ್ಷ ರುಗಳು ತಮ್ಮ ತಮ್ಮ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಿರ-ಚರಾಸ್ತಿಗಳ ವಹಿವಾಟನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕರಿಗೆ ವಹಿಸ ಬೇಕು. ಒಂದು ವಾರದೊಳಗೆ ಈ ಕುರಿತು ಪರಿಷತ್ತಿನ ಕೇಂದ್ರ ಆಡಳಿತಾಧಿಕಾರಿಗೆ ವರದಿ ಸಲ್ಲಿಸಬೇಕು. ಹಾಗೆ ಯೇ ಚುನಾಯಿತ ಅಧ್ಯಕ್ಷರು, ಸದಸ್ಯರು ಬರುವವರೆಗೆ ಜಿಲ್ಲೆ, ತಾಲ್ಲೂಕು, ಹೋಬಳಿ ಘಟಕಗಳ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಕಾರ್ಯಚಟುವಟಿಕೆ ಎಂದಿನಂತೆ ಮುಂದುವರೆಯುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed