लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
24/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

‎ಅಕ್ರಮ ವಿದ್ಯುತ್‌ ಬೇಲಿಗೆ ಒಂಟಿಸಲಗ ಬಲಿ.
‎
ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಒಂದೆಡೆ ಕಾಡಾನೆಗಳ ಸ್ಥಳಾಂತರ ಹಾಗೂ ಮಾನವ-ವನ್ಯಜೀವಿ ಸಂಘರ್ಷದ ಕಿಚ್ಚು ತೀವ್ರಗೊಂಡಿದ್ದರೆ, ಮತ್ತೊಂದೆಡೆ ಅಕ್ರಮ ವಿದ್ಯುತ್ ಬೇಲಿಗೆ ಒಂಟಿ ಸಲಗವೊಂದು ಬಲಿಯಾಗಿರುವ ದಾರುಣ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ ಬಳಿಯ ಸಗಣಿ ಬಸವನಹಳ್ಳಿಯಲ್ಲಿ ನಡೆದಿದೆ.
‎
‎ಸುಮಾರು 15 ವರ್ಷ ವಯಸ್ಸಿನ ಗಂಡು ಆನೆ ಆಹಾರ ಅರಸುತ್ತಾ ಜೋಳದ ಹೊಲಕ್ಕೆ ನುಗ್ಗಿದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕಾಡು ಪ್ರಾಣಿಗಳ ಹಾವಳಿಯನ್ನು ತಡೆಯುವ ಉದ್ದೇಶದಿಂದ ಜಮೀನಿನ ಮಾಲೀಕರು ಅಕ್ರಮವಾಗಿ ವಿದ್ಯುತ್ ತಂತಿಯನ್ನು ಅಳವಡಿಸಿದ್ದರು ಎನ್ನಲಾಗಿದೆ.
‎
‎ಹೊಲಕ್ಕೆ ಬಂದ ಆನೆಗೆ ಈ ತಂತಿ ತಗುಲಿದ್ದು, ವಿದ್ಯುತ್ ಪ್ರವಹಿಸಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕಡೂರು ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
‎
ಆದರೆ, ಆನೆ ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಜಮೀನಿಗೆ ವಿದ್ಯುತ್ ತಂತಿ ಅಳವಡಿಸಿದ್ದ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ. ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed