लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
24/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

‎ಕಾಡಾನೆಗಳ ಸ್ಥಳಾಂತರ ವಿರೋಧಿಸಿ ಮೂಡಿಗೆರೆಯಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚೆ….

1 min read

‎ಕಾಡಾನೆಗಳ ಸ್ಥಳಾಂತರ ವಿರೋಧಿಸಿ ಮೂಡಿಗೆರೆಯಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚೆ.

ಚಿಕ್ಕಮಗಳೂರು: ಬೇಲೂರು ಭಾಗದಲ್ಲಿ ಇಬ್ಬರನ್ನು ಬಲಿ ಪಡೆದ ಕಾಡಾನೆಗಳನ್ನು ಮೂಡಿಗೆರೆ ತಾಲೂಕು ಮಾರ್ಗವಾಗಿ ಭದ್ರ ಅಭಯಾರಣ್ಯಕ್ಕೆ ಸ್ಥಳಾಂತರಿಸುವ ಸರಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ತಾಲೂಕಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಈ ವಿಚಾರವಾಗಿ ವಿವಿಧ ರಾಜಕೀಯ ಪಕ್ಷ, ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಸೋಮವಾರ ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಸಭೆ ನಡೆಸಿ, ಮುಂದಿನ ಹೋರಾಟದ ರೂಪುರೇಷೆಗಳ ಕುರಿತು ಚರ್ಚಿಸಿದರು.
‎
‎ಸಭೆಗೂ ಮುನ್ನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮುಖಂಡರು ಸಮಾಲೋಚನೆ ನಡೆಸಿದರು. ಈ ವೇಳೆ ಕೆಲವರು ಮೂಡಿಗೆರೆ ಬಂದ್‌ಗೆ ಕರೆ ನೀಡಿ ಉಗ್ರ ಪ್ರತಿಭಟನೆ ನಡೆಸಬೇಕೆಂದು ಒತ್ತಾಯಿಸಿದರೆ, ಇನ್ನು ಕೆಲವರು ಸ್ಥಳಕ್ಕೆ ಡಿಸಿಎಫ್ ಆಗಮಿಸಿ ಜನರ ಅಭಿಪ್ರಾಯ ಆಲಿಸಿದ ಬೆಳಿಕೆ ಮುಂದಿನ ನಿರ್ಧಾರ ಕೈಗೊಳ್ಳಬೇಕೆಂದು ಸಲಹೆ ನೀಡಿದರು. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಮಾಜಿ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಅವರು ಡಿಸಿಎಫ್ ಬೋರಯ್ಯ ಅವರಿಗೆ ದೂರವಾಣಿ ಕರೆ ಮಾಡಿ ಸಭೆಗೆ ಆಗಮಿಸುವಂತೆ ಮನವಿ ಮಾಡಿದರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಹಿನ್ನೆಲೆಯಲ್ಲಿ ಸಭೆಯನ್ನು ಅಡ್ಯಂತಾಯ ರಂಗಮಂದಿರಕ್ಕೆ ಸ್ಥಳಾಂತರಿಸಲಾಯಿತು.
‎
‎ಸಭೆಗೆ ಆಗಮಿಸಿದ ಡಿಸಿಎಫ್ ಬೋರಯ್ಯ ಮಾತನಾಡಿ, ಬೇಲೂರು ತಾಲೂಕಿನಲ್ಲಿ ಕಾಡಾನೆ ದಾಳಿಗೆ ಇಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಅಲ್ಲಿನ ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ದಾಳಿಗೆ ಕಾರಣವಾದ 2 ಕಾಡಾನೆಯನ್ನು ಸೆರೆಹಿಡಿಯಲಾಗಿತ್ತು. ಮತ್ತೆ ಮಾನವ ಕಾಡಾನೆ ಸಂಘರ್ಷ ಮರುಕಳಿಸಬಾರದೆಂಬ ಈ ಉದ್ದೇಶದಿಂದ ಕಾಡಾನೆಗಳನ್ನು ಭದ್ರ ಅಭಯಾರಣ್ಯಕ್ಕೆ ಸ್ಥಳಾಂತರಿಸಬೇಕೆಂಬ ಒತ್ತಾಯ ತಾಯ ಹೆಚ್ಚಾಗಿತ್ತು. ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಕಾಡಾನೆಗಳನ್ನು ಭದ್ರ ಅಭಯಾರಣ್ಯಕ್ಕೆ ಓಡೆಸುವಂತೆ ಸೂಚಿಸಿದ್ದರು. ಆದರೆ ಕಾರ್ಯಾಚರಣೆ ಆರಂಭಿಸುವ ಮುನ್ನ ಮೂಡಿಗೆರೆ ಶಾಸಕರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ರೈತ ಸಂಘಟನೆಗಳೊಂದಿಗೆ ಸಭೆ ನಡೆಸಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
‎
ಬೇಲೂರು ಕಡೆಯಿಂದ ಮೂಡಿಗೆರೆ ತಾಲೂಕಿಗೆ ಬಂದಿರುವ ಕಾಡಾನೆಗಳನ್ನು ತಕ್ಕೊಳದಿಂದ ಸಾರಗೋಡು, ಕುಂದೂರು, ಬಸವನಕೋಟೆ ಹಾಗೂ ದೇವದಾನದ ಮೂಲಕ ಡೋನ್‌ ಗಳು ಮತ್ತು ಅರಣ್ಯ ಸಿಬ್ಬಂದಿಯ ಕಾರ್ಯಪಡೆಯ ನೆರವಿನಿಂದ ಯಾವುದೇ ಅವಘಡ ಸಂಭವಿಸದಂತೆ ಭದ್ರ ಅರಣ್ಯಕ್ಕೆ ಓಡಿಸಲು ಯೋಜಿಸಲಾಗಿತ್ತು. ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿ-ತಗೊಳಿಸಲಾಗಿದೆ ಎಂದರು.
‎
‎ಸಭೆಯಲ್ಲಿ ಮಾಜಿ ಸಚಿವ ಬಿ.ಬಿ.ನಿಂಗಯ್ಯ, ವಿವಿಧ ಪಕ್ಷ ಹಾಗೂ ಸಂಘಟನೆಗಳ ಮುಖಂಡರಾದ ಬಿ.ಎಸ್.ಜಯರಾಂಗೌಡ, ಶಿವಣ್ಣ, ಎಂ.ಎನ್.ಅಶ್ವಥ್, ಬಿ.ಆರ್.ಬಾಲಕೃಷ್ಣ, ಎಂ.ಪಿ.ಮನು, ಹಾಲಪ್ಪಗೌಡ, ಬಿ.ಕೆ.ಲಕ್ಷ್ಮಣ್ ಕುಮಾರ್, ಕೆ.ಆರ್.ಸುಂದ್ರೇಶ್, ಪಿ.ಜಿ.ಅನುಕುಮಾರ್, ಕುನ್ನಳ್ಳಿ ರವಿ, ಚಂದ್ರೇಗೌಡ ಗಬ್ಬಳ್ಳಿ, ವಿಭಾ ಸುಷ್ಮಾ, ವಿಜಯ್‌ ಕುಮಾರ್, ಬ್ರಿಜೇಶ್ ಕಡಿದಾಳ್, ಪ್ರಸಾದ್ ಬಕ್ಕಿ, ಭರತ್ ಬಾಳೂರು, ಬಿ.ಸಿ.ದಯಾಕರ್ ಸೇ-ರಿದಂತೆ ಮುಖಂಡರು ಹಾಗೂ ಸಾರ್ವಜನಿಕರು ಇದ್ದರು.

About Author

Leave a Reply

Your email address will not be published. Required fields are marked *

You may have missed