लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
27/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

‎ಕಾಡಾನೆಯಿಂದ ಕಾಫಿ, ಅಡಿಕೆ -ತೆಂಗಿನ ಮರಗಳು ಧ್ವಂಸ.
‎ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಕಾರ್ಬೈಲು ಗ್ರಾಮದಲ್ಲಿ 20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ದಾಳಿ ನಡೆಸಿ ಕಾಫಿ, ಅಡಿಕೆ, ತೆಂಗು ಸೇರಿದಂತೆ ವಿವಿಧ ಬೆಳೆಗಳನ್ನು ಸಂಪೂರ್ಣವಾಗಿ ನಾಶಪಡಿಸಿದೆ. ರಾತ್ರಿ ಸುಮಾರು 8 ಗಂಟೆಯ ವೇಳೆಗೆ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಭಾರಿ ಹಾನಿ ಉಂಟುಮಾಡಿದೆ.
‎
‎ಕಷ್ಟಪಟ್ಟು ಬೆಳೆಸಿದ ಬೆಳೆಗಳು ಕಣ್ಣೆದುರೇ ನಾಶವಾಗಿದ್ದರಿಂದ ರೈತ ಪ್ರಹ್ಲಾದ್ ತೋಟದಲ್ಲೇ ಕುಳಿತು ಕಣ್ಣೀರು ಹಾಕಿದರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಅವರು, “ಬೆಳೆ ಹೋದ ಮೇಲೆ ನಾನಿದ್ದು ಏನು ಪ್ರಯೋಜನ? ಆನೆಗಳಿಂದಲೇ ಜೀವ ಹೋಗಲಿ” ಎಂದು ಆಕ್ರೋಶ ಹಾಗೂ ಅಳಲು ತೋಡಿಕೊಂಡರು. ಈ ವೇಳೆ ರೈತನನ್ನು ಸಮಾಧಾನಪಡಿಸಿ ಮನವೊಲಿಸಲು ಸ್ಥಳೀಯರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟರು.
‎ಕಾರ್ಬೈಲು ಸುತ್ತಮುತ್ತ ಸುಮಾರು 20 ಕಾಡಾನೆಗಳ ಸಂಚಾರವಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದು, ಮೇಲಿನ ತೋಟದ ಭಾಗದಲ್ಲೂ ಮತ್ತೆ 15 ಆನೆಗಳು ಪ್ರತ್ಯಕ್ಷವಾಗಿವೆ.  ಕಾರ್ಬೈಲು, ಮಾಕನಹಳ್ಳಿ ಮತ್ತು ಗಬ್ಬಳ್ಳಿಪುರ ಭಾಗಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಕಾಫಿ ಬೆಳೆಗಾರರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿದೆ. ಕಾಫಿ, ಅಡಿಕೆ ಮತ್ತು ತೆಂಗಿನ ಮರಗಳು ಧ್ವಂಸಗೊಂಡಿವೆ.
‎
ನವೆಂಬರ್ 30ರಂದು ನಡೆಯುವ ಸಭೆಯ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಅಧಿಕಾರಿಗಳು ಮತ್ತು ಶಾಸಕರು ತಿಳಿಸಿದ್ದಾರೆ. ಆದರೆ ಸಭೆಯವರೆಗೆ ಕಾಯದೆ ತಕ್ಷಣವೇ ಕಾಡಾನೆಗಳನ್ನು ಸ್ಥಳಾಂತರಿಸಬೇಕು ಹಾಗೂ ನಷ್ಟಕ್ಕೊಳಗಾದ ಬೆಳೆಗಳಿಗೆ ಸರ್ಕಾರ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಮತ್ತು ರೈತರು ಆಗ್ರಹಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed