लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
27/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಮದ್ಯ ಮಾರಾಟಕ್ಕೂ ಮುನ್ನ ಆರೋಗ್ಯ ತಪಾಸಣೆ ಕಡ್ಡಾಯಗೊಳಿಸಲು ಆಗ್ರಹ….

1 min read

ಮದ್ಯ ಮಾರಾಟಕ್ಕೂ ಮುನ್ನ ಆರೋಗ್ಯ ತಪಾಸಣೆ ಕಡ್ಡಾಯಗೊಳಿಸಲು ಆಗ್ರಹ

ಬೇಲೂರು: ಮದ್ಯಪಾನಿಗಳ ಆರೋಗ್ಯದ ಹಿತದೃಷ್ಟಿಯಿಂದ ಮದ್ಯ ಮಾರಾಟಕ್ಕೂ ಮುನ್ನ ವೈದ್ಯಕೀಯ ತಪಾಸಣೆ ನಡೆಸುವ ವ್ಯವಸ್ಥೆಯನ್ನು ಕರ್ನಾಟಕದಲ್ಲಿಯೂ ಜಾರಿಗೆ ತರಬೇಕು ಎಂದು ಕರ್ನಾಟಕ ಮಧ್ಯಪಾನಪ್ರಿಯರ ಹೋರಾಟ ಸಂಘದ ಬೇಲೂರು ತಾಲೂಕು ಅಧ್ಯಕ್ಷ ಟಿ ಓ ತೋಟೇಶ್ ತಗರೆ ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ಪ್ರಸ್ತಾಪಿಸಲಾಗಿದ್ದು, ಮಧ್ಯಪ್ರದೇಶ ರಾಜ್ಯದ ಮಾದರಿಯಲ್ಲಿ ಮದ್ಯದಂಗಡಿಗಳ ಮುಂಭಾಗ ಸರ್ಕಾರಿ ವೈದ್ಯಾಧಿಕಾರಿಗಳಿಂದ ಮದ್ಯಪಾನಿಗಳ ಆರೋಗ್ಯ ತಪಾಸಣೆ ನಡೆಸುವ ವ್ಯವಸ್ಥೆ ಕಲ್ಪಿಸಬೇಕು. ಹೃದಯ ಸಂಬಂಧಿ ಸಮಸ್ಯೆ, ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳಿರುವವರಿಗೆ ವೈದ್ಯರ ಸಲಹೆಯಂತೆ ಮದ್ಯಪಾನ ಮಾಡದಂತೆ ಸೂಚಿಸಿ, ಅಗತ್ಯವಿದ್ದಲ್ಲಿ ಮದ್ಯ ಮಾರಾಟ ನಿರಾಕರಿಸುವ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಈ ಸಂಬಂಧ ಅಬಕಾರಿ ಸಚಿವರು ಹಾಗೂ ಆರೋಗ್ಯ ಸಚಿವರಾಗಿದ್ದ ಖಾದರ್ ಸಾಹೇಬರ ಗಮನಕ್ಕೂ ಸಂಘದ ವತಿಯಿಂದ ವಿಷಯವನ್ನು ತರಲಾಗಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ರಾಜ್ಯ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed