लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
16/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಎಲ್ಲ ಸಾರಿಗೆ ಘಟಕಗಳಲ್ಲಿ ವಿಶ್ರಾಂತಿ ಗೃಹ ನಿರ್ಮಾಣ: ಲಕ್ಷ್ಮಣ ಸವದಿ #avintvcom

1 min read
Featured Video Play Icon

ಎಲ್ಲ ಸಾರಿಗೆ ಘಟಕಗಳಲ್ಲಿ ವಿಶ್ರಾಂತಿ ಗೃಹ ನಿರ್ಮಾಣ: ಲಕ್ಷ್ಮಣ ಸವದಿ

ಬೆಳಗಾವಿ 08 (ಕರ್ನಾಟಕ ವಾರ್ತೆ):  ಚಾಲಕರು, ನಿರ್ವಾಹಕರ ವಿಶ್ರಾಂತಿಗೆ ಅನುಕೂಲವಾಗುವಂತೆ ಹಂತ ಹಂತವಾಗಿ ಇತರೆ ಎಲ್ಲ ಸಾರಿಗೆ ಘಟಕಗಳಲ್ಲಿ ವಿಶ್ರಾಂತಿ ಗೃಹಗಳನ್ನು ನಿರ್ಮಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಹೇಳಿದರು.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗದ ಘಟಕ 3 ರಲ್ಲಿ ನೂತನವಾಗಿ ನಿರ್ಮಿಸಿದ ಮಹಿಳಾ ಮತ್ತು ಪುರಷರ ಸಿಬ್ಬಂದಿಗಳ ವಿಶ್ರಾಂತಿ ಗೃಹಗಳು ಹಾಗೂ ಶುದ್ದ ಕುಡಿಯುವ ನೀರಿನ ಘಟಕವನ್ನು ಶುಕ್ರವಾರ(8) ಉದ್ಘಾಟಿಸಿದ ಬಳಿಕ ಅವರು ಮಾಧ್ಯಮದವರ ಜತೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.

ಕರ್ತವ್ಯದ ಮೇರೆಗೆ ಬೇರೆ ಬೇರೆ ಜಿಲ್ಲೆಗಳಿಂದ ಬರುವ ಚಾಲಕರು ಹಾಗೂ ನಿರ್ವಾಹಕರುಗಳಿಗೆ‌ ವಸತಿಗೆ ಬಹಳ ತೊಂದರೆ ಆಗುತ್ತಿದ್ದು, ಇದನ್ನು ಗಮನಿಸಿ ಮಹಿಳಾ ಹಾಗೂ ಪುರುಷರಿಗಾಗಿ ಪ್ರತ್ಯೇಕ ಎರಡು ವಿಶ್ರಾಂತಿ ಗೃಹ ನಿರ್ಮಾಣ ಮಾಡಲಾಗಿದೆ ಎಂದು ಅವರು ಹೇಳಿದರು

ನೌಕರರ ಬೇಡಿಕೆ ಶೀಘ್ರ ಈಡೇರಿಕೆ ಭರವಸೆ:

ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳ ಒಟ್ಟು 10 ಬೇಡಿಕೆಗಳಲ್ಲಿ 9 ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಕೊಡಲಾಗಿದೆ. ಆರನೇ ವೇತನ ಆಯೋಗಕ್ಕಾಗಿ ಸಮಿತಿಯನ್ನು ರಚಿಸಲಾಗಿದ್ದು, ಸಿಬ್ಬಂದಿಗಳ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸಮಿತಿಯು ಕಾರ್ಯಾರಂಭಿಸಿದೆ ಎಂದು ಸಚಿವ ಲಕ್ಷ್ಮಣ ಸವದಿ ಹೇಳಿದರು.

ವಿದ್ಯಾರ್ಥಿಗಳ ಪಾಸ್ ವಿತರಣೆ ಆರಂಭ:

ಶಾಲಾ -ಕಾಲೇಜುಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಕಾರ್ಯ ಪ್ರಾರಂಭವಾಗಿದೆ. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಯಾವುದೇ ರೀತಿ ತೊಂದರೆ ಆಗದಂತೆ ಅವರನ್ನು ಶಾಲಾ -ಕಾಲೇಜುಗಳಿಗೆ ತಲುಪಿಸುವ ಜವಾಬ್ದಾರಿ ನಮ್ಮದು ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author

More Stories

You may have missed