लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
16/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಗ್ರಾಮದ ಸುಪುತ್ರ ಬಿ.ಬಿ.ಲಕ್ಷ್ಮೇಗೌಡ ಅವರಿಗೆ ಮುಖ್ಯಮಂತ್ರಿಗಳ….#avintvcom

1 min read
Featured Video Play Icon

ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಗ್ರಾಮದ ಸುಪುತ್ರ ಬಿ.ಬಿ.ಲಕ್ಷ್ಮೇಗೌಡ ಅವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕವು ಲಭಿಸಿದ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ಟೌನ್ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಚಂದ್ರಕಲಾ ರಮೇಶ್ ಅವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು …

ಕೆ.ಆರ್.ಪೇಟೆ ತಾಲ್ಲೂಕಿನ ದಬ್ಬೇಘಟ್ಟ ಗ್ರಾಮದ ಜಗನ್ನಾಥ್ ಅವರು ಕಾಡುಗಳ್ಳ ವೀರಪ್ಪನ್ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಆತನ ಕುತಂತ್ರದಿಂದ ಬಲಿಯಾದ ಸಬ್ ಇನ್ಸ್ ಪೆಕ್ಟರ್ ಜಗನ್ನಾಥ್ ಅವರಿಗೆ ಈ ಹಿಂದೆ ಮುಖ್ಯಮಂತ್ರಿಗಳ ಚಿನ್ನದ ಪದಕ ಲಭಿಸಿತ್ತು. 20 ವರ್ಷಗಳ ನಂತರ ಮತ್ತೆ ಕೆ.ಆರ್.ಪೇಟೆ ತಾಲ್ಲೂಕಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ತಂದುಕೊಟ್ಟ ಹಿರಿಮೆಗೆ ಲಕ್ಷ್ಮೇಗೌಡ ಅವರು ಪಾತ್ರರಾಗಿದ್ದಾರೆ…

ಪ್ರಸ್ತುತ ಹೊಳೆನರಸೀಪುರ ವಿಭಾಗದಲ್ಲಿ ಡಿವೈಎಸ್ ಪಿ ಆಗಿ ಕಳೆದ ಎರಡೂವರೆ ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಲಕ್ಷ್ಮೇಗೌಡ ಇಲಾಖೆಯಲ್ಲಿ ಶಿಸ್ತು ಮತ್ತು ಬದ್ಧತೆಗೆ ಹೆಸರು ವಾಸಿಯಾಗಿದ್ದಾರೆ. ತಮ್ಮ ಶಿಸ್ತುಬದ್ಧವಾದ ಕೆಲಸ ಹಾಗೂ ಕಾರ್ಯದಕ್ಷತೆಗೆ ಹೆಸರುಗಳಿಸಿರುವ ಗೌಡರು ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ…

ಇಂದು ಹೊಳೆನರಸೀಪುರ ಪಟ್ಟಣಕ್ಕೆ ಭೇಟಿ ನೀಡಿದ ಬಿಜೆಪಿ ನಗರ ಘಟಕದ ಮಹಿಳಾ ಕಾರ್ಯಕರ್ತೆಯರು ಡಿವೈಎಸ್ ಪಿ ಲಕ್ಷ್ಮೇಗೌಡ ಅವರನ್ನು ಸನ್ಮಾನಿಸಿ ಗೌರವಿಸಿ ಅಭಿನಂದಿಸುವ ಮೂಲಕ ತವರಿನ ಕಾಣಿಕೆಯನ್ನು ನೀಡಿದರು..

ಮಾಹಿತಿಗಾಗಿ.ಡಾ.ಕೆ.ಆರ್.ನೀಲಕಂಠ . ಕೃಷ್ಣರಾಜಪೇಟೆ . ಮಂಡ್ಯ.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author

More Stories

You may have missed