ಪೋಷಣ್ ಅಭಿಯಾನ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಕುರಿತಾಗಿ ಗೂಗಲ್ ಮೀಟ್ ಮೂಲಕ ಸಭೆ ನಡೆಸಿದರು.#avintvcom
1 min readಇಂದು ಬೆಂಗಳೂರಿನಲ್ಲಿ, ಪೋಷಣ್ ಅಭಿಯಾನ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಕುರಿತಾಗಿ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಉಪನಿರ್ದೇಶಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳೊಂದಿಗೆ *ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ,* ಯವರು ಗೂಗಲ್ ಮೀಟ್ ಮೂಲಕ ಸಭೆ ನಡೆಸಿ, ಸಮಾಲೋಚನೆ ನಡೆಸಿದರು. ಇದೇ ವೇಳೆ ಪ್ರತಿ ಜಿಲ್ಲೆಯಲ್ಲಿ ಯೋಜನೆಯ ಕಾರ್ಯಚಟುವಟಿಕೆ ಬಗ್ಗೆ ಮಾಹಿತಿ ಪಡೆದು, ಪರಿಶೀಲಿಸಿದರು. ಪೋಷಣ್ ಅಭಿಯಾನ ಯೋಜನೆ ಅನುಷ್ಠಾನದಲ್ಲಿ ದೇಶದಲ್ಲಿ 31ನೇ ಸ್ಥಾನದಲ್ಲಿದ್ದ ನಮ್ಮ ರಾಜ್ಯ, ಪ್ರಸ್ತುತ 2ನೇ ಸ್ಥಾನ ಪಡೆದುಕೊಂಡಿಕೊಂಡಿರುವುದು ಸಂತಸದ ಸಂಗತಿ. ಈ ನಿಟ್ಟಿನಲ್ಲಿ ಮುಂದಿನ ದಿನಮಾನಗಳಲ್ಲಿ ಈ ಯೋಜನೆಯನ್ನು ಇನ್ನಷ್ಟು ಸಮರ್ಪಕವಾಗಿ ಕಾರ್ಯಗತಗೊಳಿಸಿ, ಮೊದಲ ಸ್ಥಾನ ಪಡೆಯುವ ಗುರಿಯತ್ತ, ಸೂಕ್ತ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಯುಕ್ತರಾದ ಶ್ರೀ ಪೆದ್ದಪ್ಪಯ್ಯ, ಜಂಟಿ ನಿರ್ದೇಶಕರಾದ ಡಾ. ಉಷಾ ಹಾಗೂ ವಿವಿಧ ಜಿಲ್ಲೆಯ ಉಪನಿರ್ದೇಶಕರು ಹಾಜರಿದ್ದರು.


