AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಕಾಡಾನೆಗಳ ದಾಳಿಗೆ ರೈತರು ಕಂಗಾಲು : ಎರಡು ಎಕರೆ ಶುಂಠಿ ಬೆಳೆ ಹಾನಿ.”

1 min read

ಮೂಡಿಗೆರೆ:ತಾಲ್ಲೂಕಿನ ಜಿ. ಹೊಸಹಳ್ಳಿಯಲ್ಲಿ ಬೀಟಮ್ಮ–2 ಗುಂಪಿನ ಕಾಡಾನೆಗಳು ರಾತ್ರಿ ವೇಳೆ ತೋಟಗಳಿಗೆ ನುಗ್ಗಿ ಶುಂಠಿ ಬೆಳೆಯನ್ನು ತುಳಿದು ನಾಶಪಡಿಸಿರುವ ಘಟನೆ ಗುರುವಾರ ನಡೆದಿದೆ.

ಕಾಡಾನೆಗಳ ದಾಳಿಯಿಂದ ರೈತರಾದ ಮುತ್ತು ಹಾಗೂ ಗೋಪಾಲ್ ಎಚ್.ಸಿ.ಅವರಿಗೆ ಸೇರಿದ ಸುಮಾರು ಎರಡು ಎಕರೆ ಶುಂಠಿ ಬೆಳೆ ಸಂಪೂರ್ಣ ಹಾನಿಗೊಳಗಾಗಿದೆ.ಬೆಳೆ ನಾಶವಾಗಿರುವುದರಿಂದ ರೈತರು ಅಪಾರ ನಷ್ಟ ಅನುಭವಿಸಿದ್ದು,ಆತಂಕ ವ್ಯಕ್ತಪಡಿಸಿದ್ದಾರೆ.

ಕಾಡಾನೆಗಳ ನಿರಂತರ ಹಾವಳಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು,ಅರಣ್ಯ ಇಲಾಖೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಹಾನಿಯ ಮೌಲ್ಯಮಾಪನ ನಡೆಸಿ ಸೂಕ್ತ ಪರಿಹಾರ ನೀಡಬೇಕು.ಅಲ್ಲದೆ ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಸ್ಥಾನಿಕ ಸಂಪಾದಕರು.

ನ್ಯೂಸ್ ಬ್ಯೂರೋ,ಅವಿನ್ ಟಿವಿ.

About Author

Leave a Reply

Your email address will not be published. Required fields are marked *

You may have missed