“ರಾಷ್ಟ್ರೀಯ ಡೆಂಗ್ಯೂ ವಿರೋಧಿ ಮಾಸಾಚಾರಣೆ.”
1 min read
oplus_140509184
ಆಲ್ದೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಡೆಂಗ್ಯೂ ವಿರೋಧಿ ಮಹಾಸಚಾರಣೆ ಕಾರ್ಯಕ್ರಮ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 13/07/2026ರ ಸೋಮವಾರದಂದು ನಡೆಯಿತು.

ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವೈ .ಸಿ.ದೇವರಾಜ್ ಅವರು ಡೆಂಗ್ಯೂ ಮತ್ತು ಮಲೇರಿಯಾ ಸಾಂಕ್ರಾಮಿಕ ಕಾಯಿಲೆಗಳನ್ನು ಹರಡುವ ಸೊಳ್ಳೆಗಳ ಹಾಗೂ ಮನೆಯ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಯ ನಿರ್ವಹಣೆ ಬಗ್ಗೆ,ಕಾಯಿಲೆಗಳನ್ನು ಮುಂಜಾಗ್ರತೆಯಿಂದ ತಡೆಯಲು ಇರುವ ಅವಕಾಶಗಳು,ಕಾಯಿಲೆಯ ಆರಂಭಿಕ ಲಕ್ಷಣಗಳು,ಚಿಕಿತ್ಸೆ ಕುರಿತು ಮಾಹಿತಿ ನೀಡುವುದರ ಜೊತೆಗೆ ಜನಸಂಖ್ಯೆಯ ಹೆಚ್ಚಳ,ಅದರಿಂದ ಉಂಟಾಗುತ್ತಿರುವ ಸಾಮಾಜಿಕ ಸಮಸ್ಯೆಗಳು,ಸಾಂಕ್ರಾಮಿಕವಲ್ಲದ ಕಾಯಿಲೆಗಳಿಗೆ ಇಲಾಖೆ ವತಿಯಿಂದ ದೊರೆಯುವ ಚಿಕಿತ್ಸಾ ಸೌಲಭ್ಯಗಳು ಅಬಾ ಕಾರ್ಡ್ ಮತ್ತು ಇಲಾಖೆಯಲ್ಲಿ ದೊರೆಯುವ ಇನ್ನಿತರ ಆರೋಗ್ಯ ಯೋಜನೆಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾಗಿ ಶುಚಿ ಯೋಜನೆಯಡಿ ಪ್ಯಾಡ್ ಗಳ ವಿತರಣೆಯನ್ನು ಇಲಾಖೆಯಿಂದ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ದೇವೇಂದ್ರ ವಹಿಸಿದ್ದು,ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ರಾಧ ಮಣಿ, ಜ್ಯೋತಿ,ಉಪನ್ಯಾಸಕ ಪ್ರಕಾಶ್ ನಾಯಕ್ ಹಾಗೂ ಎಲ್ಲಾ ಉಪನ್ಯಾಸಕರು ಭಾಗವಹಿಸಿದ್ದರು.
🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.
ಸ್ಥಾನಿಕ ಸಂಪಾದಕರು.
ನ್ಯೂಸ್ ಬ್ಯೂರೋ,ಅವಿನ್ ಟಿವಿ.

