AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಎಸ್.ಡಿ.ಪಿ.ಐ ನಿಂದ ವಿಧಾನಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ದೂರು.”

1 min read

ಆಲ್ದೂರು: ಎಸ್ ಡಿ ಪಿ ಐ ವತಿಯಿಂದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರು ಮುಸ್ಲಿಂ ಸಮುದಾಯದ ವಿರುದ್ಧ ನಿಂದನಾತ್ಮಕ ಪದ ಬಳಕೆ ಮಾಡಿದ್ದು ಮುಸ್ಲಿಂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದು ಮುಸ್ಲಿಮರ ವಿರುದ್ಧ ದ್ವೇಷ ಕಾರುತ್ತಾ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಶನಿವಾರ ಎಸ್.ಡಿ.ಪಿ.ಐ ವತಿಯಿಂದ ಪೊಲೀಸ್ ಠಾಣೆಗೆ ದೂರನ್ನು ಸಲ್ಲಿಸಲಾಗಿದೆ.

ದೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಭಾಷಣ ಮಾಡುತ್ತ ನಾನು ಇವರಿಗೆ ಕೇಳೋಕೆ ಬಯಸುವುದು ಮುಲ್ಲಾನಿಗೂ ನೀಟ್ ಎಕ್ಸಾಮ್ಗು ಏನ್ ಸಂಬಂಧ,ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ ಆತ ಬಂದು ನೀಟ್ ವಿರುದ್ಧ ಹೋರಾಟ ಮಾಡುತ್ತಾನ ಎಂದು ಮುಸ್ಲಿಂ ವಿರುದ್ಧ ದ್ವೇಷ ಭಾಷಣ ಮಾಡಿ ಧರ್ಮಗಳ ನಡುವೆ ಸಂಘರ್ಷ ಉಂಟು ಮಾಡಿ ಸಮಾಜದಲ್ಲಿ ಅಶಾಂತಿ ಎಬ್ಬಿಸಿ ಜಂತರ್ ಮಂತರ್ ನಲ್ಲಿನ ವಿದ್ಯಾರ್ಥಿಗಳ ಹೋರಾಟಕ್ಕೆ ಧರ್ಮದ ಲೇಪವನ್ನು ಹಚ್ಚಿ ಕಾನೂನು ಸುವ್ಯವಸ್ಥೆ ಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಮಾತನಾಡಿರುತ್ತಾರೆ. ಈ ವ್ಯಕ್ತಿ ಪದೇಪದೇ ಈ ರೀತಿಯ ಧರ್ಮ ಧರ್ಮಗಳ ನಡುವೆ ದ್ವೇಷ ಹಚ್ಚುವ ಹೇಳಿಕೆಗಳನ್ನು ಭಾಷಣಗಳನ್ನು ಮಾಡುವ ಪುನರಾವರ್ತಿತ ಆರೋಪಿಯಾಗಿದ್ದಾರೆ ಮುಸ್ಲಿಮರನ್ನು ನಿಂದಿಸುವುದು ಈತನ ಚಾಳಿಯಾಗಿದೆ ಈ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಿ ಮತ್ತು ಸಿ.ಟಿ.ರವಿಯವರು ಮಾತನಾಡಿರುವ ವಿಡಿಯೋ ತುಣುಕಿನ ಸಿಡಿಯನ್ನು ಲಗತ್ತಿಸಿ ಪಿ.ಎಸ್.ಐ ರವಿ ಜಿ.ಎ.ಅವರಿಗೆ ದೂರನ್ನು ನೀಡಲಾಗಿದೆ ಎಂದು ಆಲ್ದೂರು ಗ್ರಾಮ ಸಮಿತಿ ಕಾರ್ಯದರ್ಶಿ ರಿಯಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಜಿಲ್ಲಾ ಖಜಾಂಚಿ ಮಹಮ್ಮದ್ ಅಲಿ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಸ್ಥಾನಿಕ ಸಂಪಾದಕರು.

ನ್ಯೂಸ್ ಬ್ಯೂರೋ,ಅವಿನ್ ಟಿವಿ.

About Author

Leave a Reply

Your email address will not be published. Required fields are marked *

You may have missed