“ಮಾನಸ ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ ಕಾರ್ಯಕ್ರಮ.”
1 min read
ಆಲ್ದೂರು:ಇಲ್ಲಿಗೆ ಸಮೀಪವಿರುವ ಮಾನಸ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗುರುವಾರ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಮಾತನಾಡಿದ ವಲಯ ಮೇಲ್ವಿಚಾರಕಿ ಭಾರತಿ,ಕಾರ್ಯಕ್ರಮದ ಗುರಿ ಹಾಗೂ ಉದ್ದೇಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಹೊಸಪೇಟೆ ಸುರೇಶ್,ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಧೂಮಪಾನ,ಮದ್ಯಪಾನ ಹಾಗೂ ಮೊಬೈಲ್‌ಗಳ ಅತಿಯಾದ ಬಳಕೆಯಿಂದ ಉಂಟಾಗುತ್ತಿರುವ ದುಷ್ಪರಿಣಾಮಗಳ ಕುರಿತು ವಿವರಿಸಿದರು.

ಈ ದುಶ್ಚಟಗಳಿಂದ ವಿದ್ಯಾರ್ಥಿಗಳ ಕಲಿಕಾ ಹಿನ್ನಡೆ ಉಂಟಾಗುತ್ತಿರುವ ಅಂಕಿ-ಅಂಶಗಳನ್ನು ತಿಳಿಸಿ, ವ್ಯಾಸಂಗದ ಕಡೆಗೆ ಏಕಾಗ್ರತೆ,ಆಸಕ್ತಿ ಹಾಗೂ ಗ್ರಹಿಕಾ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಬಗ್ಗೆ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತಾಧಿಕಾರಿ ಸಾವಿತ್ರಿ ಎಚ್.ಡಿ.,ವಿದ್ಯಾರ್ಥಿಗಳಲ್ಲಿ ಉತ್ತಮ ಆರೋಗ್ಯಕರ ಜೀವನಶೈಲಿ ಹಾಗೂ ಶೈಕ್ಷಣಿಕ ಬೆಳವಣಿಗೆಗೆ ಇಂತಹ ಅರಿವು ಕಾರ್ಯಕ್ರಮಗಳು ಅತ್ಯಂತ ಅಗತ್ಯವಾಗಿದ್ದು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶಾಲಾ-ಕಾಲೇಜುಗಳಲ್ಲಿ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಆಶಯ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಯೋಜನೆಯ ಸೇವಾ ಪ್ರತಿನಿಧಿಗಳಾದ ಭಾಗ್ಯ,ಮಾನಸ ಹಾಗೂ ವಿ.ಎಲ್.ಇ.ರಮ್ಯಾ ಮುಂತಾದವರು ಉಪಸ್ಥಿತರಿದ್ದರು.
✍🏻ಬರಹ ಕೃಪೆ.✍🏻

ರತ್ನ ನಾಗೇಶ್.
ಚಿಕ್ಕಮಗಳೂರು.
ನ್ಯೂಸ್ ಬ್ಯೂರೋ,ಅವಿನ್ ಟಿವಿ.
🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.
ಸ್ಥಾನಿಕ ಸಂಪಾದಕರು.
ನ್ಯೂಸ್ ಬ್ಯೂರೋ,ಅವಿನ್ ಟಿವಿ.

