“ಅಂಬೇಡ್ಕರ್ ವಸತಿ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ.”
1 min read
ಆಲ್ದೂರು: ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಮತ್ತು ಐಸಿರಿ ಫೌಂಡೇಶನ್(ರಿ) ಸಹಭಾಗಿತ್ವದೊಂದಿಗೆ 1/07/2026ರ ಶನಿವಾರದಂದು ವಿಶ್ವ ಜನಸಂಖ್ಯಾ ದಿನಾಚರಣೆ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅಕ್ಕಮಹಾದೇವಿ ಮಹಿಳಾ ಸಂಘದ ನಿರ್ದೇಶಕಿ ವೀಣಾ ಮಲ್ಲಿಕಾರ್ಜುನ್, ವಿಶ್ವ ಜನಸಂಖ್ಯಾ ನಿಯಂತ್ರಣ ಪ್ರತಿಜ್ಞಾ ವಿಧಿ ಬೋಧಿಸಿ, ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿ ಹಂತದಿಂದಲೇ ವಿಷಯ ಸಂಬಂಧಿತ ಜಾಗೃತಿ ಮತ್ತು ಅರಿವು ವಿದ್ಯಾರ್ಥಿಗಳಲ್ಲಿ ಮೂಡುತ್ತದೆ ಇದರ ಶೀರ್ಷಿಕೆಯಡಿ ಆಯೋಜಿಸಿರುವ ಸ್ಪರ್ಧೆಗಳಿಂದ ಇನ್ನಷ್ಟು ವಿದ್ಯಾರ್ಥಿಗಳು ಜಾಗೃತವಾಗುತ್ತಾರೆ ಎಂದು ಅಭಿಪ್ರಾಯ ಹಂಚಿಕೊಂಡರು.
ವಿಶೇಷ ಉಪನ್ಯಾಸ ನೀಡಿದ ಸಮಾಜ ವಿಜ್ಞಾನ ಶಿಕ್ಷಕ ಪ್ರಭುಕುಮಾರ್ ಜನಸಂಖ್ಯಾ ದಿನಾಚರಣೆಯ ಹಿನ್ನೆಲೆ, ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು ಭೂಮಿಯ ಸುರಕ್ಷತೆ ಕಾಪಾಡುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಮಧುಸೂದನ್.ಪಿ.ಆರ್., ವಿಶ್ವದಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದ ದೇಶವು ಅಂಕಿ ಅಂಶಗಳನ್ನು ಲೆಕ್ಕ ಹಾಕದೆ ನಮ್ಮಲ್ಲಿರುವ ಕೌಶಲ್ಯಗಳನ್ನು ಮಾನವ ಸಂಪನ್ಮೂಲಗಳನ್ನು ಸಮಗ್ರವಾಗಿ ಬಳಸಿಕೊಂಡು ಯುವ ಜನತೆಯ ಸಬಲೀಕರಣಕ್ಕೆ ಶ್ರಮಿಸಬೇಕು ಎಂದು ತಿಳಿಸಿದರು.
ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಜಾಗೃತಿ ಫಲಕಗಳ ಪ್ರದರ್ಶನ ಮಾನವ ಸರಪಳಿ ಮೂಲಕ ಜನಸಂಖ್ಯಾ ನಿಯಂತ್ರಣ ಸಂದೇಶದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ ಮಾಡಲಾಯಿತು.ಶಿಕ್ಷಕರಾದ ನಾಗರಾಜ್,ಪ್ರೇಮ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.
ಸ್ಥಾನಿಕ ಸಂಪಾದಕರು.
ನ್ಯೂಸ್ ಬ್ಯೂರೋ,ಅವಿನ್ ಟಿವಿ.

