लाइव कैलेंडर

April 2026
M T W T F S S
 12345
6789101112
13141516171819
20212223242526
27282930  
19/04/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಅತಿಥಿ ಉಪನ್ಯಾಸಕರಿಗೆ ನವೆಂಬರ್ 30ರ ಒಳಗೆ ಸಂಬಳ ನೀಡದಿದ್ದರೆ ಮುಖ್ಯಮಂತ್ರಿ ಮತ್ತು… avintvcom

1 min read
Featured Video Play Icon

ಅತಿಥಿ ಉಪನ್ಯಾಸಕರಿಗೆ ನವೆಂಬರ್ 30ರ ಒಳಗೆ ಸಂಬಳ ನೀಡದಿದ್ದರೆ ಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವರ ಮನೆಗೆ ಮತ್ತಿಗೆ: ಆಮ್ ಆದ್ಮಿ ಪಕ್ಷದ ಎಚ್ಚರಿಕೆ
•ಯಡಿಯೂರಪ್ಪ ಅವರೇ ಸಂಬಳ ಕೊಡಿ ಇಲ್ಲ, ಪ್ರಾಣ ಬಿಡಲು ಅನುಮತಿ ಕೊಡಿ: ಅತಿಥಿ ಉಪನ್ಯಾಸಕರ ಅಳಲು
ಬೆಂಗಳೂರು ನವಂಬರ್ 20: ಲಾಕ್ಡೌನ್ ಪ್ರಾರಂಭ ಆದಾಗಿನಿಂದ ನಯಾ ಪೈಸೆ ಸಂಬಳ ಕೊಡದೆ ರಾಜ್ಯ ಬಿಜೆಪಿ ಸರ್ಕಾರ ಅತಿಥಿ ಉಪನ್ಯಾಸಕರನ್ನು ಉಪವಾಸ ಕೆಡವಿದೆ. ನವೆಂಬರ್ 30ರ ಒಳಗೆ ಅತಿಥಿ ಉಪನ್ಯಾಸಕರ ಖಾತೆಗೆ ಸಂಬಳ ಜಮೆ ಮಾಡದಿದ್ದರೆ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಆಮ್ ಆದ್ಮಿ ಪಕ್ಷದ ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷ್ಮಿಕಾಂತ್ ರಾವ್ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ವೇತನ ಸಿಗದೆ ಅತಿಥಿ ಉಪನ್ಯಾಸಕರು ಬಹಳ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ನವೆಂಬರ್ 30ರ ಒಳಗೆ ಅತಿಥಿ ಉಪನ್ಯಾಸಕರ ಖಾತೆಗೆ ಸಂಬಳ ಜಮೆ ಮಾಡದಿದ್ದರೆ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.
ಅತಿಥಿ ಉಪನ್ಯಾಸಕ ಚನ್ನಬಸಪ್ಪ ರೇವಡಿ ಮಾತನಾಡಿ, ಲಾಕ್ಡೌನ್ ಪ್ರಾರಂಭ ಆದಾಗಿನಿಂದ ನಯಾ ಪೈಸೆ ಸಂಬಳ ಕೊಡದೆ ರಾಜ್ಯ ಬಿಜೆಪಿ ಸರ್ಕಾರ ಅತಿಥಿ ಉಪನ್ಯಾಸಕರನ್ನು ಉಪವಾಸ ಕೆಡವಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ನಮ್ಮ ಸಂಬಳ ಕೊಡಿ ಇಲ್ಲ ಪ್ರಾಣ ಬಿಡಲು ಅನುಮತಿ ಕೊಡಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಸರಿಯಾಗಿ ಸಂಬಳ ಸಿಗದೆ 23 ಜನ ಉಪನ್ಯಾಸಕರು ಜೀವ ಬಿಟ್ಟಿದ್ದಾರೆ, ನಿಮಗೆ ಇನ್ನೆಷ್ಟು ಜೀವ ಬೇಕು ಎಂದು ಪ್ರಶ್ನಿಸಿದರು.
ಅತಿಥಿ ಉಪನ್ಯಾಸಕ ಎಲ್.ಎನ್.ರೆಡ್ಡಿ ಮಾತನಾಡಿ, ಇಂತಹ ಸಂಕಷ್ಟದ ಸಮಯದಲ್ಲಿ ಕೈಹಿಡಿಯದ ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರಿಯಾಗಿ ಸಂಬಳ ನೀಡಿ ಎಂದು ಹೇಳಿ ಸರ್ಕಾರದ ಅಡಿಯಲ್ಲಿ ದುಡಿಯುತ್ತಿರುವ ನಮಗೆ ಮೋಸ ಮಾಡುತ್ತಿದೆ. ಈಗಾಗಲೇ ಕಾಲೇಜುಗಳು ಪ್ರಾರಂಭವಾಗಿದ್ದು ಮತ್ತೆ ನಮ್ಮನ್ನು ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದು ಹೇಳಿದ ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ ಅವರು ವಚನ ಭ್ರಷ್ಟರಾಗಿದ್ದಾರೆ ಎಂದರು.
ಅತಿಥಿ ಉಪನ್ಯಾಸಕರಿಗೆ ನವೆಂಬರ್ 30ರ ಒಳಗೆ ಸಂಬಳ ನೀಡುವಂತೆ ಆಮ್ ಆದ್ಮಿ ಪಕ್ಷದ ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷ್ಮಿಕಾಂತ್ ರಾವ್ ಆಗ್ರಹಿಸಿದರು. ಅತಿಥಿ ಉಪನ್ಯಾಸಕರಾದ ಚನ್ನಬಸಪ್ಪ ರೇವಡಿ, ಎಲ್.ಎನ್ ರೆಡ್ಡಿ ಇದ್ದರು

About Author

More Stories

You may have missed