AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ, ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಿಂದ ದಿನಾಂಕ 06/02/2024ರ ಮಂಗಳವಾರದಂದು ಆಕಾಶ ವೀಕ್ಷಣೆ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮವು ಸಂಜೆ 06ಗಂಟೆಗೆ ಆರಂಭವಾಗಲಿದ್ದು,ಮಂಡ್ಯ ಜಿಲ್ಲಾ ವಿಜ್ಞಾನ ವೇದಿಕೆಯ ಲೋಕೇಶ್ ಎಸ್‌.,ನಂಜರಾಜು ಸಿ.ಎಲ್.ಅವರು ಸುಮಾರು 50 ಆಕಾಶ ಕಾಯಗಳ ಕುರಿತು ವಿವರಣೆ ನೀಡಲಿದ್ದಾರೆ.ಬಳಿಕ ಸಂವಾದ ಕಾರ್ಯಕ್ರಮ ನಡೆಯಲಿದೆ.ಪ್ರವೇಶ ಉಚಿತವಾಗಿದ್ದು,ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಬಹುದಾಗಿದ್ದು,ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು (ದೂ:08263200012,ಮೊ:9663098873)ಸಂಪರ್ಕಿಸಬಹುದು ಎಂದು ತೇಜಸ್ವಿ ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿ. ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *