AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಪಾರ್ಕಿನಲ್ಲಿ ಕಾರಿನೊಳಗೆ ಜೋಡಿಗಳ ಲೈಂಗಿಕ ಚಟುವಟಿಕೆ : ತಿಳುವಳಿಕೆ ಹೇಳಲು ಹೋದ ಸಬ್ ಇನ್ಸ್ಪೆಕ್ಟರ್ ಮೇಲೆ ಕಾರಿನಿಂದ ದಾಳಿ.”

1 min read

ಜೋಡಿಯೊಂದು ಸಾರ್ವಜನಿಕ ಸ್ಥಳದಲ್ಲಿ ಕಾರಿನಲ್ಲೇ ಲೈಂಗಿಕ ಕ್ರಿಯೆ ನಡೆಸಿದ್ದು,ಇದೇ ವೇಳೆ ಜೋಡಿಗೆ ತಿಳುವಳಿಕೆ ಹೇಳಲು ಮುಂದಾದ ಪೊಲೀಸರ ಮೇಲೆಯೇ ಕಾರು ಚಲಾಯಿಸಿಕೊಂಡು ಜೋಡಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಉದ್ಯಾನವನವೊಂದರ ಬಳಿ ನಡೆದಿದೆ.

ಘಟನೆಯಲ್ಲಿ ರಿಸರ್ವ್ ಸಬ್ ಇನ್ಸ್ಪೆಕ್ಟರ್ ಮಹೇಶ್ ಎಂಬವರಿಗೆ ಗಾಯವಾಗಿದೆ.ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಕಿಯೋ ಸೆಲಾಟೋಸ್ ಕಾರಿನಲ್ಲಿ ಬಂದಿದ್ದ ಜೋಡಿ ಕಾರಿನಲ್ಲೇ ಅಶ್ಲೀಲ ವರ್ತನೆ ತೋರಿದ್ದಾರೆ. ಪಾರ್ಕ್ ನಲ್ಲಿ ಸಾರ್ವಜನಿಕರಿಗೆ ಕಾರಿನೊಳಗಿನ ದೃಶ್ಯಗಳು ಕಾಣುತ್ತಿರುವುದು ಅರಿವಿದ್ದರೂ ಲೆಕ್ಕಿಸದೇ ಲೈಂಗಿಕ ಕ್ರಿಯೆಯಲ್ಲಿ ನಿರತರಾಗಿದ್ದಾರೆ.ಈ ಸಂದರ್ಭದಲ್ಲಿ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಮಹೇಶ್ ಜೋಡಿಗೆ ತಿಳಿವಳಿಕೆ ಮೂಡಿಸಲು ಕಾರಿನ ಬಳಿ ತೆರಳಿದ್ದು,ಕಾರಿನ ನಂಬರ್ ಪ್ಲೇಟ್ ಪರಿಶೀಲಿಸಿದ್ದಾರೆ.ಈ ವೇಳೆ ಕಾರಿನಲ್ಲಿದ್ದ ಯುವಕ ಏಕಾಏಕಿ ಕಾರು ಚಲಾಯಿಸಿದ್ದಾನೆ.

ಏಕಾಏಕಿ ಕಾರು ಚಲಾಯಿಸಿದ ಪರಿಣಾಮ ಕಾರಿನ ಬಾನೆಟ್ ಮೇಲೆ ಮಹೇಶ್ ಬಿದ್ದಿದ್ದಾರೆ.ಬಾನೆಟ್ ಮೇಲೆ ಸಬ್ ಇನ್ಸ್’ಪೆಕ್ಟರ್ ಇದ್ದರೂ ಲೆಕ್ಕಿಸದ ಯುವಕ ಕಾರು ರಿವರ್ಸ್ ತೆಗೆದು ವೇಗವಾಗಿ ಮುಂದೆ ಚಲಾಯಿಸಿದ್ದಾನೆ. ಇದರಿಂದಾಗಿ ಸಬ್ ಇನ್ಸ್ಪೆಕ್ಟರ್ ಮಹೇಶ್ ಅವರಿಗೆ ಗಂಭೀರವಾಗಿ ಗಾಯವಾಗಿದೆ.ಘಟನೆ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

✍🏻ಬರಹ ಕೃಪೆ.✍🏻

ಸಿದ್ದಿಕ್ ಚಕ್ಕಮಕ್ಕಿ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *