ಪುರಾಣ ಪ್ರಸಿದ್ಧ ಕಬ್ಬಳಿ ಶ್ರೀ ಬಸವೇಶ್ವರ ಸ್ವಾಮಿಯ 89ನೇ ವರ್ಷದ ಜಾತ್ರಾ ಮಹೋತ್ಸವದ ಪ್ರಯುಕ್ತ ಸರಳವಾಗಿ ಆಚರಿಸಲಾಗುತ್ತಿರುವ
1 min readಜೈ ಶ್ರೀ ಗುರುದೇವ್
ಹಾಸನ ಜಿಲ್ಲೆ, ಹಿರೀಸಾವೆ ಹೋಬಳಿ, ಪುರಾಣ ಪ್ರಸಿದ್ಧ ಕಬ್ಬಳಿ ಶ್ರೀ ಬಸವೇಶ್ವರ ಸ್ವಾಮಿಯ 89ನೇ ವರ್ಷದ ಜಾತ್ರಾ ಮಹೋತ್ಸವದ ಪ್ರಯುಕ್ತ ಸರಳವಾಗಿ ಆಚರಿಸಲಾಗುತ್ತಿರುವ ಜಾತ್ರಾ ಮಹೋತ್ಸವದ 3ನೇ ದಿನವಾದ ಇಂದು ಹೋಮ, ಅಭಿಷೇಕ ಮತ್ತು ವಿಶೇಷ ಪೂಜಾ ಕಾರ್ಯಕ್ರಮವು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು. ಈ ಪೂಜಾ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಶಂಭುನಾಥ ಸ್ವಾಮೀಜಿಯವರು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ, ಹಾಸನ, ಪೂಜ್ಯ ಶ್ರೀ ಮಂಗಳನಾಥ ಸ್ವಾಮೀಜಿ ಗಳವರು, ಪೂಜ್ಯ ಶ್ರೀ ಶಿವಪುತ್ರನಾಥ ಸ್ವಾಮೀಜಿ ಗಳವರು, ಕಬ್ಬಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು


