लाइव कैलेंडर

April 2026
M T W T F S S
 12345
6789101112
13141516171819
20212223242526
27282930  
19/04/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

‎ಮಲೆನಾಡಿನ ಕಾಫಿನಾಡಿನಲ್ಲಿ ಕಾಡುಪ್ರಾಣಿ-ಮಾನವ ಸಂಘರ್ಷ ದಿನೇ ದಿನೇ….

1 min read

ಕಳಸ.

‎ಮಲೆನಾಡಿನ ಕಾಫಿನಾಡಿನಲ್ಲಿ ಕಾಡುಪ್ರಾಣಿ-ಮಾನವ ಸಂಘರ್ಷ ದಿನೇ ದಿನೇ ತೀವ್ರಗೊಳ್ಳುತ್ತಿರುವುದು ಆತಂಕಕ್ಕೆ ಕಾಡುಕೋಣದ ದಾಳಿಗೆ ಯುವಕನೊಬ್ಬ ಬಲಿಯಾಗಿರುವ ದುರ್ಘಟನೆ ಕಳಸ ತಾಲೂಕಿನ ಮೈದಾಡಿ ಗ್ರಾಮದ ಯಮಗೊಂಡ ಎಸ್ಟೇಟ್‌ನಲ್ಲಿ

ಮೃತ ಯುವಕನನ್ನು ಚೇತನ್ (30) ಎಂದು ಗುರುತಿಸಲಾಗಿದೆ. ಕಾಡುಕೋಣ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಚೇತನ್ ಅವರನ್ನು ತಕ್ಷಣವೇ ಕಳಸ ಆಸ್ಪತ್ರೆಗೆ ದಾಖಲಿಸಲಾಗಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

‎ಘಟನೆಯ ನಂತರ ಆಸ್ಪತ್ರೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಎದೆಮಟ್ಟಕ್ಕೆ ಬೆಳೆದ ಮಗನನ್ನು ಕಳೆದುಕೊಂಡ ಇವರ ಗೊಳಾಟ ಮನಕಲಕುವಂತದ್ದು. ಕಳಸ ಭಾಗದಲ್ಲಿ ಕಾಡುಕೋಣ ದಾಳಿಗಳು ನಿರಂತರವಾಗಿ ನಡೆಯುತ್ತಿದ್ದು, ಈಗಾಗಲೇ ಹಲವರು  ಗಾಯಗೊಂಡಿದ್ದಾರೆ. ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ.

‎ಈ ಹಿನ್ನೆಲೆಯಲ್ಲಿ ಕಾಡುಕೋಣ ಹಾವಳಿಗೆ ಶಾಶ್ವತ ಪರಿಹಾರ ಓದಗಿಸಬೇಕೆಂದು ಮಲೆನಾಡಿಗರು  ಆಗ್ರಹಿಸುತ್ತಿದ್ದಾರೆ. ಈ ಘಟನೆ ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

About Author

More Stories

Leave a Reply

Your email address will not be published. Required fields are marked *

You may have missed