AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ರಸ್ತೆ ಅಗಲೀಕರಣಗೊಳಿಸದಿದ್ದರೆ ಎಲ್ಲಾ ಪ್ರಗತಿಪರ ಸಂಘಟನೆಗಳ ಜೊತೆಗೆ ಪ್ರತಿಭಟನೆಯ ಎಚ್ಚರಿಕೆ.”

1 min read

ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ,ಪಟ್ಟಣದಿಂದ ಚಿಕ್ಕಮಗಳೂರು-ಬೇಲೂರು-ಮಂಗಳೂರು ತೆರಳುವ ರಾಷ್ಟ್ರೀಯ ಹೆದ್ದಾರಿಯನ್ನು ಒಂದು ತಿಂಗಳಲ್ಲಿ ಅಗಲೀಕರಣಕ್ಕೆ ಮುಂದಾಗಬೇಕು.ಇಲ್ಲವಾದರೆ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತಸಂಘ ಹಸಿರು ಸೇನೆ ಜಿಲ್ಲಾ ಸಂಚಾಲಕ ಡಿ.ಎಸ್.ರಮೇಶ್ ಎಚ್ಚರಿಕೆ ನೀಡಿದರು.

ಅವರು ದಿನಾಂಕ 22/12/2023ರ ಶುಕ್ರವಾರದಂದು ವಾಹಿನಿಯೊಂದಿಗೆ ಮಾತನಾಡುತ್ತಾ,ಮೂಡಿಗೆರೆ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣವಾಗಬೇಕೆಂದು ಅನೇಕ ವರ್ಷದಿಂದ ಒತ್ತಾಯ ಮಾಡುತ್ತಾ ಬಂದಿದ್ದರೂ ಆಳುವ ಸರಕಾರ, ಜನಪ್ರತಿನಿಧಿಗಳು ತಲೆ ಕೆಡಿಸಿಕೊಂಡಿಲ್ಲ.ವಾಹನ ದಟ್ಟಣೆ ಅಧಿಕವಾಗಿದ್ದು,ರಸ್ತೆ ಕಿರಿದಾಗಿದ್ದರಿಂದ ಪ್ರತಿದಿನ ಅಪಘಾತಗಳು ಸಂಭವಿಸುತ್ತಿದ್ದು,ಸಾವು ನೋವು ಉಂಟಾಗುತ್ತಿದೆ.ಇಲ್ಲಿನ ಸಂಸದೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಮಂತ್ರಿಯಾಗಿದ್ದಾರೆ.ಸರಕಾರದ ಗಮನ ಸೆಳೆದು ರಸ್ತೆ ಅಗಲೀಕರಣ ಮಾಡಿಸುವುದು ಅವರ ಕರ್ತವ್ಯವಾಗಿದೆ.ಆದರೆ ಯಾವುದಕ್ಕೂ ತಲೆ ಕೆಡಸಿಕೊಂಡಂತಿಲ್ಲ.ಹಾಗಾಗಿ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಡಿ.ಆರ್.ಪುಟ್ಟಸ್ವಾಮಿ ಮಾತನಾಡಿ, ಈ ಹಿಂದೆ ರಾಜ್ಯ ಹೆದ್ದಾರಿಯಾಗಿದ್ದಾಗ ರಸ್ತೆ ಅಗಲೀಕರಣಕ್ಕೆ ಅನೇಕ ಸಭೆ ನಡೆಸಲಾಗಿತ್ತು. ನಂತರ ರಾಷ್ಟ್ರೀಯ ಹೆದ್ದಾರಿಯಾದ ಬಳಿಕ ರಸ್ತೆ ಅಗಲೀಕರಣದ ಬಗ್ಗೆ ಜನಪ್ರತಿನಿಧಿಗಳು ಚಕಾರವೇ ಎತ್ತುತ್ತಿಲ್ಲ.ಜಿಲ್ಲೆಯಲ್ಲಿ ಎಲ್ಲಾ ತಾಲ್ಲೂಕಿನಲ್ಲಿ ರಸ್ತೆ ಅಗಲೀಕರಣಗೊಂಡಿದೆ. ಆದರೆ ಮೂಡಿಗೆರೆ ತಾಲ್ಲೂಕಿನಲ್ಲಿ ಮಾತ್ರ ಸಾಧ್ಯವಾಗಿಲ್ಲ. ಇನ್ನಾದರೂ ರಸ್ತೆ ಅಗಲೀಕರಣಕ್ಕೆ ಮುಂದಾಗಬೇಕು. ಇದು ಮಲೆನಾಡು ಪ್ರದೇಶವಾಗಿದ್ದರಿಂದ ಅತಿವೃಷ್ಟಿಯಿಂದ ರಸ್ತೆ ಕುಸಿಯದಂತೆ ವೈಜ್ಞಾನಿಕವಾಗಿ ಡಬಲ್ ರಸ್ತೆ ನಿರ್ಮಿಸಬೇಕು. ಇಲ್ಲವಾದರೆ ಎಲ್ಲಾ ಪ್ರಗತಿಪರ ಸಂಘಟನೆಗಳೊಂದಿಗೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *